ಡೇಟಾ ಪ್ರಿಯರಿಗೆ ಸಿಹಿಸುದ್ದಿ!..ನೀವು ಬೇಡ ಅಂದ್ರೂ, 5GB ಡೇಟಾ ಗ್ಯಾರಂಟಿ!
ವಿ ಟೆಲಿಕಾಂ ದೇಶದ ತೃತೀಯ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿದೆ. ವಿ ಟೆಲಿಕಾಂ ಅಧಿಕ ಚಂದಾದಾರರನ್ನು ಆಕರ್ಷಿಸಲು ಹಲವು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿಸಿದ್ದು, ಜಿಯೋ, ಏರ್‌ಟೆಲ್ ಟೆಲಿಕಾಂಗಳಿಗೆ ಸ್ಪರ್ಧೆ ಒಡ್ಡುವ ಯತ್ನ ನಡೆಸುತ್ತಾ ಸಾಗಿದೆ. ಇದೀಗ ವಿ ಟೆಲಿಕಾಂ 5GB ವರೆಗಿನ ಡೇಟಾವನ್ನು ಉಚಿತ ತಿಳಿಸಿದ್ದು, ಟೆಲಿಕಾಂ ವಲಯದಲ್ಲಿ ಅಚ್ಚರಿ ಮೂಡಿಸಿದೆ.
ಹೌದು, ವಿ ಟೆಲಿಕಾಂ ಬಳಕೆದಾರರಿಗೆ ಹೊಸ ರೀಚಾರ್ಜ್ ಕೊಡುಗೆಗಳನ್ನು ಪ್ರಕಟಿಸಿದೆ. ಗ್ರಾಹಕರು ಅಧಿಕೃತ ವಿ ಆಪ್ (Vi app) ಮೂಲಕ ಮಾಡಿದ ರೀಚಾರ್ಜ್‌ಗಳಲ್ಲಿ ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು. ಅಂದಹಾಗೆ ವಿ ಟೆಲಿಕಾಂ ಈ ಕೊಡುಗೆಯು 'ಮಹಾ ರೀಚಾರ್ಜ್‌ಗಳಿಗೆ' ಮಾತ್ರ ಅನ್ವಯಿಸುತ್ತದೆ ಎಂದು ತಿಳಿಸಿದೆ.

ಇನ್ನು ವಿ ಟೆಲಿಕಾಂ ತಿಳಿಸಿರುವ ಈ ಆಫರ್ ಸೀಮಿತ ಕೊಡುಗೆ ಅವಧಿಯದಾಗಿದ್ದು, ಈ ಕೊಡುಗೆಯ ಮುಕ್ತಾಯ ದಿನಾಂಕವನ್ನು ವಿ ಸಂಸ್ಥೆಯು ಬಹಿರಂಗಪಡಿಸಿಲ್ಲ. ಅಂದಹಾಗೆ ಈ ಕೊಡುಗೆಯನ್ನು ಸಂಸ್ಥೆಯು ಈ ಹಿಂದೆಯೂ ನೀಡಿತ್ತು. ಹಾಗಾದರೆ ಈ ಕೊಡುಗೆ ಬಗ್ಗೆ ಹಾಗೂ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಹೆಚ್ಚುವರಿ 5GB ಡೇಟಾ ಉಚಿತವಾಗಿ ಪಡೆಯುವುದು ಹೇಗೆ?
ವಿ ಟೆಲಿಕಾಂ ತನ್ನ ಬಳಕೆದಾರರಿಗೆ 199ರೂ ಮತ್ತು ಅದಕ್ಕಿಂತ ಹೆಚ್ಚಿನ ರೀಚಾರ್ಜ್‌ನಲ್ಲಿ ಹೆಚ್ಚುವರಿ ಡೇಟಾವನ್ನು ನೀಡುತ್ತದೆ. 199ರೂ ರಿಂದ 299 ರೂ. ಗಳ ನಡುವೆ ತಮ್ಮ ಸಂಖ್ಯೆಯನ್ನು ರೀಚಾರ್ಜ್ ಮಾಡುವವರು 2 GB ಹೆಚ್ಚುವರಿ ಡೇಟಾವನ್ನು ಪಡೆಯುತ್ತಾರೆ ಅದು ಮೂರು ದಿನಗಳವರೆಗೆ ಮಾನ್ಯವಾಗಿರುತ್ತದೆ.
ಹಾಗೆಯೇ ಬಳಕೆದಾರರು ತಮ್ಮ ಸಂಖ್ಯೆಯನ್ನು 299 ರೂ ಅಥವಾ ಅದಕ್ಕಿಂತ ಹೆಚ್ಚಿನ ರೀಚಾರ್ಜ್ ಮಾಡುವ ಮೂಲಕ 5GB ಹೆಚ್ಚುವರಿ ಡೇಟಾವನ್ನು ಪಡೆಯುತ್ತಾರೆ ಅದು ಸಹ ಮೂರು ದಿನಗಳವರೆಗೆ ಮಾನ್ಯವಾಗಿರುತ್ತದೆ. ವಿ ಅಪ್ಲಿಕೇಶನ್ ಮೂಲಕ ಮಾಡಿದ ರೀಚಾರ್ಜ್‌ಗಳಲ್ಲಿ ಮಾತ್ರ ಹೆಚ್ಚುವರಿ ಡೇಟಾವನ್ನು ಪಡೆಯಬಹುದು ಎಂಬುದನ್ನು ಗಮನಿಸಿಬೇಕಿದೆ.

ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು : ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದ್ದು, 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ.
ವಿ ಟೆಲಿಕಾಂ 601ರೂ. ಪ್ರಿಪೇಯ್ಡ್ ಪ್ಲಾನ್ ಪ್ರಯೋಜನಗಳು : ವಿ ಟೆಲಿಕಾಂನ 601ರೂ. ಪ್ರಿಪೇಯ್ಡ್ ಪ್ಲಾನ್ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ.


Click it and Unblock the Notifications








