Vi ಟೆಲಿಕಾಂ 299ರೂ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಡಬಲ್ ಡೇಟಾ!
ದೇಶದ ಟೆಲಿಕಾಂ ವಲಯದಲ್ಲಿ ವೊಡಾಫೋನ್-ಐಡಿಯಾ ಸಂಸ್ಥೆಗಳು ಜೊತೆಯಾಗಿ Vi ಬ್ರ್ಯಾಂಡ್‌ನಿಂದ ಗುರುತಿಸಿಕೊಂಡಿವೆ. ವೊಡಾಫೋನ್-ಐಡಿಯಾ ಟೆಲಿಕಾಂ ಜಿಯೋ ಹಾಗೂ ಏರ್‌ಟೆಲ್‌ಗಳಿಗೆ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಡೇಟಾ ಪ್ಲ್ಯಾನ್‌ಗಳನ್ನು ಹೊಂದಿವೆ. ಡೇಟಾ ಜೊತೆಗೆ ವಾಯಿಸ್ ಕರೆ, ಎಸ್‌ಎಮ್‌ಎಸ್, ಹಾಗೆಯೇ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯಗಳನ್ನು ಪಡೆದಿವೆ.

ಹೌದು, ವೊಡಾಫೋನ್ ಐಡಿಯಾ ಟೆಲಿಕಾಂ 299ರೂ, 449ರೂ ಹಾಗೂ 699ರೂ. ಪ್ರೀಪೇಯ್ಡ್ ಪ್ಲ್ಯಾನ್‌ಗಳಲ್ಲಿ ಡಬಲ್ ಡೇಟಾ ಕೊಡುಗೆ ನೀಡಿದೆ. ಹೀಗಾಗಿ ಈ ಪ್ರೀಪೇಯ್ಡ್ ಯೋಜನೆಗಳನ್ನು ರೀಚಾರ್ಜ್ ಮಾಡಿಸಿಕೊಳ್ಳುವ ಗ್ರಾಹಕರು ಪ್ರತಿದಿನ 2GB ಡೇಟಾ ಬದಲಾಗಿ 4GB ಡೇಟಾ ಪ್ರಯೋಜನ ಪಡೆಯುತ್ತಾರೆ. ಹಾಗೆಯೇ ಈ ಯೋಜನೆಗಳು ಭಿನ್ನ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿರುವ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಪ್ರಯೋಜನಗಳನ್ನು ಪಡೆದುಕೊಂಡಿವೆ. Vi ಟೆಲಿಕಾಂನ ಈ ಪ್ರೀಪೇಯಡ್ ಪ್ಲ್ಯಾನ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

Vi 299ರೂ. ಪ್ಲ್ಯಾನ್
ವೊಡಾಫೋನ್-ಐಡಿಯಾದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಇದ್ದು, ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Vi 499ರೂ. ಪ್ಲ್ಯಾನ್
ವೊಡಾಫೋನ್-ಐಡಿಯಾ 499ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಬದಲಾಗಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Vi 699ರೂ. ಪ್ಲ್ಯಾನ್
ವೊಡಾಫೋನ್-ಐಡಿಯಾ 699ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications




