ಅಧಿಕ ಡೇಟಾ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ಬೇಕಿದ್ರೆ, ಈ ಪ್ಲ್ಯಾನ್ ಸೂಪರ್!
ಟೆಲಿಕಾಂ ವಲಯದಲ್ಲಿ ಲೀಡಿಂಗ್ ನಲ್ಲಿ ಕಾಣಿಸಿಕೊಂಡಿರುವ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳಿಗೆ ವಿ ಟೆಲಿಕಾಂ (ವೊಡಾಫೋನ್-ಐಡಿಯಾ) ಸೆಡ್ಡು ಹೊಡೆಯುವಂತಹ ಪ್ರೀಪೇಯ್ಡ್ ಪ್ಲ್ಯಾನ್ ಗಳನ್ನು ಪರಿಚಯಿಸುತ್ತಾ ಮುನ್ನಡೆದಿದೆ. ಗ್ರಾಹಕರ ಸಂಖ್ಯೆಯನ್ನು ಹೆಚ್ಚಿನಿಸಿ ಕೊಳ್ಳಲು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋಜನ ಲಭ್ಯ ಮಾಡುತ್ತಿದೆ. ಆ ಪೈಕಿ ಅಧಿಕ ಡೇಟಾ ಪ್ರಯೋಜನದ ಜೊತೆಗೆ ದೀರ್ಘ ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆ ಗಳು ಹೆಚ್ಚು ಆಕರ್ಷಕವಾಗಿವೆ.

ಹೌದು, ವಿ ಟೆಲಿಕಾಂ (ವೊಡಾಫೋನ್-ಐಡಿಯಾ) ಭಿನ್ನ ಪ್ರಯೋಜನ ಗಳ ಯೋಜನೆ ಗಳ ಆಯ್ಕೆ ಹೊಂದಿದೆ. ಅವುಗಳಲ್ಲಿ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಪಡೆದಿವೆ. ಸಂಸ್ಥೆಯು ಅಧಿಕ ವ್ಯಾಲಿಡಿಟಿಯ ಪ್ರಯೋಜನ ಬಯಸುವ ಗ್ರಾಹಕರಿಗೆ ವಾರ್ಷಿಕ ಅವಧಿ ವ್ಯಾಲಿಡಿಟಿಯ 2595ರೂ. ಪ್ರೀಪೇಯ್ಡ್ ಯೋಜನೆಯ ಆಯ್ಕೆ ಲಭ್ಯ ಮಾಡಿದೆ. ಹಾಗಾದರೇ ವಿ ಟೆಲಿಕಾಂ ವಾರ್ಷಿಕ ವ್ಯಾಲಿಡಿಟಿಯ 2595ರೂ. ಪ್ರೀಪೇಯ್ಡ್ ಯೋಜನೆ ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 2,595ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರಿಪೇಯ್ಡ್ ಯೋಜನೆಯೊಂದಿಗೆ 2GB ದೈನಂದಿನ ಡೇಟಾ ಮತ್ತು ಅನಿಯಮಿತ ಕರೆಗಳನ್ನು ನೀಡುತ್ತದೆ. ಈ ಯೋಜನೆಯೊಂದಿಗೆ ವಾರಾಂತ್ಯದ ರೋಲ್‌ಓವರ್ ಡೇಟಾ ಪ್ರಯೋಜನಗಳನ್ನು ಯೋಜನೆ ನೀಡುತ್ತದೆ. ಯೋಜನೆಯು ದಿನಕ್ಕೆ 100 ಎಸ್‌ಎಂಎಸ್ ನೀಡುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಚಂದಾದಾರಿಕೆ ಸಹ ಲಭ್ಯವಾಗಲಿದೆ. ಹಾಗೆಯೇ ರಾತ್ರಿ 12am-6am ಅನಿಯಮಿತ ಡೇಟಾ ಬಳಕೆ ಮಾಡುವ ಆಯ್ಕೆ ಲಭ್ಯ.

ವಿ ಟೆಲಿಕಾಂ 2,399ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರಿಪೇಯ್ಡ್ ಯೋಜನೆಯು 1.5GB ದೈನಂದಿನ ಡೇಟಾವನ್ನು ಅನಿಯಮಿತ ಕರೆಗಳೊಂದಿಗೆ ನೀಡುತ್ತದೆ ಮತ್ತು 365 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಲಭ್ಯವಾಗಲಿದೆ. ಜೊತೆಗೆ ಆಲ್-ನೈಟ್ ಹೈಸ್ಪೀಡ್ ಡೇಟಾ ಮತ್ತು ವಾರಾಂತ್ಯದ ರೋಲ್‌ಓವರ್ ಡೇಟಾ ಪ್ರಯೋಜನಕ್ಕೂ ಪ್ರವೇಶವನ್ನು ನೀಡುತ್ತದೆ.

ವಿ ಟೆಲಿಕಾಂ 1,499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂ 1,499ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಒಟ್ಟು 3600 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ವಿ ಟೆಲಿಕಾಂ ಆಪ್ ಸೇವೆ ಲಭ್ಯ. ಹೆಚ್ಚಿನ ಡೇಟಾ ಅಗತ್ಯ ಇರದ ಆದರೆ ವಾರ್ಷಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಸೂಕ್ತ ಎನಿಸಲಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.


Click it and Unblock the Notifications








