ವಿ ಟೆಲಿಕಾಂನ 299ರೂ. ಪ್ಲ್ಯಾನ್, ಜಿಯೋದ 299ರೂ.ಗಿಂತ ಉತ್ತಮವೇ?
ಭಾರತೀಯ ಟೆಲಿಕಾಂ ವಲಯದಲ್ಲಿ ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರರಿಗೆ ಈಗಾಗಲೇ ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಗಮನ ಸೆಳೆದಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳ ಜೊತೆಗೆ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಆಕರ್ಷಕ ಎನಿಸಿವೆ. ಆ ಪೈಕಿ ಕಡಿಮೆ ದರದಲ್ಲಿ ಬಹುತೇಕ ಬಳಕೆದಾರರು 299ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಮನಸ್ಸು ಮಾಡುತ್ತಾರೆ. ಈ ದರದಲ್ಲಿ ಜಿಯೋಗಿಂತ ವಿ ಟೆಲಿಕಾಂ ಪ್ಲ್ಯಾನ್ ಉತ್ತಮವೇ?

ಹೌದು, ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು 299ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಆಕರ್ಷಕ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಸೌಲಭ್ಯಗಳು ಸಿಗಲಿವೆ. ಆದರೂ ಈ ಪ್ಲ್ಯಾನ್‌ಗಳಲ್ಲಿ ಕೆಲವು ಭಿನ್ನತೆಗಳನ್ನು ಗಮನಿಸಬಹುದು. ಹಾಗಾದರೇ ಈ ದರದಲ್ಲಿ ಜಿಯೋಗಿಂತ ವಿ ಟೆಲಿಕಾಂ ಪ್ಲ್ಯಾನ್ ಉತ್ತಮವೇ? ಈ ಪ್ಲ್ಯಾನ್‌ಗಳ ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 299ರೂ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳು, 2GB ವರೆಗೆ ಬ್ಯಾಕ್‌ಅಪ್ ಡೇಟಾ ಪ್ರಯೋಜನ ಸಿಗಲಿದೆ.

ಜಿಯೋದ 299ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.
ಯಾವುದು ಉತ್ತಮ?
ಜಿಯೋ ಮತ್ತು ವಿ ಟೆಲಿಕಾಂ 299ರೂ. ಪ್ರಿಪೇಯ್ಡ್ ಪ್ಲ್ಯಾನ್‌ಗಳು ಆಕರ್ಷಕ ಎನಿಸಿವೆ. ಅದಾಗ್ಯೂ ಅಧಿಕ ಡೇಟಾ ಬಯಸೋರಿಗೆ ಜಿಯೋ ಟೆಲಿಕಾಂನ ಯೋಜನೆ ಸೂಕ್ತ ಎನಿಸುತ್ತದೆ. ಇನ್ನು ಹೆಚ್ಚಿನ ಡೇಟಾ ಅಗತ್ಯ ಇಲ್ಲ ಎನ್ನುವ ಗ್ರಾಹಕರಿಗೆ ವಿ ಟೆಲಿಕಾಂನ ಯೋಜನೆಯು ಆಕರ್ಷಕ ಎನಿಸುತ್ತದೆ. ಇನ್ನು ಈ ಎರಡು ಟೆಲಿಕಾಂಗಳು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಹಾಗೆಯೇ ವಾಯಿಸ್ ಕರೆಯ ಸೌಲಭ್ಯ ಸಹ ಪಡೆದಿವೆ. ಹೀಗಾಗಿ ಡೇಟಾ ಪ್ರಯೋಜನದಲ್ಲಿ ಮಾತ್ರ ಭಿನ್ನತೆ ಇದೆ.
ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 719 ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.


Click it and Unblock the Notifications








