Home
ಸುದ್ದಿಜಾಲ

ಡೇಟಾ ಪ್ರಿಯರೇ ಗಮನಿಸಿ!..ಈ ಪ್ಲ್ಯಾನಿನಲ್ಲಿ 28 ದಿನಕ್ಕೆ, 112GB ಡೇಟಾ ಖಾತ್ರಿ!

ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಚಂದಾದಾರರಿಗೆ ಭಿನ್ನ ಶ್ರೇಣಿಯಲ್ಲಿ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಪರಿಚಯಿಸಿ ಟೆಲಿಕಾಂ ವಲಯದಲ್ಲಿ ಸದ್ದು ಮಾಡುತ್ತಿದೆ. ಮುಖ್ಯವಾಗಿ ವಿ ಟೆಲಿಕಾಂ ಕೆಲವು ಯೋಜನೆಗಳಲ್ಲಿ ಡಬಲ್ ಡೇಟಾ ಕೊಡುಗೆ ಪ್ರಯೋಜನ ನೀಡಿದ್ದು, ಇತರೆ ಟೆಲಿಕಾಂಗಳು ಕಂಗಾಲಾಗುವಂತೆ ಮಾಡಿದೆ. ಅಲ್ಲದೇ ಕಂಪನಿಯ ಬಹುತೇಕ ಪ್ರೀಪೇಯ್ಡ್‌ ಯೋಜನೆಗಳು ಅಧಿಕ ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ಹೆಚ್ಚುವರಿ ಸೌಲಭ್ಯಗಳನ್ನು ಸಹ ಪಡೆದಿದೆ. ಆ ಪೈಕಿ ಅಗ್ಗದ ಪ್ಲ್ಯಾನ್‌ನೊಂದು ಹೆಚ್ಚು ಗಮನ ಸೆಳೆದಿದೆ.

ಟೆಲಿಕಾಂ

ಹೌದು, ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ತನ್ನ ಚಂದಾದಾರರಿಗೆ ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಆ ಪೈಕಿ 28 ದಿನಗಳ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಯೊಂದರಲ್ಲಿ ಜಿಯೋ ಮತ್ತು ಏರ್‌ಟೆಲ್‌ ಟೆಲಿಕಾಂಗಳು ಹುಬ್ಬೇರಿಸುವಂತಹ ಪ್ರಯೋಜನ ನೀಡಿದೆ. ಅದುವೇ ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಯೋಜನೆ ಆಗಿದ್ದು, ಈ ಪ್ಲ್ಯಾನ್ ಬರೋಬ್ಬರಿ 112GB ಡೇಟಾ ಪ್ರಯೋಜನ ಹೊಂದಿದೆ. ಜೊತೆಗೆ ಅನಿಯಮಿತ ವಾಯಿಸ್‌ ಕರೆ ಸೌಲಭ್ಯ ಸಹ ಇದೆ. ಕಡಿಮೆ ಬೆಲೆಗೆ ಹೆಚ್ಚು ಡೇಟಾ ಬಯಸುವ ಗ್ರಾಹಕರಿಗೆ ಅದು ಅತ್ಯುತ್ತಮ ಎನಿಸಲಿದೆ. ಹಾಗಾದರೇ ವಿ ಟೆಲಿಕಾಂನ 299ರೂ. ಯೋಜನೆಯ ಒಟ್ಟಾರೇ ಪ್ರಯೋಜನಗಳೆನು?...ಇತರೆ ಆಕರ್ಷಕ ವಿ ಟೆಲಿಕಾಂನ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಇನ್ನು ಈ ಯೋಜನೆಯು ಡಬಲ್ ಡೇಟಾ ಆಫರ್‌ ಹೊಂದಿದ್ದು, ಈ ನಿಟ್ಟಿನಲ್ಲಿ ಹೆಚ್ಚುವರಿ 2GB ಡೇಟಾ ಸೇರಿ ಪ್ರತಿದಿನ ಒಟ್ಟು 4GB ಡೇಟಾ ಸಿಗುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 699ರೂ. ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ

Best Mobiles in India

English summary
Vi Rs 299 Plan Offers Daily 4GB Data With 28 Days Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+