ಈ ಪ್ಲ್ಯಾನ್‌ನಲ್ಲಿ ಉಚಿತ ಡೇಟಾ ಖಚಿತ!..ಒಂದು ವರ್ಷ ವ್ಯಾಲಿಡಿಟಿ ಗ್ಯಾರಂಟಿ!
ದೇಶದ ಟೆಲಿಕಾಂ ವಲಯದಲ್ಲಿ ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳು ಗ್ರಾಹಕರನ್ನು ಸೆಳೆಯಲು ಆಕರ್ಷಕ ಯೋಜನೆ ಪರಿಚಯಿಸುತ್ತ ಸಾಗಿವೆ. ಈ ಮೂರು ಟೆಲಿಕಾಂಗಳ ಬಹುತೇಕ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಪಡೆದಿವೆ. ಆ ಪೈಕಿ ವಿ ಟೆಲಿಕಾಂ ಕೆಲವು ಪ್ರೀಪೇಯ್ಡ್ ಯೋಜನೆಗಳು ಹೆಚ್ಚುವರಿ ಡೇಟಾ ಪ್ರಯೋಜನ ಪಡೆದಿದ್ದು, ಡೇಟಾ ಪ್ರಿಯರ ಗಮನ ಸೆಳೆದಿವೆ.

ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಯೋಜನೆಗಳು ಹೆಚ್ಚುವರಿ ಡೇಟಾ ಸೌಲಭ್ಯ ಪಡೆದಿವೆ. ಈ ಪ್ಲ್ಯಾನ್‌ಗಳಲ್ಲಿ ದೈನಂದಿನ ಡೇಟಾ ಜೊತೆಗೆ ಸಂಪೂರ್ಣ ಫ್ರೀ ಯಾಗಿ ಒಟ್ಟು 75GB ಬೋನಸ್ ಡೇಟಾ ಸಹ ಗ್ರಾಹಕರಿಗೆ ಸಿಗಲಿದೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೌಲಭ್ಯ ಸಹ ದೊರೆಯುತ್ತದೆ. ಹಾಗಾದರೇ ವಿ ಟೆಲಿಕಾಂನ ಬೋನಸ್ ಡೇಟಾ ಪ್ರಯೋಜನದ ಮೂರು ಪ್ರೀಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟ್‌ವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಈ ಗ್ರಾಹಕರಿಗೆ 75GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದ್ದು, ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.
ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.
ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 50 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.
ವಿ ಟೆಲಿಕಾಂ 601ರೂ. ಪ್ರಿಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ 601ರೂ. ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹಾಗೆಯೇ ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್ ಪ್ರಯೋಜನ ನೀಡಲಿದೆ. ಇನ್ನು ಈ ಹೆಚ್ಚುವರಿಯಾಗಿ 16GB ಡೇಟಾ ಸೌಲಭ್ಯ ಪಡೆದಿದೆ. ಜೊತೆಗೆ ವಿ ಆಪ್ಸ್ ಹಾಗೂ ಡೇಟಾ ರೋಲ್ ಓವರ್ ಸೌಲಭ್ಯ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನ್ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ.


Click it and Unblock the Notifications








