Home
ಸುದ್ದಿಜಾಲ

ವಿ ಟೆಲಿಕಾಂನ ಈ ಪ್ಲ್ಯಾನ್‌ನಲ್ಲಿ ವರ್ಷ ಪೂರ್ತಿ ಭರ್ಜರಿ ಡೇಟಾ ಪ್ರಯೋಜನ!

ವಿ ಟೆಲಿಕಾಂ (ವೊಡಾಫೋನ್‌ ಐಡಿಯಾ) ದೇಶದ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಕಾಣಿಸಿಕೊಂಡಿದೆ. ವಿ ಟೆಲಿಕಾಂ ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಮುಖ್ಯವಾಗಿ ಕೆಲವು ಯೋಜನೆಗಳಿಗೆ ಭರ್ಜರಿ ಡೇಟಾ ಕೊಡುಗೆ ನೀಡಿದೆ. ಹಾಗೆಯೇ ಇನ್ನು ಕೆಲವು ಯೋಜನೆಗಳಲ್ಲಿ ಅಧಿಕ ದೈನಂದಿನ ಡೇಟಾ ಪ್ರಯೋಜನ ಒದಗಿಸಿದೆ. ಈ ಮೂಲಕ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅದಾಗ್ಯೂ ವಿ ಟೆಲಿಕಾಂನ ದೀರ್ಘ ವ್ಯಾಲಿಡಿಟಿ ಅವಧಿಯ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ.

ವಿ ಟೆಲಿಕಾಂನ ಈ ಪ್ಲ್ಯಾನ್‌ನಲ್ಲಿ ವರ್ಷ ಪೂರ್ತಿ ಭರ್ಜರಿ ಡೇಟಾ ಪ್ರಯೋಜನ!

ಹೌದು, ವಿ ಟೆಲಿಕಾಂ ಅಲ್ಪಾವಧಿಯ ಯೋಜನೆಗಳ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿಯ ಆಯ್ಕೆಗಳನ್ನು ಹೊಂದಿದೆ. ಕೆಲವು ಬಳಕೆದಾರರು ಹೆಚ್ಚಿನ ಡೇಟಾ ಸೌಲಭ್ಯ ಬಯಸಿದರೇ, ಮತ್ತೆ ಕೆಲವು ಬಳಕೆದಾರರು ವಾರ್ಷಿಕ ಅವಧಿಯ ವ್ಯಾಲಿಡಿಟಿ ಯೋಜನೆಗಳನ್ನು ರೀಚಾರ್ಜ್ ಮಾಡಿಸಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ವಿ ಟೆಲಿಕಾಂ ಆಕರ್ಷಕ ವಾರ್ಷಿಕ ಯೋಜನೆಗಳ ಲಿಸ್ಟ್‌ ಹೊಂದಿದೆ. ಅವುಗಳಲ್ಲಿ 3099ರೂ. ಯೋಜನೆಯು ದೀರ್ಘಾವಧಿಯ ಯೋಜನೆಗಳಲ್ಲಿ ಗ್ರಾಹಕರ ಗಮನ ಸೆಳೆದಿದೆ. ಹಾಗಾದರೇ ವಿ ಟೆಲಿಕಾಂನ 3099ರೂ. ಯೋಜನೆಯ ಪ್ರಯೋಜನಗಳೆನು?...ಇತರೆ ವಾರ್ಷಿಕ ಅವಧಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ ಈ ಪ್ಲ್ಯಾನ್‌ನಲ್ಲಿ ವರ್ಷ ಪೂರ್ತಿ ಭರ್ಜರಿ ಡೇಟಾ ಪ್ರಯೋಜನ!

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

Best Mobiles in India

English summary
Vi Rs 3099 Prepaid Plan Offers Daily 2GB Data With 365 Days Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+