56 ದಿನ ವ್ಯಾಲಿಡಿಟಿಯ ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಫುಲ್ ಡೇಟಾ!
ಭಾರತದ ಮೂರನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಚಂದಾದಾರರಿಗೆ ಭಿನ್ನ ಶ್ರೇಣಿಯಲ್ಲಿ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಪರಿಚಯಿಸಿದೆ. ವಿ ಟೆಲಿಕಾಂ ಕೆಲವು ಯೋಜನೆಗಳಲ್ಲಿ ಡಬಲ್ ಡೇಟಾ ಕೊಡುಗೆ ಪ್ರಯೋಜನ ನೀಡಿದೆ. ಹಾಗೆಯೇ ಕಂಪನಿಯ ಬಹುತೇಕ ಪ್ರೀಪೇಯ್ಡ್ ಯೋಜನೆಗಳು ಪ್ರತಿದಿನ ಡೇಟಾ ಸೌಲಭ್ಯ ಒಳಗೊಂಡಿವೆ. ವಿ ಟೆಲಿಕಾಂ ಕೆಲವು ಪ್ಲ್ಯಾನ್‌ಗಳ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳಿಗೆ ಟಾಂಗ್ ಕೊಡುವಂತಿವೆ.

ಹೌದು, ವಿ ಟೆಲಿಕಾಂ ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಲಿಸ್ಟ್ ಒಳಗೊಂಡಿದೆ. ಆ ಪೈಕಿ 56 ದಿನಗಳ ವ್ಯಾಲಿಡಿಟಿ ಸೌಲಭ್ಯದ ಯೋಜನೆಯಲ್ಲಿ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳು ದಂಗಾಗುವಂತಹ ಸೌಲಭ್ಯಗಳನ್ನು ನೀಡಿದೆ. ವಿ ಟೆಲಿಕಾಂ ತನ್ನ 449ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಭರ್ಜರಿ ಡೇಟಾ ಪ್ರಯೋಜನ ನೀಡಿದ್ದು, ಈ ಯೋಜನೆ ರೀಚಾರ್ಜ್ ಮಾಡಿಸುವ ಗ್ರಾಹಕರಿಗೆ 56 ದಿನಗಳ ಕಾಲ ಡೇಟಾದ ಟೆನ್ಷನ್ ಇರೋದಿಲ್ಲ ಎಂದು ಹೇಳಬಹುದು. ಹಾಗಾದರೇ ವಿ ಟೆಲಿಕಾಂನ 449ರೂ. ಯೋಜನೆಯ ಪ್ರಯೋಜನಗಳೆನು?...ಇತರೆ ಆಕರ್ಷಕ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಇನ್ನು ಈ ಯೋಜನೆಯು ಡಬಲ್ ಡೇಟಾ ಆಫರ್ ಹೊಂದಿದ್ದು, ಈ ನಿಟ್ಟಿನಲ್ಲಿ ಹೆಚ್ಚುವರಿ 2GB ಡೇಟಾ ಸೇರಿ ಪ್ರತಿದಿನ ಒಟ್ಟು 4GB ಡೇಟಾ ಸಿಗುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಹಾಗೆಯೇ ವಿ ಟೆಲಿಕಾಂನ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಹೆಚ್ಚುವರಿ ಡೇಟಾ ಪ್ರಯೋಜನ ಪಡೆದಿದೆ. ಇದು ವೀಕೆಂಡ್ ಡಾಟಾ ರೋಲ್ ಓವರ್ ಮತ್ತು ಬಿಂಜ್ ಆಲ್ ನೈಟ್ ಆಫರ್‌ಗಳನ್ನು ಯೋಜನೆಯೊಂದಿಗೆ ಒದಗಿಸುತ್ತದೆ. ವೀಕೆಂಡ್ ಡೇಟಾ ರೋಲ್ ಓವರ್ ಆಫರ್ ಬಳಕೆದಾರರಿಗೆ ವಾರದ ದಿನಗಳಲ್ಲಿ (ಅಂದರೇ ಸೋಮವಾರದಿಂದ ಶುಕ್ರವಾರದವರೆಗೆ) ವೀಕೆಂಡ್ ವೇಳೆ (ಶನಿವಾರ ಮತ್ತು ರವಿವಾರ) ಎಲ್ಲಾ ಉಳಿದ ಡೇಟಾವನ್ನು ಬಳಕೆ ಮಾಡಲು ಅನುಮತಿಸುತ್ತದೆ.

ವಿ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 699ರೂ. ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.


Click it and Unblock the Notifications








