ಪ್ರತಿದಿನ 4GB ಡೇಟಾ ಅಗತ್ಯವೇ?..ಹಾಗಿದ್ರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಸೂಪರ್!
ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ ನಡುವೆ ನೇರ ಪೈಪೋಟಿ ಇದೆ. ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಮೂರು ಟೆಲಿಕಾಂ ಕಂಪನಿ ಗಳು ಆಕರ್ಷಕ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಆ ಪೈಕಿ ವಿ ಟೆಲಿಕಾಂನ ಕೆಲವು ಪ್ಲ್ಯಾನ್ ಸಖತ್ ಆಗಿವೆ.
ಹೌದು, ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಡೇಟಾ, ಬಿಗ್ ವ್ಯಾಲಿಡಿಟಿ, ಎಸ್‌ಎಮ್‌ಎಸ್ ಪ್ರಯೋಜನ ಹಾಗೂ ಅನಿಯಮಿತ ವಾಯಿಸ್ ಕರೆಗಳನ್ನು ಪಡೆದಿವೆ. ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ಜೊತೆಗೆ ಹೆಚ್ಚಿನ ಡೇಟಾ ಸೌಲಭ್ಯ ಪಡೆದಿರುವ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ. ಆ ಪೈಕಿ 475ರೂ. ಪ್ಲ್ಯಾನ್ ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ.

ವಿ ಟೆಲಿಕಾಂನ 475ರೂ. ಯೋಜನೆಯು ಪ್ರತಿದಿನ 4GB ಡೇಟಾ ಪ್ರಯೋಜನ ಪಡೆದಿದೆ. ಹಾಗೆಯೇ ವಿ 359ರೂ, ವಿ 499ರೂ ಹಾಗೂ ವಿ 601ರೂ. ಪ್ರೀಪೇಯ್ಡ್ ಪ್ಲ್ಯಾನ್‌ಗಳು ಸಹ ಅಧಿಕ ಡೇಟಾ ಪ್ರಯೋಜನಗಳೊಂದಿಗೆ ಗ್ರಾಹಕರ ಗಮನ ಸೆಳೆದಿದೆ. ಹಾಗಾದರೆ ಈ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿ ಟೆಲಿಕಾಂ 475ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 4 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೌಲಭ್ಯ ಲಭ್ಯವಾಗುತ್ತದೆ. ಈ ಪ್ಲ್ಯಾನ್ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಪಡೆದಿದೆ. ವಿ ಆಪ್ಸ್ ಪ್ರಯೋಜನ ಸಹ ಲಭ್ಯ.

ವಿ ಟೆಲಿಕಾಂ 359ರೂ. ಪ್ರಿಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂ 359ರೂ ಪ್ರಿಪೇಯ್ಡ್ ಪ್ಲಾನ್ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಇನ್ನು ಈ ಪ್ಲಾನ್‌ನಲ್ಲಿ ನಿಮಗೆ ಪ್ರತಿನಿತ್ಯ 3 GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ಕರೆ ಪ್ರಯೋಜನ ಹಾಗೂ ಡೈಲಿ 100 ಎಸ್‌ಎಂಎಸ್ ಪ್ರಯೋಜನ ಕೂಡ ಲಭ್ಯವಿದೆ. ಇದಲ್ಲದೆ ವಿ ಮೂವಿಸ್, ಲೈವ್‌ಟಿವಿ ಯಂತಹ ಪ್ರಯೋಜನಗಳನ್ನು ನೀಡಲಿದೆ. ಜೊತೆಗೆ ಡೇಟಾ ರೋಲ್‌ಓವರ್ ಸೌಲಭ್ಯವನ್ನು ಈ ಯೋಜನೆ ಒಳಗೊಂಡಿದೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಚಂದಾದಾರಿಕೆ ಲಭ್ಯ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯ ಗಳು ಲಭ್ಯ.

ವಿ ಟೆಲಿಕಾಂ 901ರೂ. ಪ್ರಿಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ವಿ ಟೆಲಿಕಾಂನ 901ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಅಲ್ಲದೇ ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್ ಪ್ಲ್ಯಾನ್ ಹೆಚ್ಚುವರಿಯಾಗಿ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದ್ದು ಜೊತೆಗೆ 48 GB ಡೇಟಾ ಪ್ರಯೋಜನ ಸಹ ಪಡೆದಿದೆ. ಹಾಗೆಯೇ ಜನಪ್ರಿಯ ವಿ ಆಪ್ಸ್ ಹಾಗೂ ಡೇಟಾ ರೋಲ್ ಓವರ್ ಸೌಲಭ್ಯ ಸಿಗಲಿದೆ.


Click it and Unblock the Notifications








