ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಸಿಗುತ್ತೆ 84GB ಡೇಟಾ ಜೊತೆಗೆ 16GB ಡೇಟಾ ಉಚಿತ!
ಭಾರತೀಯ ಟೆಲಿಕಾಂ ವಲಯದಲ್ಲಿ ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳು ಪೈಪೋಟಿಯಲ್ಲಿ ಮುನ್ನುಗ್ಗುತ್ತಿದ್ದು, ಕೆಲವು ಉಪಯುಕ್ತ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಆ ಪೈಕಿ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಯೋಜನೆಗಳು ಹೆಚ್ಚುವರಿಯಾಗಿ ಬೋನಸ್ ಡೇಟಾ ಪ್ರಯೋಜನ ಪಡೆದಿದ್ದು, ಜಿಯೋ, ಏರ್‌ಟೆಲ್‌ಗೆ ಸೆಡ್ಡು ಹೊಡೆಯುವ ಲಕ್ಷಣ ಪಡೆದಿದೆ.

ಹೌದು, ವಿ ಟೆಲಿಕಾಂ ಭಿನ್ನ ಡೇಟಾ ಸೌಲಭ್ಯದ ಪ್ರೀಪೇಯ್ಡ್ ಯೋಜನೆಗಳ ಲಿಸ್ಟ್ ಹೊಂದಿದ್ದು, ಆ ಪೈಕಿ ವಿ ಟೆಲಿಕಾಂನ 601ರೂ. ಯೋಜನೆಯು ಹೆಚ್ಚುವರಿ ಡೇಟಾ ಪಡೆದಿವೆ. ಈ ಯೋಜನೆಗಳಲ್ಲಿ ದೈನಂದಿನ ಡೇಟಾ ಜೊತೆಗೆ ಸಂಪೂರ್ಣ ಉಚಿತವಾಗಿ ಒಟ್ಟು 16GB ಬೋನಸ್ ಡೇಟಾ ಸಹ ಗ್ರಾಹಕರಿಗೆ ಸಿಗಲಿದೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೌಲಭ್ಯ ಸಹ ದೊರೆಯುತ್ತದೆ. ಹಾಗಾದರೇ ವಿ ಟೆಲಿಕಾಂನ 601ರೂ. ಪ್ಲ್ಯಾನ್ ಹಾಗೂ ಇತರೆ ಜನಪ್ರಿಯ ಪ್ರೀಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ 601ರೂ. ಪ್ರಿಪೇಯ್ಡ್ ಪ್ಲಾನ್ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದ್ದು, ಒಟ್ಟು ವ್ಯಾಲಿಡಿಟಿ ಅವಧಿಗೆ 84GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 16 GB ಡೇಟಾ ಸೌಲಭ್ಯ ಸಹ ಸಿಗಲಿದೆ. ಜೊತೆಗೆ ವಿ ಆಪ್ಸ್ ಹಾಗೂ ಡೇಟಾ ರೋಲ್ ಓವರ್ ಸೌಲಭ್ಯ ಸಿಗಲಿದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದ್ದು, ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.


Click it and Unblock the Notifications








