ಗ್ರಾಹಕರೇ, ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ 77 ದಿನಗಳ ವ್ಯಾಲಿಡಿಟಿ ಲಭ್ಯ!..ಪ್ಲ್ಯಾನ್ ಬೆಲೆ ಎಷ್ಟು?
ದೇಶದ ಖಾಸಗಿ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗೆ ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಯಲ್ಲಿ ಏರಿಕೆ ಮಾಡಿದ್ದು, ಗ್ರಾಹಕರಿಗೆ ಶಾಕ್ ನೀಡಿವೆ. ಆ ಪೈಕಿ ತೃತೀಯ ದೊಡ್ಡ ಟೆಲಿಕಾಂ ಎನಿಸಿರುವ ವಿ ಟೆಲಿಕಾಂ ಕೂಡಾ ದರ ಹೆಚ್ಚಳ ಮಾಡಿದೆ. ಇನ್ನು ವಿ ಟೆಲಿಕಾಂ ಬಹುತೇಕ ಪ್ರೀಪೇಯ್ಡ್ ಪ್ಲ್ಯಾನ್‌ಗಳು ದೈನಂದಿನ ಡೇಟಾ ಸೌಲಭ್ಯದ ಜೊತೆಗೆ ಬಿಗ್ ವ್ಯಾಲಿಡಿಟಿ ಸೌಲಭ್ಯ ಕೂಡಾ ಪಡೆದಿವೆ. ಆ ಪೈಕಿ ಸಂಸ್ಥೆಯ ಕೆಲವು ರೀಚಾರ್ಜ್ ಯೋಜನೆಗಳು ಗ್ರಾಹಕರಿಗೆ ಅತ್ಯುತ್ತಮ ಎನಿಸಿವೆ. ಅವುಗಳಲ್ಲಿ ಈ ಒಂದು ಪ್ಲ್ಯಾನ್ ಬೊಂಬಾಟ್ ಆಗಿದೆ.
ಹೌದು, ವಿ ಟೆಲಿಕಾಂನ ರೀಚಾರ್ಜ್ ಯೋಜನೆಗಳ ಲಿಸ್ಟ್‌ನಲ್ಲಿ 799ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಉತ್ತಮ ಪ್ಲ್ಯಾನ್‌ಗಳಲ್ಲಿ ಒಂದಾಗಿ ಕಾಣಿಸಿಕೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ ಜೊತೆಗೆ ವಾಯಿಸ್ ಕರೆಯ ಸೌಲಭ್ಯ ಗ್ರಾಹಕರಿಗೆ ಸಿಗಲಿದೆ. ಹಾಗಾದರೇ ವಿ ಟೆಲಿಕಾಂನ 799ರೂ. ಪ್ರೀಪೇಯ್ಡ್ ಪ್ಲ್ಯಾನಿನ ಇತರೆ ಸೌಲಭ್ಯಗಳೆನು ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂನ 799ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 799ರೂ. ರೀಚಾರ್ಜ್ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಸೌಲಭ್ಯ ಅನ್ನು ಪಡೆದಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಪ್ಲ್ಯಾನ್ ಹೆಚ್ಚುವರಿಯಾಗಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯ.
ವಿ ಟೆಲಿಕಾಂನ 579ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 579 ರೂ. ರೀಚಾರ್ಜ್ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಅನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಹೆಚ್ಚುವರಿಯಾಗಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಸಹ ಲಭ್ಯ.
ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 479 ರೂ. ರೀಚಾರ್ಜ್ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಸೌಲಭ್ಯ ಅನ್ನು ಪಡೆದಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಹೆಚ್ಚುವರಿಯಾಗಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಕೂಡಾ ಸಿಗಲಿದೆ.
ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 719 ರೂ. ರೀಚಾರ್ಜ್ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 65 ದಿನಗಳ ವ್ಯಾಲಿಡಿಟಿ ಸೌಲಭ್ಯ ಅನ್ನು ಪಡೆದಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಪ್ಲ್ಯಾನ್ ಹೆಚ್ಚುವರಿಯಾಗಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯ.


Click it and Unblock the Notifications