Home
ಸುದ್ದಿಜಾಲ

ಈ ಪ್ಲ್ಯಾನ್‌ನಲ್ಲಿ ಉಚಿತವಾಗಿ ಎಷ್ಟು ಡೇಟಾ ಸಿಗುತ್ತೆ ಅಂತ ತಿಳಿದರೆ ಅಚ್ಚರಿ ಪಡ್ತೀರಾ!

ದೇಶದ ಟೆಲಿಕಾಂ ವಲಯದಲ್ಲಿ ಭಾರ್ತಿ ಏರ್‌ಟೆಲ್‌, ಜಿಯೋ ಮತ್ತು ವಿ ಟೆಲಿಕಾಂಗಳು ಒಂದಕ್ಕೊಂದು ಪೈಪೋಟಿಯಲ್ಲಿ ಸಾಗಿವೆ. ಆ ಪೈಕಿ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ವಿ ಟೆಲಿಕಾಂ (Vi Telecom) ನ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಬೋನಸ್‌ ಡೇಟಾ ಪ್ರಯೋಜನ ಪಡೆದಿದ್ದು, ಜಿಯೋ, ಏರ್‌ಟೆಲ್‌ಗೆ ಟಕ್ಕರ್ ನೀಡುವಂತಿವೆ.

ಯೋಜನೆಯಲ್ಲಿ

ಹೌದು, ವಿ ಟೆಲಿಕಾಂ ಭಿನ್ನ ಡೇಟಾ ಸೌಲಭ್ಯದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಹೊಂದಿದ್ದು, ಆ ಪೈಕಿ ವಿ ಟೆಲಿಕಾಂ 901ರೂ. ಯೋಜನೆ ಹೆಚ್ಚುವರಿ ಡೇಟಾ ಪಡೆದಿದೆ.. ಈ ಯೋಜನೆಯಲ್ಲಿ ದೈನಂದಿನ ಡೇಟಾ ಜೊತೆಗೆ ಸಂಪೂರ್ಣ ಉಚಿತವಾಗಿ ಒಟ್ಟು 48GB ಬೋನಸ್‌ ಡೇಟಾ ಸಹ ಗ್ರಾಹಕರಿಗೆ ಸಿಗಲಿದೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಸೌಲಭ್ಯ ಸಹ ದೊರೆಯುತ್ತದೆ. ಹಾಗಾದರೇ ವಿ ಟೆಲಿಕಾಂನ ಆ ಪ್ಲ್ಯಾನಿನ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ಜನಪ್ರಿಯ ಪ್ರೀಪೇಯ್ಡ್‌ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಪ್ರಯೋಜನಗಳು

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಪ್ರಯೋಜನಗಳು

ವಿ ಟೆಲಿಕಾಂನ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 16GB ಡೇಟಾ ಸೌಲಭ್ಯ ಪಡೆದಿದೆ. ಜೊತೆಗೆ ವಿ ಆಪ್ಸ್‌ ಹಾಗೂ ಡೇಟಾ ರೋಲ್‌ ಓವರ್‌ ಸೌಲಭ್ಯ ಸಿಗಲಿದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 50 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

Best Mobiles in India

English summary
Vi Rs 901 Prepaid Plan offers 48GB Extra Data: Check Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+