ವಿ ಟೆಲಿಕಾಂನಿಂದ ನಾಲ್ಕು ಹೊಸ ಪ್ಲ್ಯಾನ್ ಪರಿಚಯ!..ಪ್ರಯೋಜನಗಳೆನು?
ಜನಪ್ರಿಯ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಇತ್ತೀಚಿಗೆ ತನ್ನ ಪ್ರಿಪೇಯ್ಡ್ ಯೋಜನೆಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ. ವಿ ಟೆಲಿಕಾಂನ ಬಹುತೇಕ ಯೋಜನೆಗಳು ಡೇಟಾ ಪ್ರಯೋಜನ ಪಡೆದಿದ್ದು, ಗ್ರಾಹಕರನ್ನು ಸೆಳೆದಿವೆ. ಇದೀಗ ವಿ ಟೆಲಿಕಾಂ ನೂತನವಾಗಿ ಮತ್ತೆ ನಾಲ್ಕು ಪ್ರಿಪೇಯ್ಡ್ ಯೋಜನೆಗಳನ್ನು ತನ್ನ ಲಿಸ್ಟ್‌ಗೆ ಸೇರ್ಪಡೆ ಮಾಡಿಕೊಂಡಿದೆ. ಅವುಗಳು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಭಿನ್ನ ಪ್ರಯೋಜನ ಪಡೆದಿವೆ.

ಹೌದು, ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಹೊಸದಾಗಿ 155ರೂ, 239ರೂ, 666ರೂ ಮತ್ತು 699ರೂ. ಪ್ರಿಪೇಯ್ಡ್ ಯೋಜನೆಗಳನ್ನು ಪರಿಚಯಿಸಿದೆ. ಇನ್ನು ಈ ಯೋಜನೆಗಳು ಈಗಾಗಲೇ ವಿ ವೆಬ್‌ಸೈಟ್‌ನಲ್ಲಿ ಲೈವ್ ಆಗಿವೆ. 250ರೂ. ಒಳಗೆ ಬೆಸ್ಟ್ ಪ್ಲ್ಯಾನ್ ಹುಡುಕುವ ಗ್ರಾಹಕರಿಗೆ 155ರೂ, 239ರೂ ಯೋಜನೆಗಳು ಸೂಕ್ತ ಎನಿಸಲಿವೆ. ಹಾಗೆಯೇ 700ರೂ. ಒಳಗೆ ಉತ್ತಮ ಯೋಜನೆ ರೀಚಾರ್ಜ್ ಮಾಡುವ ಗ್ರಾಹಕರಿಗೆ ವಿ ಟೆಲಿಕಾಂನ 666ರೂ ಮತ್ತು 699ರೂ. ಪ್ರಿಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಲಿವೆ. ಹಾಗಾದರೇ ವಿ ಟೆಲಿಕಾಂನ 155ರೂ, 239ರೂ, 666ರೂ ಮತ್ತು 699ರೂ. ಪ್ರಿಪೇಯ್ಡ್ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 155ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 155ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. 300 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ.

ವಿ ಟೆಲಿಕಾಂನ 239ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 239ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಜೊತೆಗೆ ವಿ ಆಪ್ಸ್ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂನ 666ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂನ 699ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯವಾಗಲಿದೆ.

ಇತರೆ ಯೋಜನೆಗಳು
ವಿ ಟೆಲಿಕಾಂ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ 16GB ಡೇಟಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ, ವಿ ಆಪ್ಸ್, ವಿಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ 48GB ಡೇಟಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ, ವಿ ಆಪ್ಸ್, ವಿಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂ 475ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂ 475ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ.


Click it and Unblock the Notifications








