ಗ್ರಾಹಕರೇ ಈ ಕಡಿಮೆ ಬೆಲೆಯ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೂ, ಉಚಿತ ಡೇಟಾ ಲಭ್ಯ!

|

ದೇಶದ ಟೆಲಿಕಾಂ ವಲಯದಲ್ಲಿ ಮೂರನೇ ದೊಡ್ಡ ಟೆಲಿಕಾಂ ಆಪರೇಟರ್ ಆಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ (Vi) ತನ್ನ ಗ್ರಾಹಕರಿಗೆ ಹಲವು ಭಿನ್ನ ಪ್ರೀಪೇಯ್ಡ್‌ ಪ್ಲ್ಯಾನ್‌ ಆಯ್ಕೆ ಲಭ್ಯ ಮಾಡಿದೆ. ಆ ಪೈಕಿ ವಿ ಟೆಲಿಕಾಂನ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಇದಲ್ಲದೆ ವಿ ಟೆಲಿಕಾಂನ ಇನ್ನು ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳಲ್ಲಿ ಗ್ರಾಹಕರು ಬೇಡಾ ಅಂದರೂ, ಉಚಿತ ಹೆಚ್ಚುವರಿ ಡೇಟಾ ಸಿಗುತ್ತೆ.!

ಪ್ರೀಪೇಯ್ಡ್‌ ಪ್ಲ್ಯಾನ್‌

ಹೌದು, ವಿ ಟೆಲಿಕಾಂ ತನ್ನ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿ ಡೇಟಾ ಪ್ರಯೋಜನ ನೀಡಿದೆ. ಇನ್ನು ವಿ ಟೆಲಿಕಾಂನ ಈ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ, ಎಸ್‌ಎಮ್‌ಎಸ್‌ ಪ್ರಯೋಜನ ಅಲ್ಲದೇ ವಿ ಆಪ್ಸ್‌ ಸೌಲಭ್ಯಗಳನ್ನು ಒಳಗೊಂಡಿರುವುದು ಗ್ರಾಹಕರಿಗೆ ಆಕರ್ಷಕ ಎನಿಸಿದೆ. 299ರೂ. ಕ್ಕಿಂತ ಅಧಿಕ ಮೊತ್ತದ ರೀಚಾರ್ಜ್ ಮಾಡುವ ಗ್ರಾಹಕರಿಗೆ 5GB ಹೆಚ್ಚುವರಿ ಡೇಟಾ ಪ್ರಯೋಜನ ಸಿಗಲಿದೆ.

ವಿ ಟೆಲಿಕಾಂ

ಅದೇ ರೀತಿ ರಿಪಬ್ಲಿಕ್‌ ಡೇ ಪ್ರಯುಕ್ತ ವಿ ಟೆಲಿಕಾಂ 199ರೂ. ಗಿಂತ ಅಧಿಕ ಮೊತ್ತದ ರೀಚಾರ್ಜ್ ಮಾಡುವ ಗ್ರಾಹಕರಿಗೆ ಹೆಚ್ಚುವರಿಯಾಗಿ 2GB ಡೇಟಾ ಪ್ರಯೋಜನ ತಿಳಿಸಿದೆ. ಇನ್ನು ಈ ಕೊಡುಗೆಯ ಪ್ರಯೋಜನ ಪಡೆಯಲು ಗ್ರಾಹಕರು ಅಧಿಕೃತ ವಿ ಆಪ್‌ (Vi app) ಮೂಲಕ ರೀಚಾರ್ಜ್ ಮಾಡಬೇಕಿರುತ್ತದೆ. ಈ ಆಫರ್ ಇದೇ ಜ.26 ರಿಂದ ಫೆ.5 ರ ವರೆಗೂ ಮಾತ್ರ ಲಭ್ಯ ಇರಲಿದೆ. ಹಾಗಾದರೆ ಹೆಚ್ಚುವರಿ ಡೇಟಾ ಪ್ರಯೋಜನ ಪಡೆದ ವಿ ಟೆಲಿಕಾಂನ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ 199ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನ

ವಿ 199ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನ

ವಿ ಟೆಲಿಕಾಂನ 199ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಒಟ್ಟು 18 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಪ್ರತಿದಿನ 1GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯಲಿವೆ.

ವಿ 209ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನ

ವಿ 209ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನ

ವಿ ಟೆಲಿಕಾಂನ 209ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಒಟ್ಟಾರೇ ಗ್ರಾಹಕರಿಗೆ 4GB ಡೇಟಾ ಸೌಲಭ್ಯ ಸಿಗಲಿದೆ. ಜೊತೆಗೆ ಕೊಡುಗೆಯಲ್ಲಿ 2GB ಹೆಚ್ಚುವರಿಯಾಗಿ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯಲಿವೆ.

ವಿ 269ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನ

ವಿ 269ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನ

ವಿ ಟೆಲಿಕಾಂನ 269ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಪ್ರತಿದಿನ ಗ್ರಾಹಕರಿಗೆ 1GB ಡೇಟಾ ಸೌಲಭ್ಯ ಸಿಗಲಿದೆ. ಜೊತೆಗೆ ಕೊಡುಗೆಯಲ್ಲಿ 2GB ಹೆಚ್ಚುವರಿಯಾಗಿ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯಲಿವೆ.

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನ

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನ

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಪ್ರತಿದಿನ ಗ್ರಾಹಕರಿಗೆ 1.5GB ಡೇಟಾ ಸೌಲಭ್ಯ ಸಿಗಲಿದೆ. ಜೊತೆಗೆ ಕೊಡುಗೆಯಲ್ಲಿ 2GB ಹೆಚ್ಚುವರಿಯಾಗಿ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯಲಿವೆ.

Best Mobiles in India

English summary
Vi telecom offers up to 5GB additional data on these popular prepaid plans. details in kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X