Home
ಸುದ್ದಿಜಾಲ

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ 1GB ಡೇಟಾಗೆ ತಗಲುವ ಶುಲ್ಕ ಅತೀ ಕಡಿಮೆ!

ದೇಶದ ಟೆಲಿಕಾಂ ವಲಯದಲ್ಲಿ ವಿ ಟೆಲಿಕಾಂ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್‌ ಜಿಯೋ ಮತ್ತು ಏರ್‌ಟೆಲ್‌ ಟೆಲಿಕಾಂಗಳಿಗೆ ನೇಋ ಪೈಪೋಟಿ ನೀಡುತ್ತಾ ಸಾಗಿದೆ. ವಿ ಟೆಲಿಕಾಂನ ಬಹುತೇಕ ಯೋಜನೆಗಳು ಅಧಿಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿವೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಒಳಗೊಂಡಿವೆ. ಇನ್ನು ಕೆಲವು ಪ್ಲ್ಯಾನ್‌ಗಳು ಡಬಲ್ ಡೇಟಾ ಆಫರ್ ಪಡೆದಿವೆ. ಆದರೆ ವಿ ಟೆಲಿಕಾಂನಲ್ಲಿ 1GB ಡೇಟಾ ಬರೀ 2.08ರೂ. ಶುಲ್ಕ ತಗಲುವ ಯೋಜನೆ ಸಹ ಇದೆ.

ಟೆಲಿಕಾಂ

ಹೌದು, ವಿ ಟೆಲಿಕಾಂ(ವೊಡಾಫೋನ್-ಐಡಿಯಾ) ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳಲ್ಲಿ ಡಬಲ್‌ ಡೇಟಾ ಕೊಡುಗೆ ಮುಂದುವರಿಸಿದೆ. ಆ ಪೈಕಿ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಹೆಚ್ಚು ಗಮನಾರ್ಹವಾದ ಪ್ರಯೋಜನಗಳನ್ನು ಒಳಗೊಂಡಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಒಟ್ಟು 336GB ಡೇಟಾ ಪ್ರಯೋಜನ ಸಿಗಲಿದೆ. ಅಂದರೇ ಈ ಯೋಜನೆಯ 2.08ರೂ.ಗೆ 1GB ಡೇಟಾ ದೊರೆತಂತೆ ಆಗುತ್ತದೆ. ವಿ ಟೆಲಿಕಾಂನ ಈ ಯೋಜನೆಯ ಒಟ್ಟಾರೇ ಪ್ರಯೋಜನದ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 699ರೂ. ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಹಾಗೂ ಜಿಯೋದಿಂದ ಇತರೆ ನೆಟ್‌ವರ್ಕ್‌ಗಳಿಗೂ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದೆ. ಹಾಗೆಯೇ ಹೆಚ್ಚುವರಿಯಾಗಿ ಕೆಲವು ಆಪ್‌ ಸೇವೆಗಳು ದೊರೆಯಲಿವೆ. ಈ ಯೋಜನೆಯಲ್ಲಿ ಒಟ್ಟಾರೇ 168GB ಡೇಟಾ ಪ್ರಯೋಜನ ಸಿಗಲಿದೆ. 1GB ಡೇಟಾಗೆ ತಗಲುವ ಶುಲ್ಕ 3.56ರೂ. ಆಗಿದೆ.

ವಿ ಟೆಲಿಕಾಂ 499ರೂ. ಪ್ಲ್ಯಾನ್

ವಿ ಟೆಲಿಕಾಂ 499ರೂ. ಪ್ಲ್ಯಾನ್

ವಿ ಟೆಲಿಕಾಂನ 499ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 299ರೂ. ಪ್ಲ್ಯಾನ್

ವಿ ಟೆಲಿಕಾಂ 299ರೂ. ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Best Mobiles in India

English summary
Vodafone Idea (Vi) has a prepaid plan which offers 1GB of data only for Rs 2.08 only along with unlimited voice calling and 100 SMS/day benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+