ಡೈಲಿ 3GB ಡೇಟಾ ಮತ್ತು ಅಧಿಕ ವ್ಯಾಲಿಡಿಟಿ ಅಗತ್ಯವೇ?..ಹಾಗಿದ್ರೆ ಈ ಪ್ಲ್ಯಾನ್ ಬೆಸ್ಟ್!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಬಿಎಸ್‌ಎನ್‌ಎಲ್ ಸೇರಿದಂತೆ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ ನಡುವೆ ಪೈಪೋಟಿ ಇದೆ. ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟೆಲಿಕಾಂ ಕಂಪನಿಗಳು ಆಕರ್ಷಕ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸುತ್ತ ಸಾಗಿವೆ. ಆ ಪೈಕಿ ವಿ ಟೆಲಿಕಾಂ (ವೊಡಾಫೋನ್- ಐಡಿಯಾ) ಸಹ ಹಿಂದೆ ಬಿದ್ದಿಲ್ಲ. ಈ ಟೆಲಿಕಾಂ ಭರ್ಜರಿ ಡೇಟಾ, ವ್ಯಾಲಿಡಿಟಿ ಹಾಗೂ ವಾಯಿಸ್ ಕರೆಯ ಯೋಜನೆಗಳ ಆಯ್ಕೆ ಹೊಂದಿದೆ. ಅವುಗಳಲ್ಲಿ ಅಧಿಕ ಡೇಟಾದ ವಿ 601ರೂ. ಯೋಜನೆ ಹೆಚ್ಚು ಗಮನ ಸೆಳೆದಿದೆ.

ಹೌದು, ವಿ ಟೆಲಿಕಾಂ ಕೆಲವು ಯೋಜನೆಗಳು ಆಕರ್ಷಕ ಅನಿಸಿವೆ. ಆ ಪೈಕಿ ವಿ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಂದಾಗಿದೆ. ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ಯೋಗ್ಯ ಎನಿಸಲಿದೆ. ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯಲಿದೆ ಹಾಗೂ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಅಧಿಕ ವ್ಯಾಲಿಡಿಟಿಯ ಸೌಲಭ್ಯವು ಲಭ್ಯವಾಗಲಿದೆ. ಹಾಗಾದರೇ ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್ ಯೋಜನೆ ಇತರೆ ಪ್ರಯೋಜನಗಳೇನು? ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 401ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.


Click it and Unblock the Notifications








