ವಿ ಟೆಲಿಕಾಂನ 699ರೂ. ಪ್ಲ್ಯಾನಿನಲ್ಲಿ ದಿನವು 4GB ಡೇಟಾ; ರೀಚಾರ್ಜ್‌ಗೆ ಯೋಗ್ಯವೇ?

|

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ವೊಡಾಫೋನ್-ಐಡಿಯಾ(ವಿ) ಜನಪ್ರಿಯ ಜಿಯೋ, ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಸ್ಪರ್ಧೆ ನೀಡಿತ್ತಾ ಸಾಗಿದ್ದು, ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಮುಖ್ಯವಾಗಿ ದೈನಂದಿನ ಡೇಟಾ, ಅನಿಯಮಿತ ವಾಯಿಸ್‌ ಕರೆ, ದೀರ್ಘಾವಧಿಯ ವ್ಯಾಲಿಡಿಟಿ ಆಯ್ಕೆಗಳು ಹೆಚ್ಚು ಗಮನ ಸೆಳೆದಿವೆ. ಆ ಪೈಕಿ ವಿ 699ರೂ. ಪ್ಲ್ಯಾನ್‌ ಗ್ರಾಹಕರನ್ನು ಅಟ್ರ್ಯಾಕ್ಟ್‌ ಮಾಡಿದೆ.

ರೀಚಾರ್ಜ್‌

ವಿ ಟೆಲಿಕಾಂನ ಜನಪ್ರಿಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ಗಳಲ್ಲಿ 699ರೂ. ಪ್ಲ್ಯಾನ್ ಒಂದಾಗಿದೆ. ಈ ಯೋಜನೆಯು ಡೈಲಿ ಡೇಟಾ ಸೌಲಭ್ಯ, ಬಿಗ್ ವ್ಯಾಲಿಡಿಟಿ, ಎಸ್‌ಎಮ್‌ಎಸ್‌ ಸೇವೆ ಹಾಗೂ ಅನಿಯಮಿತ ಕರೆಗಳ ಪ್ರಯೋಜನಗಳ ಪ್ಯಾಕೇಜ್‌ ಹೊಂದಿದೆ. ಸದ್ಯ ಈ ಯೋಜನೆಯಲ್ಲಿ ಡಬಲ್‌ ಡೇಟಾ ಕೊಡುಗೆಯು ಲಭ್ಯ ಇದ್ದು, ಹೀಗಾಗಿ ಪ್ರತಿದಿನ 4GB ಡೇಟಾ ಸಿಗಲಿದೆ. ಹಾಗಾದರೇ ವಿ ಟೆಲಿಕಾಂನ 699ರೂ. ಪ್ಲ್ಯಾನ್‌ ರೀಚಾರ್ಜ್‌ ಮಾಡಿಸಲು ಯೋಗ್ಯವೇ?..ಈ ಯೋಜನೆಯ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವೊಡಾಫೋನ್-ಐಡಿಯಾ 699ರೂ. ಪ್ಲ್ಯಾನ್

ವೊಡಾಫೋನ್-ಐಡಿಯಾ 699ರೂ. ಪ್ಲ್ಯಾನ್

ವಿ ಟೆಲಿಕಾಂನ 699ರೂ. ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ವಿ ಟೆಲಿಕಾಂನ ಇತರೆ ಡಬಲ್‌ ಡೇಟಾ ಯೋಜನೆಗಳ ಬಗ್ಗೆ ಮುಂದೆ ಓದಿರಿ.

ವೊಡಾಫೋನ್-ಐಡಿಯಾ 499ರೂ. ಪ್ಲ್ಯಾನ್

ವೊಡಾಫೋನ್-ಐಡಿಯಾ 499ರೂ. ಪ್ಲ್ಯಾನ್

ವಿ ಟೆಲಿಕಾಂನ 499ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್-ಐಡಿಯಾ 299ರೂ. ಪ್ಲ್ಯಾನ್

ವೊಡಾಫೋನ್-ಐಡಿಯಾ 299ರೂ. ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Best Mobiles in India

English summary
VI Telecom Rs 401 Prepaid Plan Offers Daily 4GB Data and 84 days validity.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X