ಚಂದಾದಾರರಿಗೆ ಬಿಗ್ ಶಾಕ್ ನೀಡಿದ 'ವಿ ಟೆಲಿಕಾಂ'; ಈ ಬೆಸ್ಟ್ ಆಫರ್ ಇನ್ನಿಲ್ಲ!
ಜನಪ್ರಿಯ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಹಲವು ಆಕರ್ಷಕ ಪ್ರೀಪೇಯ್ಡ್ ಯೋಜನಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಅಧಿಕ ಡೇಟಾ ಪ್ರಯೋಜನ ನೀಡುವ ಮೂಲಕ ಜಿಯೋ ಟೆಲಿಕಾಂಗೆ ನೇರ ಟಾಂಗ್ ನೀಡಿತ್ತಾ ಸಾಗಿದೆ. ಮುಖ್ಯವಾಗಿ ವಿ ಟೆಲಿಕಾಂನ ತನ್ನ 299ರೂ, 499ರೂ ಮತ್ತು 699ರೂ. ಪ್ರೀಪೇಯ್ಡ್ ಯೋಜನಗಳು ಡಬಲ್ ಡೇಟಾ ಪ್ರಯೋಜನ ನೀಡಿ, ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿತ್ತು. ಆದ್ರೆ ಇದೀಗ ವಿ ಟೆಲಿಕಾಂ ಚಂದಾದಾರರಿಗೆ ಭಾರೀ ಶಾಕಿಂಗ್ ಸುದ್ದಿ ಹೊರಹಾಕಿದೆ.

ಹೌದು, ವಿ ಟೆಲಿಕಾಂ (ವೊಡಾಫೋನ್ ಐಡಿಯಾ) 299ರೂ, 499ರೂ ಮತ್ತು 699ರೂ. ಈ ಮೂರು ಪ್ರೀಪೇಯ್ಡ್ ಯೋಜನೆಗಳಲ್ಲಿ ಈಗ ಡಬಲ್ ಡೇಟಾ ಕೊಡುಗೆಯನ್ನು ನಿಲ್ಲಿಸಿದೆ. ಪ್ರಸ್ತುತ ತೆಲಂಗಾಣ ಮತ್ತು ಆಂಧ್ರಪ್ರದೇಶ ಟೆಲಿಕಾಂ ಸರ್ಕಲ್‌ಗಳ ವ್ಯಾಪ್ತಿಯಲ್ಲಿ ಮಾತ್ರ ಡಬಲ್ ಡೇಟಾ ಆಫರ್ ನಿಲ್ಲಿಸಲಾಗಿದ್ದು, ಉಳಿದ ಇತರೆ ದೇಶದ ಎಲ್ಲಾ ಟೆಲಿಕಾಂ ಸರ್ಕಲ್‌ಗಳಲ್ಲಿ ಡಬಲ್ ಡೇಟಾ ಕೊಡುಗೆ ಚಾಲ್ತಿ ಇದೆ. ಈ ಮೂರು ಯೋಜನೆಗಳು ಆಫರ್‌ನಲ್ಲಿ ಪ್ರತಿದಿನ 4GB ಡೇಟಾ ಸೌಲಭ್ಯ ನೀಡುತ್ತವೆ. ಹಾಗಾದರೇ 299ರೂ, 499ರೂ ಮತ್ತು 699ರೂ. ಪ್ರೀಪೇಯ್ಡ್ ಯೋಜನೆಗಳ ಇನ್ನಿತರೆ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವೊಡಾಫೋನ್ ಐಡಿಯಾ 299ರೂ. ಪ್ರೀಪೇಯ್ಡ್ ಯೋಜನೆ
ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ ಐಡಿಯಾ 499ರೂ. ಪ್ರೀಪೇಯ್ಡ್ ಯೋಜನೆ
ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಲಭ್ಯವಿದೆ. ಆದರೆ ಸದ್ಯ ಈ ಯೋಜನೆಯು ಡಬಲ್ ಡೇಟಾ ಆಫರ್ ಪಡೆದಿದೆ. ಹೀಗಾಗಿ ಹೆಚ್ಚುವರಿ 2GB ಡೇಟಾ ಸೇರಲಿದ್ದು, ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ ಐಡಿಯಾ 699ರೂ. ಪ್ರೀಪೇಯ್ಡ್ ಯೋಜನೆ
ವಿ ಟೆಲಿಕಾಂನ 699ರೂ. ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.


Click it and Unblock the Notifications








