ಕಡಿಮೆ ಬೆಲೆಯ ರೀಚಾರ್ಜ್‌ನಲ್ಲಿ ಅಧಿಕ ಪ್ರಯೋಜನ ಬೇಕಿದ್ರೆ, ಈ ಪ್ಲ್ಯಾನ್ ಗಮನಿಸಿ!
ದೇಶದ ಟೆಲಿಕಾಂ ವಲಯದಲ್ಲಿ ವಿ ಟೆಲಿಕಾಂ ಭಿನ್ನ ಯೋಜನೆಗಳ ಮೂಲಕ ಗುರುತಿಸಿಕೊಂಡಿದೆ. ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಯನ್ಸ್ ಜಿಯೋ ಟೆಲಿಕಾಂ ಹಾಗೂ ಜನಪ್ರಿಯ ಏರ್‌ಟೆಲ್‌ಗಳಿಗೆ ಟಾಂಗ್ ನೀಡುವಂತಹ ಯೋಜನೆಗಳ ಆಯ್ಕೆ ಹೊಂದಿದೆ. ಮುಖ್ಯವಾಗಿ ವಿ ಟೆಲಿಕಾಂನ ಹಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಡೇಟಾ ಪ್ರಯೋಜನ ಪಡೆದಿರುವುದು ಆಕರ್ಷಕ ಎನಿಸಿದೆ. ಅದಾಗ್ಯೂ, ವಿ ಟೆಲಿಕಾಂ ಕಡಿಮೆ ದರದ ಪ್ಲ್ಯಾನ್‌ಗಳ ಆಯ್ಕೆಯಿಂದ, ದುಬಾರಿ ಬೆಲೆಯ ವರೆಗೂ ಭಿನ್ನ ಯೋಜನೆಗಳ ಆಯ್ಕೆ ಹೊಂದಿದೆ.

ಹೌದು, ವಿ ಟೆಲಿಕಾಂ ಗ್ರಾಹಕರನ್ನು / ಚಂದಾದಾರರನ್ನು ಸೆಳೆಯಲು ಭಿನ್ನ ದರ ಪಟ್ಟಿಯಲ್ಲಿ ಹಲವು ಯೋಜನೆಗಳ ಆಯ್ಕೆ ಒಳಗೊಂಡಿದೆ. ಅವುಗಳಲ್ಲಿ ಕಡಿಮೆ ದರದ ಪ್ರೀಪೇಯ್ಡ್ ಯೋಜನೆಗಳು ಆಕರ್ಷಕ ಪ್ರಯೋಜನಗಳ ಮೂಲಕ ಗ್ರಾಹಕರನ್ನು ಸೆಳೆದಿವೆ. ಆ ಪೈಕಿ 200ರೂ. ಒಳಗಿನ ಕೆಲವು ಯೋಜನೆಗಳು ಡೇಟಾ, ಅನಿಯಮಿತ ವಾಯಿಸ್ ಕರೆ, ವ್ಯಾಲಿಡಿಟಿ ಸೌಲಭ್ಯಗಳನ್ನು ಒಳಗೊಂಡಿವೆ. ಹಾಗಾದರೇ ವಿ ಟೆಲಿಕಾಂನ 200ರೂ. ಒಳಗಿನ ಕೆಲವು ಪ್ರಮುಖ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 199ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 199ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಒಟ್ಟು 24 ದಿನಗಳ ವ್ಯಾಲಿಡಿಟಿ ಒದಗಿಸಲಾಗಿದೆ. ಹಾಗೆಯೇ ಈ ಯೋಜನೆಯಲ್ಲಿ ಮೊದಲು ಪ್ರತಿದಿನ 1GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯಲಿವೆ. ಹೆಚ್ಚುವರಿಯಾಗಿ ವಿ ಮ್ಯೂವಿಸ್ ಮತ್ತು ಟಿವಿ ಆಪ್ ಲಭ್ಯ.

ವಿ ಟೆಲಿಕಾಂ 149ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ 300 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 1GB ಡೇಟಾವನ್ನು ಪಡೆಯಬಹುದು.

ವಿ ಟೆಲಿಕಾಂ 129ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 129ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಒಟ್ಟು 24 ದಿನಗಳ ವ್ಯಾಲಿಡಿಟಿ ಒದಗಿಸಲಾಗಿದೆ. ಹಾಗೆಯೇ ಈ ಯೋಜನೆಯಲ್ಲಿ ಒಟ್ಟು 1GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಒಟ್ಟು 300 ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯಲಿವೆ. ಹೆಚ್ಚುವರಿಯಾಗಿ ವಿ ಮ್ಯೂವಿಸ್ ಮತ್ತು ಟಿವಿ ಆಪ್ ಲಭ್ಯ.

ವಿ ಟೆಲಿಕಾಂ 109ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 109ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಒಟ್ಟು 20 ದಿನಗಳ ವ್ಯಾಲಿಡಿಟಿ ಒದಗಿಸಲಾಗಿದೆ. ಹಾಗೆಯೇ ಈ ಯೋಜನೆಯಲ್ಲಿ ಒಟ್ಟು 1GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಒಳಗೊಂಡಿಲ್ಲ.

ವಿ ಟೆಲಿಕಾಂ 99ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 99ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಒಟ್ಟು 18 ದಿನಗಳ ವ್ಯಾಲಿಡಿಟಿ ಒದಗಿಸಲಾಗಿದೆ. ಹಾಗೆಯೇ ಈ ಯೋಜನೆಯಲ್ಲಿ ಒಟ್ಟು 200MB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಒಳಗೊಂಡಿಲ್ಲ.

ವಿ ಟೆಲಿಕಾಂ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ (ವೊಡಾಫೋನ್-ಐಡಿಯಾ) ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಜೀ5 ಓಟಿಟಿ ಚಂದಾದಾರಿಕೆ, ವೀಲೆಂಟ್ ಡೇಟಾ ರೋಲ್ ಓವರ್, ವಿ ಮೂವಿಸ್ ಹಾಗೂ ಟಿವಿ ಸೌಲಭ್ಯಗಳು ಸಿಗಲಿವೆ.

ವಿ ಟೆಲಿಕಾಂ 399ರೂ. ಪ್ರಿಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

ವಿ ಟೆಲಿಕಾಂ 447 ರೂ. ಪ್ರಿಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂ 447ರೂ,ಗಳ ಪ್ರಿಪೇಯ್ಡ್ ಪ್ಲ್ಯಾನ್ 50GB ಬೃಹತ್ ಡೇಟಾವನ್ನು ಯಾವುದೇ ಡೈಲಿ ಲಿಮಿಟ್ ಇಲ್ಲದೆ ನೀಡುತ್ತದೆ. ಈ ಪ್ಲ್ಯಾನ್ ಎಲ್ಲಾ ನೆಟ್‌ವರ್ಕ್‌ಗಳಿಗೆ ಟ್ರೂಲಿ ಅನ್‌ಲಿಮಿಟೆಡ್ ಕರೆಗಳನ್ನು ಮತ್ತು ದಿನಕ್ಕೆ 100 SMS ಸಂದೇಶಗಳ ಪ್ರಯೋಜನ ಹೊಂದಿದೆ. ಇನ್ನು ಈ ಪ್ಲ್ಯಾನ್ 60 ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ. ಇದರಲ್ಲಿ ಚಲನಚಿತ್ರಗಳು, ಮೂಲ ವಿಷಯ, ಲೈವ್ ಟಿವಿ ಮತ್ತು ಸುದ್ದಿ ವಿಷಯವನ್ನು ಹೊಂದಿರುವ ವಿ ಚಲನಚಿತ್ರಗಳು ಮತ್ತು ಟಿವಿಗೆ ಉಚಿತ ಪ್ರವೇಶವನ್ನು ನೀಡುತ್ತದೆ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.


Click it and Unblock the Notifications








