ವಿ ಟೆಲಿಕಾಂನ ಈ ಅಗ್ಗದ ಪ್ಲ್ಯಾನ್‌ಗಳಿಗೆ ಪ್ರಯೋಜನಕ್ಕೆ ಗ್ರಾಹಕರು ಫಿದಾ!
ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಜಿಯೋ, ಏರ್‌ಟೆಲ್ ಟೆಲಿಕಾಂಗಳಿಗೆ ಫೈಟ್ ನೀಡುತ್ತ ಮುನ್ನಡೆದಿದೆ. ವಿ ಟೆಲಿಕಾಂ ಅಲ್ಪಾವಧಿಯ ಯೋಜನೆಗಳ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿಯ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ವಿ ಟೆಲಿಕಾಂ ಅತ್ಯುತ್ತಮ ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋಜನಗಳ ಯೋಜನೆಗಳನ್ನು ಒಳಗೊಂಡಿದೆ. ಆ ಪೈಕಿ ಟೆಲಿಕಾಂನ ಕೆಲವು ಅಗ್ಗದ ಯೋಜನೆಗಳು ಅತ್ಯುತ್ತಮ ಪ್ರಯೋಜನಗಳ ಮೂಲಕ ಗ್ರಾಹಕರನ್ನು ಸೆಳೆದಿವೆ.

ಹೌದು, ವಿ ಟೆಲಿಕಾಂ ಭಿನ್ನ ಪ್ರೈಸ್ ಟ್ಯಾಗ್‌ನಲ್ಲಿ ಹಲವು ಪ್ರೀಪೇಯ್ಡ್ ಆಯ್ಕೆಗಳನ್ನು ನೀಡಿದೆ. ಅವುಗಳಲ್ಲಿ ಬಹುತೇಕ ಯೋಜನೆಗಳು ದೈನಂದಿನ ಡೇಟಾ ಒಳಗೊಂಡಿದ್ದು, ಜೊತೆಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿವೆ. ಮುಖ್ಯವಾಗಿ ಆಕರ್ಷಕ ಪ್ರಯೋಜನಗಳನ್ನು ಒಳಗೊಂಡ 500ರೂ.ಗಳ ಒಳಗಿನ ಕೆಲವು ಪ್ರೀಪೇಯ್ಡ್ ಯೋಜನೆಗಳಿಗೆ ಗ್ರಾಹಕರು ಫಿದಾ ಆಗಿದ್ದಾರೆ. ಹಾಗಾದರೇ ಹಾಗಾದರೇ ವಿ ಟೆಲಿಕಾಂನ 500ರೂ.ಗಳ ಒಳಗಿನ ಯೋಜನೆಯ ಪ್ರಯೋಜನಗಳೆನು?...ಎನ್ನುವ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ (ವೊಡಾಫೋನ್-ಐಡಿಯಾ) ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಜೀ5 ಓಟಿಟಿ ಚಂದಾದಾರಿಕೆ, ವೀಲೆಂಟ್ ಡೇಟಾ ರೋಲ್ ಓವರ್, ವಿ ಮೂವಿಸ್ ಹಾಗೂ ಟಿವಿ ಸೌಲಭ್ಯಗಳು ಸಿಗಲಿವೆ.

ವಿ ಟೆಲಿಕಾಂ 399ರೂ. ಪ್ರಿಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

ವಿ ಟೆಲಿಕಾಂ 447 ರೂ. ಪ್ರಿಪೇಯ್ಡ್ ಪ್ಲ್ಯಾನ್
ವೊಡಾಫೋನ್ ಐಡಿಯಾದ 447 ರೂ,ಗಳ ಪ್ರಿಪೇಯ್ಡ್ ಪ್ಲ್ಯಾನ್ 50GB ಬೃಹತ್ ಡೇಟಾವನ್ನು ಯಾವುದೇ ಡೈಲಿ ಲಿಮಿಟ್ ಇಲ್ಲದೆ ನೀಡುತ್ತದೆ. ಈ ಪ್ಲ್ಯಾನ್ ಎಲ್ಲಾ ನೆಟ್‌ವರ್ಕ್‌ಗಳಿಗೆ ಟ್ರೂಲಿ ಅನ್‌ಲಿಮಿಟೆಡ್ ಕರೆಗಳನ್ನು ಮತ್ತು ದಿನಕ್ಕೆ 100 SMS ಸಂದೇಶಗಳ ಪ್ರಯೋಜನ ಹೊಂದಿದೆ. ಇನ್ನು ಈ ಪ್ಲ್ಯಾನ್ 60 ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ. ಇದರಲ್ಲಿ ಚಲನಚಿತ್ರಗಳು, ಮೂಲ ವಿಷಯ, ಲೈವ್ ಟಿವಿ ಮತ್ತು ಸುದ್ದಿ ವಿಷಯವನ್ನು ಹೊಂದಿರುವ ವಿ ಚಲನಚಿತ್ರಗಳು ಮತ್ತು ಟಿವಿಗೆ ಉಚಿತ ಪ್ರವೇಶವನ್ನು ನೀಡುತ್ತದೆ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ 449ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 449ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications








