Home
ಸುದ್ದಿಜಾಲ

ಒಮ್ಮೆ ಈ ಪ್ಲ್ಯಾನ್‌ ರೀಚಾರ್ಜ್ ಮಾಡಿದ್ರೆ, ಮುಂದಿನ ರೀಚಾರ್ಜ್ 365 ದಿನಗಳ ನಂತರವೇ!

ವಿ ಟೆಲಿಕಾಂ (ವೊಡಾಫೋನ್‌ ಐಡಿಯಾ) ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಗ್ರಾಹಕರನ್ನು ಮೆಚ್ಚಿಸಿದೆ. ಮುಖ್ಯವಾಗಿ ಕೆಲವು ಯೋಜನೆಗಳಿಗೆ ಡಬಲ್ ಡೇಟಾ ಕೊಡುಗೆ ನೀಡಿದೆ. ಹಾಗೆಯೇ ಇನ್ನು ಕೆಲವು ಯೋಜನೆಗಳಲ್ಲಿ ಅಧಿಕ ದೈನಂದಿನ ಡೇಟಾ ಪ್ರಯೋಜನ ಒದಗಿಸಿದೆ. ಈ ಮೂಲಕ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅದಾಗ್ಯೂ ವಿ ಟೆಲಿಕಾಂನ ದೀರ್ಘ ವ್ಯಾಲಿಡಿಟಿ ಅವಧಿಯ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ.

ಅಲ್ಪಾವಧಿಯ

ಹೌದು, ವಿ ಟೆಲಿಕಾಂ ಅಲ್ಪಾವಧಿಯ ಯೋಜನೆಗಳ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿಯ ಆಯ್ಕೆಗಳನ್ನು ಒಳಗೊಂಡಿದೆ. ಕೆಲವು ಬಳಕೆದಾರರು ಅಧಿಕ ಡೇಟಾ ಸೌಲಭ್ಯ ಬಯಸಿದರೇ, ಮತ್ತೆ ಕೆಲವು ಬಳಕೆದಾರರು ವಾರ್ಷಿಕ ಅವಧಿಯ ವ್ಯಾಲಿಡಿಟಿ ಯೋಜನೆಗಳತ್ತ ಹೋಗುತ್ತಾರೆ. ಈ ನಿಟ್ಟಿನಲ್ಲಿ ವಿ ಟೆಲಿಕಾಂ ಆಕರ್ಷಕ ವಾರ್ಷಿಕ ಯೋಜನೆಗಳ ಲಿಸ್ಟ್‌ ಹೊಂದಿದೆ. ಅವುಗಳಲ್ಲಿ 1,499ರೂ. ಯೋಜನೆಯು ಕಡಿಮೆ ದರದಲ್ಲಿ ಗ್ರಾಹಕರ ಗಮನ ಸೆಳೆದಿದೆ. ಹಾಗಾದರೇ ವಿ ಟೆಲಿಕಾಂನ 1,499ರೂ. ಯೋಜನೆಯ ಪ್ರಯೋಜನಗಳೆನು?...ಇತರೆ ವಾರ್ಷಿಕ ಅವಧಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 1,499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 1,499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 1,499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಒಟ್ಟು 3600 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ವಿ ಟೆಲಿಕಾಂ ಆಪ್‌ ಸೇವೆ ಲಭ್ಯ. ಹೆಚ್ಚಿನ ಡೇಟಾ ಅಗತ್ಯ ಇರದ ಆದರೆ ವಾರ್ಷಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಸೂಕ್ತ ಎನಿಸಲಿದೆ.

ವಿ ಟೆಲಿಕಾಂ 2,399ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂ 2,399ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರಿಪೇಯ್ಡ್ ಯೋಜನೆಯು 1.5GB ದೈನಂದಿನ ಡೇಟಾವನ್ನು ಅನಿಯಮಿತ ಕರೆಗಳೊಂದಿಗೆ ನೀಡುತ್ತದೆ ಮತ್ತು 365 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಈ ಯೋಜನೆಯು ಒಂದು ವರ್ಷದ ಜೀ5 ಪ್ರೀಮಿಯಂ, ಆಲ್-ನೈಟ್ ಹೈಸ್ಪೀಡ್ ಡೇಟಾ ಮತ್ತು ವಾರಾಂತ್ಯದ ರೋಲ್‌ಓವರ್ ಡೇಟಾ ಪ್ರಯೋಜನಕ್ಕೂ ಪ್ರವೇಶವನ್ನು ನೀಡುತ್ತದೆ.

ವಿ ಟೆಲಿಕಾಂ 2,595ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂ 2,595ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರಿಪೇಯ್ಡ್ ಯೋಜನೆಯೊಂದಿಗೆ 2GB ದೈನಂದಿನ ಡೇಟಾ ಮತ್ತು ಅನಿಯಮಿತ ಕರೆಗಳನ್ನು ನೀಡುತ್ತದೆ. ಈ ಯೋಜನೆಯೊಂದಿಗೆ ವಾರಾಂತ್ಯದ ರೋಲ್‌ಓವರ್ ಡೇಟಾ ಪ್ರಯೋಜನಗಳನ್ನು ಯೋಜನೆ ನೀಡುತ್ತದೆ. ಯೋಜನೆಯು ದಿನಕ್ಕೆ 100 ಎಸ್‌ಎಂಎಸ್ ನೀಡುತ್ತದೆ. ಈ ಯೋಜನೆಯೊಂದಿಗೆ ಸ್ಟ್ರೀಮಿಂಗ್ ಪ್ರಯೋಜನಗಳು ಪ್ರೀಮಿಯಂ ಜೀ5 ಚಂದಾದಾರಿಕೆಗಳು ಮತ್ತು ವಿ ಚಲನಚಿತ್ರಗಳು ಮತ್ತು ಟಿವಿ ಪ್ರವೇಶವನ್ನು ಒಳಗೊಂಡಿವೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ.

Best Mobiles in India

English summary
Vi Telecom Very Affordable 365 Days Validity Prepaid Plan.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+