ಜಿಯೋ ಮತ್ತು ವಿ ಟೆಲಿಕಾಂ 199ರೂ. ಪ್ಲ್ಯಾನ್: ರೀಚಾರ್ಜ್‌ಗೆ ಯಾವುದು ಬೆಸ್ಟ್?
ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 199ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಮುಂದಾಗುತ್ತಾರೆ.

ಹೌದು, ಜಿಯೋ ಮತ್ತು ವಿ (ವೊಡಾಫೋನ್ - ಐಡಿಯಾ) ಟೆಲಿಕಾಂ ಸಂಸ್ಥೆಗಳು 199ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ ಮತ್ತು ವಿ ಟೆಲಿಕಾಂನ 199ರೂ. ಪ್ಲ್ಯಾನಿನಲ್ಲಿ ಯಾವುದು ಯೋಗ್ಯ? ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಜಿಯೋದ 199ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ವೊಡಾಫೋನ್-ಐಡಿಯಾ 199ರೂ. ಪ್ರೀಪೇಯ್ಡ್ ಪ್ಲ್ಯಾನ್
ವೊಡಾಫೋನ್-ಐಡಿಯಾ ಟೆಲಿಕಾಂನ 199ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಇದೀಗ ಒಟ್ಟು 24 ದಿನಗಳ ವ್ಯಾಲಿಡಿಟಿ ಒದಗಿಸಲಾಗಿದೆ. ಹಾಗೆಯೇ ಈ ಯೋಜನೆಯಲ್ಲಿ ಮೊದಲು ಪ್ರತಿದಿನ 1GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯಲಿವೆ. ಹೆಚ್ಚುವರಿಯಾಗಿ ವಿ ಮ್ಯೂವಿಸ್ ಮತ್ತು ಟಿವಿ ಆಪ್ ಲಭ್ಯ.

ರೀಚಾರ್ಜ್‌ಗೆ ಯಾವುದು ಯೋಗ್ಯ?
ಜಿಯೋ ಮತ್ತು ವಿ ಟೆಲಿಕಾಂ ಈ ಎರಡು ಕಂಪನಿಗಳು ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಅದಾಗ್ಯೂ ಅಧಿಕ ವ್ಯಾಲಿಡಿಟಿ ಜೊತೆಗೆ ಹೆಚ್ಚಿನ ಡೇಟಾವನ್ನು ಬಯಸುತ್ತಿದ್ದರೇ, ನಿಮಗೆ ಜಿಯೋ ಉತ್ತಮ ಅನಿಸಲಿದೆ. ಹಾಗೆಯೇ ಹೆಚ್ಚಿನ ವ್ಯಾಲಿಡಿಟಿ ಹಾಗೂ ಡೇಟಾ ಬಗ್ಗೆ ಅಷ್ಟೇನು ಗಮನ ನೀಡದಿದ್ದರೇ ಮತ್ತು ವಿ ಟೆಲಿಕಾಂ ಯೋಜನೆಯು ಉತ್ತಮ ಎನಿಸಿದೆ.


Click it and Unblock the Notifications








