ಮೆಗಾ ರಿಪಬ್ಲಿಕ್‌ ಡೇ ಸೇಲ್‌: ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌, ಗಮನ ಸೆಳೆದ ಆಫರ್‌!

|

ಪ್ರಸ್ತುತ ದಿನಗಳಲ್ಲಿ ಶಾಪಿಂಗ್‌ ಆಯ್ಕೆಯಲ್ಲಿ ಇ ಕಾಮರ್ಸ್‌ ತಾಣಗಳು ಪ್ರಮುಖ ಹೈಲೈಟ್‌ ಆಗಿ ಕಾಣಿಸಿಕೊಂಡಿವೆ. ಒಂದಿಲ್ಲೊಂದು ವಿಶೇಷ ಆಫರ್‌ ಹಾಗೂ ವಿಶೇಷ ದಿನಗಳಂದು ಹೆಚ್ಚಿನ ಕೊಡುಗೆಗಳನ್ನು ಘೋಷಿಸುವ ಮೂಲಕ ಮುನ್ನಲೆಯಲ್ಲಿ ಗುರುತಿಸಿಕೊಂಡಿವೆ. ಸದ್ಯ ಗಣರಾಜ್ಯೋತ್ಸವ ದಿನ ಹತ್ತಿರ ಇರುವ ಕಾರಣ ಕೆಲವು ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಗಳು ಬೊಂಬಾಟ್‌ ಆಫರ್‌ ತಿಳಿಸಿವೆ. ಆ ಪೈಕಿ ವಿಜಯ ಸೇಲ್‌ (Vijay Sales) ಸಹ ಮೆಗಾ ರಿಪಬ್ಲಿಕ್ ಡೇ ಸೇಲ್‌ ಅನ್ನು ಘೋಷಿಸಿದೆ.

ಮೆಗಾ ರಿಪಬ್ಲಿಕ್‌ ಡೇ ಸೇಲ್‌: ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌, ಗಮನ ಸೆಳೆದ ಆಫರ್‌!

ಹೌದು, ವಿಜಯ ಸೇಲ್‌ (Vijay Sales) ಆನ್‌ಲೈನ್‌ ತಾಣವು ಗಣರಾಜ್ಯೋತ್ಸವದ ಅಂಗವಾಗಿ ಮೆಗಾ ರಿಪಬ್ಲಿಕ್ ಡೇ ಸೇಲ್‌ (Mega Republic Day Sale) ಆಯೋಜಿಸಿದೆ. ಈ ಮಾರಾಟ ಮೇಳದಲ್ಲಿ ಸಂಸ್ಥೆಯು ಆಯ್ದ ಕೆಲವು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌, ಹೆಡ್‌ಫೋನ್‌, ಇಯರ್‌ಫೋನ್‌, ಇಯರ್‌ಬಡ್ಸ್‌ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ನೀಡುತ್ತಿದೆ.

ಇದರೊಂದಿಗೆ ಗ್ರಾಹಕರು ಹೆಚ್‌ಡಿಎಫ್‌ಸಿ, ಐಸಿಐಸಿಐ ಕ್ರೆಡಿಟ್‌/ ಡೆಬಿಟ್‌ ಕಾರ್ಡ್ ಗಳ ಮೂಲಕ ಖರೀದಿಸಿದರೆ ಹೆಚ್ಚುವರಿಯಾಗಿ ಡಿಸ್ಕೌಂಟ್‌ ಸಹ ಲಭ್ಯವಾಗಲಿದೆ. ಅಂದಹಾಗೆ ವಿಜಯ ಸೇಲ್‌ನ ಮೆಗಾ ರಿಪಬ್ಲಿಕ್ ಡೇ ಸೇಲ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್‌ A7 ಲೈಟ್, ಸ್ಯಾಮ್‌ಸಂಗ್ ಗ್ಯಾಲಕ್ಸಿ A23, ಒನ್‌ಪ್ಲಸ್‌ 10R, ಗ್ಯಾಲಕ್ಸಿ ಬಡ್ಸ್‌ 2 ಡಿವೈಸ್‌ಗಳಿಗೆ ನೀಡುವ ಕೊಡುಗೆ ಗಮನ ಸೆಳೆದಿವೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಮೆಗಾ ರಿಪಬ್ಲಿಕ್‌ ಡೇ ಸೇಲ್‌: ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌, ಗಮನ ಸೆಳೆದ ಆಫರ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಫೋನಿಗೆ ಕೊಡುಗೆ
ವಿಜಯ ಸೇಲ್ಸ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ 18,499ರೂ. ಗಳಿಗೆ ಲಭ್ಯವಿದೆ. ಇದರೊಂದಿಗೆ ಬ್ಯಾಂಕ್‌ ಆಫರ್‌ ಸಹ ದೊರೆಯುತ್ತವೆ. ಇನ್ನು ಇದು 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್‌ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12-ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಬಲವನ್ನು ಹೊಂದಿದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್‌ ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ A7 ಲೈಟ್
ವಿಜಯ ಸೇಲ್‌ನಲ್ಲಿ ಗ್ಯಾಲಕ್ಸಿ ಟ್ಯಾಬ್ A7 ಲೈಟ್ ಡಿವೈಸ್‌ಗೆ ಆಕರ್ಷಕ ಕೊಡುಗೆ ಇದ್ದು, 9,999ರೂ. ಗಳಿಗೆ ಖರೀದಿಗೆ ಲಭ್ಯ. ಇನ್ನು ಈ ಸಾಧನವು 1,340 x 800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 8.7 ಇಂಚಿನ WXGA + (ಗಳು) ಟಿಎಫ್‌ಟಿ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಈ ಟ್ಯಾಬ್ಲೆಟ್ ಮೀಡಿಯಾ ಟೆಕ್ ಹೆಲಿಯೊ P22T SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ ಕೋರ್ 3.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 3GBRAM ಮತ್ತು 32GB ಹಾಗೂ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿವೆ. ಅಲ್ಲದೇ 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮೆಗಾ ರಿಪಬ್ಲಿಕ್‌ ಡೇ ಸೇಲ್‌: ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌, ಗಮನ ಸೆಳೆದ ಆಫರ್‌!

ಒನ್‌ಪ್ಲಸ್‌ 10R 5G ಫೋನ್‌
ವಿಜಯ ಸೇಲ್ಸ್‌ ಆಯೋಜಿಸಿರುವ ಮೆಗಾ ರಿಪಬ್ಲಿಕ್ ಡೇ ಸೇಲ್‌ನಲ್ಲಿ ಒನ್‌ಪ್ಲಸ್‌ 10R 5G ಫೋನ್‌ ಡಿಸ್ಕೌಂಟ್‌ ಪಡೆದಿದ್ದು, 32,999ರೂ. ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಹಾಗೆಯೇ ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಮ್ಯಾಕ್ಸ್ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

Best Mobiles in India

English summary
Vijay Sales Mega Republic Day sale: Check deals on oneplus 10r, galaxy tab a7 lite, galaxy buds 2 and more gadgets. konw more details in kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X