Home
ಸುದ್ದಿಜಾಲ

ಗಣೇಶ ಚತುರ್ಥಿ ವಿಶೇ‍ಷ: ವಿವೋದ ಈ ಫೋನ್‌ಗಳ ಬೆಲೆಯಲ್ಲಿ ಭಾರೀ ಇಳಿಕೆ!

ವಿವೋ ಮೊಬೈಲ್‌ ಸಂಸ್ಥೆಯು ಗಣೇಶ ಚತುರ್ಥಿ 2024 ಹಬ್ಬದ ಪ್ರಯುಕ್ತ ತನ್ನ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಕ್ಯಾಶ್‌ಬ್ಯಾಕ್ ಕೊಡುಗೆಗಳನ್ನು ಘೋಷಿಸಿದೆ. ಈ ಆಫರ್‌ನಲ್ಲಿ, ವಿವೋ ಸಂಸ್ಥೆಯ ವಿವೋ X90 ಸರಣಿ, ವಿವೋ Y56 ಮತ್ತು ವಿವೋ V29e ಮಾಡೆಲ್‌ ಸ್ಮಾರ್ಟ್‌ಫೋನ್‌ಗಳು ಸಖತ್ ರಿಯಾಯಿತಿ ಪಡೆದಿವೆ.

ಹೌದು, ವಿವೋ ಸಂಸ್ಥೆಯ ವಿವೋ X90 ಸರಣಿ, ವಿವೋ Y56 ಮತ್ತು ವಿವೋ V29e ಫೋನ್‌ಗಳಿಗೆ 8,500 ರೂ. ಗಳ ವರೆಗೂ ಕ್ಯಾಶ್‌ಬ್ಯಾಕ್‌ ಕೊಡುಗೆ ಲಭ್ಯವಾಗಲಿದೆ. ಈ ಬಗ್ಗೆ ವಿವೋ ಸಂಸ್ಥೆಯ ತನ್ನ ಅಧಿಕೃತ ಎಕ್ಸ್‌ (ಟ್ವಿಟರ್) ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದೆ. ಈ ಮಾಹಿತಿ ಪ್ರಕಾರ ಸೆಪ್ಟೆಂಬರ್ 30 ರ ವರೆಗೆ ಮಾತ್ರ ಈ ಕೊಡುಗೆ ಲಭ್ಯ ಇರಲಿದೆ. ಹಾಗಾದರೆ ಭರ್ಜರಿ ಕ್ಯಾಶ್‌ಬ್ಯಾಕ್‌ ಪಡೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗಣೇಶ ಚತುರ್ಥಿ ವಿಶೇ‍ಷ: ವಿವೋದ ಈ ಫೋನ್‌ಗಳ ಬೆಲೆಯಲ್ಲಿ ಭಾರೀ ಇಳಿಕೆ!

ವಿವೋ Y56 5G ಸ್ಮಾರ್ಟ್‌ಫೋನ್‌ :
ವಿವೋ Y56 5G ಸ್ಮಾರ್ಟ್‌ಫೋನ್‌ 6.58 ಇಂಚಿನ FHD+ ಡಿಸ್‌ಪ್ಲೇ ಪಡೆದಿದ್ದು, 2408 × 1080 ಪಿಕ್ಸೆಲ್‌ ರೆಸಲ್ಯೂಶನ್ ಹೊಂದಿದೆ. ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ ಓಎಸ್‌ ಸಪೋರ್ಟ್‌ ಪಡೆದಿದೆ. 8GB RAM ಮತ್ತು 128GB ವೇರಿಯಂಟ್‌ ಆಯ್ಕೆ ಪಡೆದುಕೊಂಡಿದ್ದು, ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದೆ.

ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಆಗಿದ್ದು, ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಇದರ ಜೊತೆಗೆ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್‌ ಕ್ಯಾಮೆರಾ ಒದಗಿಸಲಾಗಿದೆ. ಹಾಗೆಯೇ ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ 18W ವೇಗದ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ.

ವಿವೋ V29e ಸ್ಮಾರ್ಟ್‌ಫೋನ್‌ :
ವಿವೋ V29e ಫೋನ್‌ 6.73 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಪಡೆದಿದ್ದು, 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು ಕ್ವಾಲ್ಕಾಮ್ ಸ್ನ್ಯಾಪ್ ಡ್ರ್ಯಾಗನ್ 695 SoC ಪ್ರೊಸೆಸರ್‌ ಮೂಲಕ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಸಪೋರ್ಟ್ ಇದೆ. ಹಾಗೆಯೇ ಡ್ಯುಯಲ್‌ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, 64 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5000mAh ಬ್ಯಾಟರಿ ಜೊತೆಗೆ 44W ಚಾರ್ಜಿಂಗ್ ಸೌಲಭ್ಯ ಇದೆ.

ವಿವೋ X90 ಸ್ಮಾರ್ಟ್‌ಫೋನ್‌ :
ವಿವೋ X90 ಮೊಬೈಲ್‌ 6.76 ಇಂಚಿನ ಕರ್ವ್ಡ FHD+ Q9 ಅಲ್ಟ್ರಾ-ವಿಷನ್ ಅಮೋಲೆಡ್‌ ಡಿಸ್‌ಪ್ಲೇ ಪಡೆದಿದ್ದು, 120Hz ರಿಫ್ರೆಶ್ ರೇಟ್‌ ಆಯ್ಕೆ ಹೊಂದಿದೆ. ಹಾಗೆಯೇ 2,800 × 1,260 ಪಿಕ್ಸೆಲ್‌ ರೆಸಲ್ಯೂಶನ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9200 ಚಿಪ್‌ಸೆಟ್‌ ಪ್ರೊಸೆಸರ್‌ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್ ಪಡೆದಿದೆ.

ವಿವೋ X90 ಕ್ಯಾಮೆರಾ ಸೆನ್ಸಾರ್ ಅತ್ಯುತ್ತಮ ಆಗಿದೆ. ಈ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಆಗಿದೆ. ಇತರೆ ಎರಡು ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್‌ ಹಾಗೂ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದ ಪಡೆದಿವೆ.

Best Mobiles in India

English summary
Ganesh Chaturthi: Vivo has announced cashback offers on a few smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+