Home
ಸುದ್ದಿಜಾಲ

ವಿವೋ ಸಂಸ್ಥೆಯಿಂದ 'ವಿವೋ G1 5G' ಸ್ಮಾರ್ಟ್‌ಫೋನ್‌ ಬಿಡುಗಡೆ‌!

ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಈಗಾಗಲೇ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಹಲವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಇನ್ನು ಈಗಾಗಲೇ ಹೊಸ ಮಾದರಿಯ ಕ್ಯಾಮೆರಾ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಆಗಿಯು ಸಹ ಗುರುತಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮಾದರಿಯ ವಿವೋ G1 5Gಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಹೌದು

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ತನ್ನ ಹೊಸ ವಿವೋ G1 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ ಎನ್ನಲಾಗ್ತಿದೆ. ಆದರೂ ಇದರ ಬಗ್ಗೆ ಯಾವುದೇ ಖಚಿತತೆ ಇಲ್ಲ. ಆದರೆ ಲಬ್ಯ ಮಾಹಿತಿಯ ಈ ಸ್ಮಾರ್ಟ್‌ಫೋನ್‌ ಡ್ಯುಯಲ್-ಡೊಮೇನ್ ಸಿಸ್ಟಮ್,ಅನ್ನು ಒಳಗೊಂಡಿದೆ ಎನ್ನಲಾಗ್ತಿದೆ. ಇದು ಬಳಕೆದಾರರಿಗೆ "ವೈಯಕ್ತಿಕ ಡೊಮೇನ್" ಮತ್ತು "ವರ್ಕ್ ಡೊಮೇನ್" ನಡುವೆ ಕೇವಲ ಒಂದು ಕ್ಲಿಕ್‌ನಲ್ಲಿ ಬದಲಾಯಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಲಾಗಿದೆ. ಸದ್ಯ ಲಬ್ಯ ಮಾಹಿತಿಯ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಈ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಒಳಗೊಂಡಿದೆ ಎನ್ನಲಾಗ್ತಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾವನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಕ್ಯಾಮೆರಾ ಅನ್ನು ನೀಡಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ ಎಂದು ವರದಿಯಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ G1 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್ ಮತ್ತು ವೈ-ಫೈ ಅನ್ನು ಬೆಂಬಲಿಸಲಿದೆ.ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯಲ್-ಡೊಮೇನ್ ವ್ಯವಸ್ಥೆಯನ್ನ ನೀಡಲಾಗಿದೆ. ಕೇವಲ ಒಂದು ಕ್ಲಿಕ್‌ನಲ್ಲಿ "ವೈಯಕ್ತಿಕ ಡೊಮೇನ್" ಮತ್ತು "ವರ್ಕ್ ಡೊಮೇನ್" ನಡುವೆ ಬದಲಾಯಿಸಲು ಬಳಕೆದಾರರನ್ನು ಅನುಮತಿಸುತ್ತದೆ. ಅಲ್ಲದೆ ವರ್ಕ್ ಡೊಮೇನ್ ವ್ಯವಸ್ಥೆಯಲ್ಲಿ ಯಾವುದೇ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲಾಗುವುದಿಲ್ಲ ಎಂದು ಸಹ ಸೇರಿಸಲಾಗಿದೆ. ಆದಾಗ್ಯೂ, ಬಳಕೆದಾರರು ವೈಯಕ್ತಿಕ ಡೊಮೇನ್ ವ್ಯವಸ್ಥೆಯಲ್ಲಿ ವಿವಿಧ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳುವ ಅವಕಾಶವನ್ನ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಚೀನಾದ ಐಟಿಹೋಮ್‌ನ ವರದಿಯ ಪ್ರಕಾರ, ವಿವೋ G1 5G ಸ್ಮಾರ್ಟ್‌ಫೋನ್ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮ ಗ್ರಾಹಕರನ್ನು ಗುರಿಯಾಗಿರಿಸಿಕೊಂಡಿದೆ. ಇದರ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ CNY 3,498 (ಸುಮಾರು 37,380 ರೂ.) ವೆಚ್ಚವಾಗಲಿದೆ ಎಂದು ಹೇಳಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಲಬ್ಯವಾಗಲಿದೆ ಎನ್ನಲಾಗಿದೆ.

Best Mobiles in India

English summary
Vivo G1 5G, a smartphone customised for enterprise customers, has reportedly been launched by the Chinese tech company in China.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+