Home
ಸುದ್ದಿಜಾಲ

ವಿವೋ S1 ಪ್ರೈಮ್‌ ಸ್ಮಾರ್ಟ್‌ಫೋನ್ ಬಿಡುಗಡೆ!..ಕ್ವಾಡ್‌ ಕ್ಯಾಮೆರಾ ವಿಶೇಷ!

ವಿವೋ ಕಂಪನಿಯು ತಮ್ಮ ಎಸ್‌ ಸರಣಿಯಲ್ಲಿ ಹೊಸದಾಗಿ ವಿವೋ S1 ಪ್ರೈಮ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 9 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಡೈಮಂಡ್ ಆಕಾರದಲ್ಲಿ ರಚನೆಯಲ್ಲಿ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿರುವುದು ಪ್ರಮುಖ ಅಟ್ರ್ಯಾಕ್ಷ್‌ನ ಆಗಿದೆ.

ವಿವೋ

ಹೌದು, ವಿವೋ ಸಂಸ್ಥೆಯ ವಿವೋ S1 ಪ್ರೈಮ್‌ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. 48ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದ್ದು, ಸೆಲ್ಫಿಗಾಗಿ 16ಎಂಪಿ ಸೆನ್ಸಾರ್‌ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ 4,500mAh ಬ್ಯಾಟರಿ ಬ್ಯಾಕ್‌ಅಪ್‌ನ ಸೌಲಭ್ಯದ ಜೊತೆಗೆ ಹೈ ಕ್ಲಾಸ್‌ ಲುಕ್ ಪಡೆದಿದೆ. ವಿವೋ S1 ಪ್ರೈಮ್‌ ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ವಿವೋ S1 ಪ್ರೈಮ್‌ ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್‌ ರೆಸಲ್ಯೂಶನ್ ಸಾಮರ್ಥ್ಯದ 6.38 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ ಅನುಪಾತವು ಉತ್ತಮವಾಗಿದ್ದು, ವಿಶಾಲ ಡಿಸ್‌ಪ್ಲೇ ವಿಡಿಯೊ ವೀಕ್ಷಣೆಗೆ ಅತ್ಯುತ್ತಮ ಎನಿಸಲಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ವಿವೋ S1 ಪ್ರೈಮ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್‌ ಅನ್ನು ಹೊಂದಿದ್ದು, ಇದರೊಂದಿಗೆ ಆಂಡ್ರಾಯ್ಡ್‌ ಪೈ 9 ಓಎಸ್ ಬೆಂಬಲ ಒದಗಿಸಲಾಗಿದೆ. 8 GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಇದರೊಟ್ಟಿಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಮೆಮೊರಿ ವಿಸ್ತರಿಸಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ಸ್ಪೆಷಲ್

ಕ್ಯಾಮೆರಾ ಸ್ಪೆಷಲ್

ವಿವೋ S1 ಪ್ರೈಮ್‌ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡಿರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿದೆ. ಇನ್ನು ಮೂರನೇ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿವೆ. ಇದರೊಂದಿಗೆ 16ಎಂಪಿ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ವಿವೋ S1 ಪ್ರೈಮ್‌ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯದ ಪವರ್‌ಫುಲ್ ಬ್ಯಾಟರಿಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ವೈಫೈ, ಬ್ಲೂಟೂತ್, ಜಿಪಿಎಸ್‌, ನಂತಹ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಐಸ್‌ ಲೆಕ್‌ ಬ್ಲೂ ಮತ್ತು ಪೆಟ್‌ ಪೌಡರ್‌ ಕಲರ್‌ ಆಯ್ಕೆಗಳನ್ನು ಹೊಂದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ವಿವೋ S1 ಪ್ರೈಮ್‌ ಸ್ಮಾರ್ಟ್‌ಫೋನ್ ಮಾಯನ್ಮಾರ್‌ನಲ್ಲಿ ಲಾಂಚ್ ಆಗಿದೆ. ಈ ಫೋನ್ GB RAM ಮತ್ತು 128GB ವೇರಿಯಂಟ್‌ ಆಯ್ಕೆ ಹೊಂದಿದೆ. ಇದರ ಬೆಲೆಯು MYR 389,800 (ಭಾರತದಲ್ಲಿ ಅಂದಾಜು 21,700ರೂ. ಆಗಿದೆ) ಹಾಗೆಯೇ ಬ್ಲ್ಯಾಕ್‌ ಹಾಗೂ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯ.

Best Mobiles in India

English summary
Vivo S1 Prime is priced at MYR 389,800 (roughly Rs. 21,700) for 8GB + 128GB storage model.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+