Home
ಸುದ್ದಿಜಾಲ

ವಿವೋ S1 ಪ್ರೊ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಕಡಿತ!

ವಿವೋ ಕಂಪನಿಯ S ಸರಣಿಯ ಸ್ಮಾರ್ಟ್‌ಫೋನ್‌ಗಳಲ್ಲಿನ ವಿವೋ S1 ಪ್ರೊ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆ ಕಂಡಿದೆ. ಈ ಫೋನ್ ಮಾರ್ಚ್‌ ತಿಂಗಳಿನಲ್ಲಿ ಒಮ್ಮೆ ಬೆಲೆ ಕಡಿತ ಆಗಿತ್ತು. ಆದ್ರೆ ನಂತರದಲ್ಲಿ GST ಹೆಚ್ಚಳದಿಂದಾಗಿ ಬೆಲೆಯಲ್ಲಿಯೂ ಹೆಚ್ಚಳ ಮಾಡಲಾಗಿತ್ತು. ಆದ್ರೆ ಇದೀಗ ಮತ್ತೆ ಪ್ರೈಸ್‌ಟ್ಯಾಗ್‌ನಲ್ಲಿ ಕಡಿತವಾಗಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಜೊತೆಗೆ 4,500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಸಹ ಒಳಗೊಂಡಿದೆ.

ವಿವೋ ಎಸ್‌1 ಪ್ರೊ

ಹೌದು, ವಿವೋ ಸಂಸ್ಥೆಯ ವಿವೋ ಎಸ್‌1 ಪ್ರೊ ಸ್ಮಾರ್ಟ್‌ಫೋನ್ ಇದೀಗ 1000ರೂ. ಬೆಲೆ ಇಳಿಕೆ ಕಂಡಿದೆ. 20,990ರೂ.ಗಳ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದ್ದ ಈ ಫೋನ್ ಈಗ ಬೆಲೆ ಕಡಿತದಿಂದಾಗಿ 19,990ರೂ.ಗಳಿಗೆ ಲಭ್ಯವಾಗಲಿದೆ. ಪ್ರಮುಖ ಇ ಕಾಮರ್ಸ್‌ಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ತಾಣದಲ್ಲಿ ಹೊಸ ದರ ಕಾಣಿಸಿದೆ. ಇನ್ನು ಈ ಫೋನ್ ಮಿಸ್ಟ್ರಿ ಬ್ಲ್ಯಾಕ್, ಬ್ಲೂ, ವೈಟ್‌ ಬಣ್ಣಗಳಲ್ಲಿ ಲಭ್ಯವಾಗಲಿದೆ. ವಿವೋ ಎಸ್‌1 ಪ್ರೊ ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ವಿವೋ ಎಸ್‌1 ಪ್ರೊ ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್‌ ರೆಸಲ್ಯೂಶನ್ ಸಾಮರ್ಥ್ಯದ 6.38 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಟಿಯರ್ಡ್ರಾಪ್ ನಾಚ್ ಮಾದರಿಯನ್ನು ಹೊಂದಿದ್ದು, ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಡಿಸ್‌ಪ್ಲೇ ಮತ್ತು ಬಾಹ್ಯ ರಚನೆಯ ನಡುವಿನ ರೇಶಿಯೋ ಶೇ.83.4% ರಷ್ಟಿದೆ. ವಿಶಾಲ ಡಿಸ್‌ಪ್ಲೇ ವಿಡಿಯೊ ವೀಕ್ಷಣೆಗೆ ಅತ್ಯುತಮ ಎನಿಸಲಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ವಿವೋ ಎಸ್‌1 ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್‌ ಅನ್ನು ಹೊಂದಿದ್ದು, ಇದರೊಂದಿಗೆ ಆಂಡ್ರಾಯ್ಡ್‌ ಪೈ 9 ಓಎಸ್ ಬೆಂಬಲ ಒದಗಿಸಲಾಗಿದೆ. 8 GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಇದರೊಟ್ಟಿಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಮೆಮೊರಿ ವಿಸ್ತರಿಸಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ಸ್ಪೆಷಲ್

ಕ್ಯಾಮೆರಾ ಸ್ಪೆಷಲ್

ವಿವೋ ಎಸ್‌1 ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡಿರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿದೆ. ಇನ್ನು ಮೂರನೇ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿವೆ. ಇದರೊಂದಿಗೆ 32ಎಂಪಿ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ವಿವೋ ಎಸ್‌1 ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯದ ಪವರ್‌ಫುಲ್ ಬ್ಯಾಟರಿಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ವೈಫೈ, ಬ್ಲೂಟೂತ್, ಜಿಪಿಎಸ್‌, ನಂತಹ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಐಸ್‌ ಲೆಕ್‌ ಬ್ಲೂ ಮತ್ತು ಪೆಟ್‌ ಪೌಡರ್‌ ಕಲರ್‌ ಆಯ್ಕೆಗಳನ್ನು ಹೊಂದಿದೆ.

Best Mobiles in India

English summary
Vivo S1 Pro price cut is visible on the Vivo India online store.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+