ವಿವೋ S10 ಸ್ಮಾರ್ಟ್‌ಫೋನ್ ಬಿಡುಗಡೆ! ಡ್ಯುಯೆಲ್ ಸೆಲ್ಫಿ ಕ್ಯಾಮೆರಾ!
ವಿವೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನ ಸೆಳೆದಿದೆ. ಸದ್ಯ ಇದೀಗ ವಿವೋ ಕಂಪೆನಿ ತನ್ನ ವಿವೋ ಎಸ್ ಸರಣಿಯಲ್ಲಿ ಹೊಸ ವಿವೋ S10 ಮತ್ತು ವಿವೊ S10 ಪ್ರೊ ಅನ್ನು ಬಿಡುಗಡೆ ಮಾಡಿದೆ. ಈ ಎರಡೂ ಫೋನ್‌ಗಳು 90Hz ಸೂಪರ್ ಅಮೋಲೆಡ್ ಡಿಸ್‌ಪ್ಲೇ, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಮತ್ತು ಮೀಡಿಯಾ ಟೆಕ್ ಡೈಮೆನ್ಸಿಟಿ 1100 SoC ಪ್ರೊಸೆಸರ್ ಅನ್ನು ಒಳಗೊಂಡಿವೆ.

ಹೌದು, ವಿವೋ ಕಂಪೆನಿ ಹೊಸದಾಗಿ ವಿವೋ S10 ಮತ್ತು ವಿವೊ S10 ಪ್ರೊ ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು 44W ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತವೆ. ಇದರಲ್ಲಿ ವಿವೊ S10 ಸ್ಮಾರ್ಟ್‌ಫೋನ್ 6.44-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಒಳಗೊಂಡಿದೆ. ಹಾಗಾದ್ರೆ ವಿವೊ S10 ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ S10 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು 20: 9 ರಚನೆಯ ಅನುಪಾತ ಹೊಂದಿದ್ದು, ಹೆಚ್‌ಡಿಆರ್ 10 + ಬೆಂಬಲವನ್ನು ಹೊಂದಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 1100 SoC ಪ್ರೊಸೆಸರ್ ಹೊಂದಿದೆ. ಇದು 10 ಆಂಡ್ರಾಯ್ಡ್ 11 ನಲ್ಲಿ ಒರಿಜಿನೋಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಪಡದುಕೊಂಡಿದೆ.

ಕ್ಯಾಮೆರಾ ವಿಶೇಷ
ವಿವೋ S10 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದು 4 ಕೆ ವಿಡಿಯೋ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 44 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಹೊಂದಿರುವ ಡ್ಯುಯೆಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ವಿವೋ S10 ಸ್ಮಾರ್ಟ್‌ಫೋನ್ 4,050mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ, ಇದು 44W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.2, ಜಿಪಿಎಸ್ / ಎ-ಜಿಪಿಎಸ್, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಈ ಫೋನ್ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ವಿವೋ S10 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 128GB ಶೇಖರಣಾ ರೂಪಾಂತರಕ್ಕೆ ಸಿಎನ್‌ವೈ 2,799 (ಸರಿಸುಮಾರು ರೂ. 32,300) ನಿಗದಿಪಡಿಸಲಾಗಿದೆ. ಆದರೆ 8GB RAM + 256GB ಶೇಖರಣಾ ಸಂರಚನೆಯು ಸಿಎನ್‌ವೈ 2,999 (ರೂ. 34,600) ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಜುಲೈ 23 ರಿಂದ ಚೀನಾದಲ್ಲಿ ಕಪ್ಪು, ಗ್ರೇಡಿಯಂಟ್, ಲೈಮ್ ಮತ್ತು ವೆಲ್ವೆಟ್ ವೈಟ್ ಅನ್ನು ಒಳಗೊಂಡಿರುವ ನಾಲ್ಕು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ.


Click it and Unblock the Notifications








