ವಿವೋ S15 ಮತ್ತು ವಿವೋ S15 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

|

ವಿವೋ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿಗಳಲ್ಲಿ ಒಂದಾಗಿದೆ. ಈಗಾಗಲೇ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಸದ್ಯ ಇದೀಗ ವಿವೋ S15 ಪ್ರೊ ಮತ್ತು ವಿವೋ S15 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು 120Hz ಡಿಸ್‌ಪ್ಲೇ ಮತ್ತು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ.

ವಿವೋ

ಹೌದು, ವಿವೋ ಕಂಪೆನಿ ವಿವೋ S15 ಮತ್ತು ವಿವೋ S15 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದರಲ್ಲಿ ವಿವೋ S15 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ಅನ್ನು ಹೊಂದಿದೆ. ಆದರೆ ವಿವೋ S15 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ S15 ಪ್ರೊ ಸ್ಮಾರ್ಟ್‌ಫೋನ್‌

ವಿವೋ S15 ಪ್ರೊ ಸ್ಮಾರ್ಟ್‌ಫೋನ್‌

ವಿವೋ S15 ಪ್ರೊ ಸ್ಮಾರ್ಟ್‌ಫೋನ್‌ 1,080x2,376 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.8:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಪ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಈ ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಅನ್ನು OriginOS ಓಷನ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿದೆ.

ವಿವೋ S15 ಸ್ಮಾರ್ಟ್‌ಫೋನ್‌

ವಿವೋ S15 ಸ್ಮಾರ್ಟ್‌ಫೋನ್‌

ವಿವೋ S15 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9ರಚನೆಯ ಅನುಪಾತವನ್ನು ಹೊಂದಿದ್ದು, 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ಆಧಾರಿತ OriginOS ಓಷನ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಫೋನ್ ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ S15 ಪ್ರೊ ಸ್ಮಾರ್ಟ್‌ಫೋನ್‌ 8GB RAM + 256GB ಮಾದರಿಗೆ CNY 3,399 (ಸುಮಾರು 39,000ರೂ)ಗೆ ನಿಗದಿಪಡಿಸಲಾಗಿದೆ. ಇನ್ನು ಈ ಫೋನ್ 12GB + 256GB ಮಾದರಿಗೆ CNY 3,699 (ಸುಮಾರು 42,600ರೂ) ಬೆಲೆ ಹೊಂದಿರುತ್ತದೆ. ಆದರೆ ವಿವೋ S15 ಫೋನ್‌ 8GB + 128GB ಮಾದರಿಗೆ CNY 2,699 (ಸುಮಾರು 31,000ರೂ)ಹೊಂದಿದೆ. ಇದರ 8GB + 256GB ಮಾದರಿಗೆ CNY 2,999 (ಸುಮಾರು 34,500ರೂ)ಬೆಲೆ ಹೊಂದಿದೆ.

Best Mobiles in India

English summary
Vivo S15 Pro and Vivo S15 were launched on Thursday. Both new Vivo phones carry 120Hz displays and triple rear cameras.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X