Home
ಸುದ್ದಿಜಾಲ

ವಿವೋದಿಂದ ಮತ್ತೆ ಮೂರು ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌! ಅಚ್ಚರಿಯ ಕ್ಯಾಮೆರಾ!

ಕ್ಯಾಮೆರಾ ಕೇಂದ್ರಿತ ಫೀಚರ್ಸ್‌ಗಳಿಗೆ ವಿವೋ ಸ್ಮಾರ್ಟ್‌ಫೋನ್‌ಗಳು ಪ್ರಸಿದ್ಧಿ ಪಡೆದುಕೊಂಡಿವೆ. ವಿವೋ ಕಂಪೆನಿ ತನ್ನ ಸ್ಮಾರ್ಟ್‌ಫೋನ್‌ಗಳಲ್ಲಿ ಆಕರ್ಷಕ ಕ್ಯಾಮೆರಾ ವಿನ್ಯಾಸ ಹಾಗೂ ಡಿಸ್‌ಪ್ಲೇ ಡಿಸೈನ್‌ ಕಾರಣಕ್ಕೆ ಸಾಕಷ್ಟು ಸದ್ದು ಮಾಡಿದೆ. ಸದ್ಯ ಇದೀಗ ವಿವೋ ಕಂಪೆನಿ ವಿವೋ S16 ಸರಣಿಯನ್ನು ಪರಿಚಯಿಸಿದೆ. ಈ ಸರಣಿಯಲ್ಲಿ ವಿವೋ S16, ವಿವೋ S16ಪ್ರೊ ಮತ್ತು ವಿವೋ S16e ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ಬಹುತೇಕ ಒಂದೇ ಮಾದರಿಯ ಫೀಚರ್ಸ್‌ಗಳನ್ನು ಪಡೆದುಕೊಂಡಿವೆ.

ವಿವೋ

ಹೌದು, ವಿವೋ ಕಂಪೆನಿ ವಿವೋ S16 ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ಗಳು ಫೀಚರ್ಸ್‌ಗಳಲ್ಲಿ ಸಾಮ್ಯತೆ ಕಂಡು ಬಂದರೂ ಕೂಡ ಪ್ರೊಸೆಸರ್‌ ವೇಗದಲ್ಲಿ ಭಿನ್ನತೆಯನ್ನು ಕಾಣಬಹುದಾಗಿದೆ. ಆದರೆ ಎಲ್ಲಾ ಮೂರು ಸ್ಮಾರ್ಟ್‌ಫೋನ್‌ಗಳು ಕೂಡ 66W ವೇಗದ ಚಾರ್ಜಿಂಗ್‌ ಬೆಂಬಲಿಸುವ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ S16 ಪ್ರೊ

ವಿವೋ S16 ಪ್ರೊ

ವಿವೋ S16 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 8200 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ OriginOS 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 50MP ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಿದೆ.

ವಿವೋ S16

ವಿವೋ S16

ವಿವೋ S16 ಸ್ಮಾರ್ಟ್‌ಫೋನ್‌ ಕೂಡ 6.78 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಆಗಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇನ್‌ಬಿಲ್ಟ್‌ ಸ್ಟೋರೇಜ್‌ ಪಡೆದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಯೂನಿಟ್ ಅನ್ನು ಒಳಗೊಂಡಿದೆ. ಇದಲ್ಲದೆ 50MP ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ವಿವೋ S16e

ವಿವೋ S16e

ವಿವೋ S16e ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಬೆಂಬಲಿಸುವ 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಸ್ಯಾಮ್‌ಸಂಗ್‌ ಎಕ್ಸಿನೋಸ್‌ 1080 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP, ಎರಡನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ S16 ಸರಣಿ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಇದರಲ್ಲಿ ವಿವೋ S16 ಬೆಲೆ CNY 2,499 (ಅಂದಾಜು 29,600ರೂ) ಮತ್ತು ವಿವೋ S16 ಪ್ರೊ ಬೆಲೆ CNY 3,299 (ಅಂದಾಜು 39,100ರೂ) ಬೆಲೆಯಲ್ಲಿ ಪ್ರಾರಂಭವಾಗಲಿದೆ. ಆದರೆ ವಿವೋ S16e ಬೆಲೆ CNY 2,099 (ಸುಮಾರು 24,900ರೂ)ಬೆಲೆಯಲ್ಲಿ ಬರಲಿದೆ. ಈ ಸರಣಿಯು ಸ್ಟಾರ್ರಿ ನೈಟ್ ಬ್ಲ್ಯಾಕ್, ಹಯಸಿಂತ್ ಪರ್ಪಲ್ ಮತ್ತು ಸೀ ಫೋಮ್ ಗ್ರೀನ್ ಶ್ಯಾಡೋ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಈ ಸರಣಿಯು ಭಾರತದಲ್ಲಿ ಬೇರೆ ಹೆಸರಿನೊಂದಿಗೆ ಎಂಟ್ರಿಯಾಗುವ ಸಾಧ್ಯತೆಯಿದೆ.

Best Mobiles in India

English summary
Vivo S16 series With 120Hz AMOLED Displays Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+