Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ S17e ಸ್ಮಾರ್ಟ್‌ಫೋನ್‌! ಸ್ಟನಿಂಗ್‌ ಕ್ಯಾಮೆರಾ ಫೀಚರ್ಸ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಬ್ರ್ಯಾಂಡ್‌ಗಳಲ್ಲಿ ವಿವೋ ಕಂಪೆನಿ ಕೂಡ ಒಂದಾಗಿದೆ. ತನ್ನ ಕ್ಯಾಮೆರಾ ಕೇಂದ್ರಿತ ಸ್ಮಾರ್ಟ್‌ಫೋನ್‌ಗಳಿಂದಾಗಿ ಜಾಗತಿಕವಾಗಿ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ವಿವೋ ಇಒದೀಗ ತನ್ನ ಹೊಸ ವಿವೋ S17e ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.

ಹೌದು, ವಿವೋ S17e ಸ್ಮಾರ್ಟ್‌ಫೋನ್‌ ಟೆಕ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ವಿವೋ S16eನ ಉತ್ತರಾಧಿಕಾರಿಯಾಗಿದೆ. ವಿವೋ S17e ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 4600mAh ಬ್ಯಾಟರಿಯನ್ನು ಹೊಂದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ S17e ಸ್ಮಾರ್ಟ್‌ಫೋನ್‌! ಸ್ಟನಿಂಗ್‌ ಕ್ಯಾಮೆರಾ

ವಿವೋ S17e ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ S17e ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್‌ ರೇಟ್‌ ಬೆಂಬಲಿಸುವ 3D ಕರ್ವ್ಡ್ ಅಮೋಲೆಡ್‌ ಡಿಸ್‌ಪ್ಲೇ ಆಗಿದೆ. ಇನ್ನು ಡಿಸ್‌ಪ್ಲೇ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ವಿವೋ S17e ಪ್ರೊಸೆಸರ್‌ ಸಾಮರ್ಥ್ಯ ಹೇಗಿದೆ?

ವಿವೋ S17e ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7200 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಟಾಪ್‌ ಎಂಡ್‌ ಆಯ್ಕೆಯಲ್ಲಿ 12GB+256GB ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಕೂಡ ಲಭ್ಯವಾಗಲಿದೆ ಎಂದು ಕಂಪೆನಿ ಹೇಳಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ S17e ಸ್ಮಾರ್ಟ್‌ಫೋನ್‌! ಸ್ಟನಿಂಗ್‌ ಕ್ಯಾಮೆರಾ

ವಿವೋ S17e ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ವಿವೋ S17e ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ OIS ಅನ್ನು ಒಳಗೊಂಡಿದೆ. ಇದರ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ ರಿಯರ್‌ ಕ್ಯಾಮೆರಾದಲ್ಲಿ ಔರಾ ಲೈಟ್ ಎಂದು ಉಲ್ಲೇಖಿಸುವ ವಿಶಿಷ್ಟವಾದ ರಿಂಗ್ LED ಸೆನ್ಸಾರ್‌ ಅನ್ನು ಕೂಡ ಪಡೆದುಕೊಂಡಿದೆ.

ವಿವೋ S17e ಬ್ಯಾಟರಿ ಬ್ಯಾಕ್‌ಅಪ್‌

ವಿವೋ S17e ಸ್ಮಾರ್ಟ್‌ಫೋನ್‌ 4600mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 66W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈಫೈ 6 802.11 ac, ಬ್ಲೂಟೂತ್ 5.3, GPS (L1 + L5), USB ಟೈಪ್-C ಮತ್ತು NFC ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಡ್ಯುಯಲ್ ಸಿಮ್ ಬೆಂಬಲ, USB ಟೈಪ್-ಸಿ ಆಡಿಯೋ, ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಹೈ-ರೆಸ್ ಆಡಿಯೊವನ್ನು ಒಳಗೊಂಡಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ S17e ಸ್ಮಾರ್ಟ್‌ಫೋನ್‌! ಸ್ಟನಿಂಗ್‌ ಕ್ಯಾಮೆರಾ

ಬೆಲೆ ಮತ್ತು ಲಭ್ಯತೆ

ವಿವೋ S17e ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ 8GB+128GB ಸ್ಟೋರೇಜ್‌ ಆಯ್ಕೆಗೆ 2099 yuan (ಅಂದಾಜು 24,778ರೂ.)ಬೆಲೆ ಹೊಂದಿದೆ. ಇದರ 8GB+256GB ಸ್ಟೋರೇಜ್‌ ಆಯ್ಕೆಗೆ 2299 yuan (ಅಂದಾಜು 27,139ರೂ.)ಬೆಲೆಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ವಿಕ್ ಸ್ಯಾಂಡ್ ಗೋಲ್ಡ್, ಸನ್ನಿ ಬ್ಲೂ ಮತ್ತು ಮಿಡ್ನೈಟ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Vivo S17e with Dimensity 7200 SoC launched: specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+