Vivo: ವಿವೋ ಸಂಸ್ಥೆಯಿಂದ ಹೊಸ ಫೋನ್ ಲಾಂಚ್!..50MP ಸೆಲ್ಫಿ ಕ್ಯಾಮೆರಾ ವಿಶೇಷ!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ಮತ್ತೆ ಧೂಳೆಬ್ಬಿಸಿದೆ. ತನ್ನ ವಿವೋ S18 ಸರಣಿ ಫೋನ್‌ಗಳ ಮೂಲಕ ಅಬ್ಬರದ ಎಂಟ್ರಿ ನೀಡಿದ್ದು ಟೆಕ್ ವಲಯವೇ ಶೇಕ್ ಆಗುವಂತೆ ಮಾಡಿದೆ. ಇನ್ನು ಈ ಸರಣಿಯಲ್ಲಿ ವಿವೋ S18, ವಿವೋ S18 ಪ್ರೊ ಮತ್ತು ವಿವೋ S18e ಸ್ಮಾರ್ಟ್‌ಫೋನ್‌ಗಳನ್ನು ಅನಾವರಣಗೊಳಿಸಿದೆ. ಇದರಲ್ಲಿ ವಿವೋ S18 ಪ್ರೊ ಟಾಪ್ ಎಂಡ್ ಮಾಡೆಲ್ ಆಗಿ ಗುರುತಿಸಿಕೊಂಡಿದೆ.
ಹೌದು, ವಿವೋ S18 ಪ್ರೊ ಸ್ಮಾರ್ಟ್‌ಫೋನ್ ಮೊಬೈಲ್ ಮಾರುಕಟ್ಟೆಯಲ್ಲಿ ಅಬ್ಬರಿಸುವ ಸೂಚನೆ ನೀಡಿದೆ. ಈ ಸ್ಮಾರ್ಟ್‌ಫೋನ್ ಡಿಸೈನ್ ಮತ್ತು ಸ್ಟೈಲಿಶ್ ಲುಕ್ ಎಲ್ಲರನ್ನೂ ಗಮನಸೆಳೆಯುವಂತಿದೆ. ಇದರ ರಿಯರ್ ಪ್ಯಾನಲ್ ಡಿಸೈನ್ ಸ್ಮಾರ್ಟ್‌ಫೋನ್ ಖರೀದಿಸುವವರನ್ನು ಮನಸೂರೆಗೊಳ್ಳುವಂತೆ ಮಾಡಲಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ S18 ಪ್ರೊ ಡಿಸ್‌ಪ್ಲೇ ಹೇಗಿದೆ?
ವಿವೋ S18 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2800 × 1260 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತದಲ್ಲಿದ್ದು, DCI-P3 ಕಲರ್ ಗ್ಯಾಮಟ್ ಅನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 2800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ನೀಡಲಿದೆ.
ವಿವೋ S18 ಪ್ರೊ ಪ್ರೊಸೆಸರ್ ದಕ್ಷತೆ ಏನಿದೆ?
ವಿವೋ S18 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಮಾಲಿ-G715 Immortalis MP11 GPU ಸಪೋರ್ಟ್ ಪಡೆದಿದ್ದು, ಆಂಡ್ರಾಯ್ಡ್ 14 ಆಧಾರಿತ ಮೂಲ OS 4ನಲ್ಲಿ ರನ್ ಆಗಲಿದೆ. ಹಾಗೆಯೇ 12GB RAM ಮತ್ತು 256GB ಹಾಗೂ 16GB RAM ಮತ್ತು 512GB ಇಂಟರ್ ಸ್ಟೋರೇಜ್ ವೇರಿಯೆಂಟ್‌ನೊಂದಿಗೆ ಬರಲಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ವಿವೋ S18 ಪ್ರೊ ಕ್ಯಾಮೆರಾ ಸೆಟಪ್ ಏನಿದೆ?
ವಿವೋ S18 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX 920 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ JN1 ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX 663 ಟೆಲಿಫೋಟೋ ಸೆನ್ಸಾರ್ ಹೊಂದಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ವಿವೋ S18 ಪ್ರೊ ಬ್ಯಾಟರಿ ಮತ್ತು ಇತರೆ
ವಿವೋ S18 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, 5GHZ, ಬ್ಲೂಟೂತ್ 5.3, USB ಟೈಪ್-C, NFC, GPS ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಸಹ ಬೆಂಬಲಿಸಲಿದೆ.

ವಿವೋ S18 ಪ್ರೊ ಬೆಲೆ ಮತ್ತು ಲಭ್ಯತೆ
ವಿವೋ S18 ಪ್ರೊ ಸ್ಮಾರ್ಟ್‌ಫೋನ್ 12GB + 256GB ಆಯ್ಕೆಗೆ 3,199 ಯುವಾನ್ (ಅಂದಾಜು 37,741ರೂ)ಬೆಲೆ ಹೊಂದಿದೆ.
ವಿವೋ S18 ಪ್ರೊ ಸ್ಮಾರ್ಟ್‌ಫೋನ್ 16GB + 256GB ಆಯ್ಕೆಗೆ 3,499 ಯುವಾನ್ (ಅಂದಾಜು 41,280ರೂ)ಬೆಲೆ ಹೊಂದಿದೆ.
ವಿವೋ S18 ಪ್ರೊ ಸ್ಮಾರ್ಟ್‌ಫೋನ್ 16GB + 512GB ಆಯ್ಕೆಗೆ 3,699 ಯುವಾನ್ (ಅಂದಾಜು 43,640ರೂ)ಬೆಲೆ ಹೊಂದಿದೆ.
ವಿವೋ S18 ಪ್ರೊ ಮಾದರಿಯು ಜನವರಿ 13, 2024 ರಂದು ಮಾರಾಟವಾಗಲಿದೆ.


Click it and Unblock the Notifications








