Home
ಸುದ್ದಿಜಾಲ

ವಿವೋದ ಹೊಸ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ! ಇದು ನಿಮ್ಮ ಮನಗೆಲ್ಲುವುದು ಪಕ್ಕಾ!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ಫೋನ್‌ಗಳಿಗೆ ಅದರದ್ದೇ ಆದ ವಿಶೇಷ ಸ್ಥಾನವಿದೆ. ತನ್ನ ವಿಭಿನ್ನ ಕ್ಯಾಮೆರಾ ಫೀಚರ್ಸ್‌ಗಳಿಂದ ವಿವೋ ಫೋನ್‌ಗಳು ಆಕರ್ಷಿಸುತ್ತಾ ಬಂದಿವೆ. ಇದೀಗ ಅದೇ ಹಾದಿಯಲ್ಲಿ ವಿವೋ S18 ಸರಣಿ ಕೂಡ ಎಂಟ್ರಿ ನೀಡಲು ತಯಾರಿ ನಡೆಸಿದೆ. ಇದರ ನಡುವೆ ಈ ಸರಣಿಯ ಫೋನ್‌ಗಳ ಬಗ್ಗೆ ಆನ್‌ಲೈನ್‌ನಲ್ಲಿ ಹಲವು ವಿಷಯಗಳು ಹರಿದಾಡುತ್ತಿವೆ.

ಹೌದು, ವಿವೋ S18 ಸರಣಿಯಲ್ಲಿ ವಿವೋ S18 ಸ್ಮಾರ್ಟ್‌ಫೋನ್‌ ಸ್ಟೈಲಿಶ್‌ ಲುಕ್‌ನೊಂದಿಗೆ ಎಂಟ್ರಿ ನೀಡಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಗೀಕ್‌ಬೆಂಚ್ ಬೆಂಚ್‌ಮಾರ್ಕಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಕಾಣಿಸಿಕೊಂಡಿದೆ. ಅದರಂತೆ ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜನ್ 3SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗಾದ್ರೆ ವಿವೋ S18 ಸ್ಮಾರ್ಟ್‌ಫೋನ್‌ನಲ್ಲಿ ನಿರೀಕ್ಷಿಸಬಹುದಾದ ಫೀಚರ್ಸ್‌ಗಳ ವಿವರ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ವಿವೋದ ಹೊಸ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ! ಇದು ನಿಮ್ಮ ಮನಗೆಲ್ಲುವುದು ಪಕ್ಕಾ

ವಿವೋ S18 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ನಿರೀಕ್ಷೆ?
ವಿವೋ S18 ಸ್ಮಾರ್ಟ್‌ಫೋನ್‌ನಲ್ಲಿ 6.82 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ನಿರೀಕ್ಷಿಸಲಾಗಿದೆ. ಅದರಂತೆ ಈ ಡಿಸ್‌ಪ್ಲೇ OLED ಸ್ಕ್ರೀನ್ ಹೊಂದಿರಲಿದ್ದು, 1800 x 3440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿರಲಿದೆ. ಜೊತೆಗೆ ಡಿಸ್‌ಪ್ಲೇ 569 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದ್ದು, 2800 ನಿಟ್ಸ್‌ ಬ್ರೈಟ್‌ನೆಸ್‌ ನೀಡಲಿದೆ. ಅಲ್ಲದೆ 144 Hz ರಿಫ್ರೆಶ್ ರೇಟ್‌ ಮತ್ತು 480 Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲಿಸಲಿದೆ.

ವಿವೋ S18 ಪ್ರೊಸೆಸರ್‌ ಏನಿರಲಿದೆ?
ವಿವೋ S18 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 7 Gen 3SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿರಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಸಿಗಬಹುದು ಎನ್ನಲಾಗಿದೆ.

ವಿವೋದ ಹೊಸ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ! ಇದು ನಿಮ್ಮ ಮನಗೆಲ್ಲುವುದು ಪಕ್ಕಾ

ವಿವೋ S18 ಕ್ಯಾಮೆರಾ ಸೆಟ್‌ಅಪ್‌
ವಿವೋ S18 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ನಿರೀಕ್ಷಿಸಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ವಿವೋ S18 ಬ್ಯಾಟರಿ ಮತ್ತು ಇತರೆ
ವಿವೋ S18 ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದ್ದು, 67W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, ಬ್ಲೂಟೂತ್ v5.3, ವೈಫೈ, NFC, USB-C v2.0ಅನ್ನು ಬೆಂಬಲಿಸುವುದು ಪಕ್ಕಾ ಎನ್ನಲಾಗಿದೆ. ಇದಲ್ಲದೆ ಅಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.

ವಿವೋದ ಹೊಸ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ! ಇದು ನಿಮ್ಮ ಮನಗೆಲ್ಲುವುದು ಪಕ್ಕಾ

ಇನ್ನು ವಿವೋ ಕಂಪೆನಿ ಇತ್ತೀಚಿಗೆ ವಿವೋ Y100i 5G ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.64 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2388 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ ಪಂಚ್-ಹೋಲ್ ಕಟೌಟ್ ವಿನ್ಯಾಸವನ್ನು ಪಡೆದುಕೊಂಡಿದ್ದು, 60Hz ರಿಫ್ರೆಶ್ ರೇಟ್‌ ಹಾಗೂ 93.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಇನ್ನು ವಿವೋ Y100i 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು Adreno 619 GPU ಸಪೊರ್ಟ್‌ ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು ವರ್ಚುವಲ್ RAM ವಿಸ್ತರಣೆಗೆ ಬೆಂಬಲವನ್ನು ನೀಡಲಿದ್ದು, RAM ಅನ್ನು 12GB ವರೆಗೆ ವಿಸ್ತರಿಸಬಹುದು.

Best Mobiles in India

English summary
Vivo S18 Smartphone to launch soon, gets its Features revealed
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+