Home
ಸುದ್ದಿಜಾಲ

ವಿವೋ S18e ಸ್ಮಾರ್ಟ್‌ಫೋನ್‌ ಲಾಂಚ್‌! ಸೆಲ್ಫಿ ಪ್ರಿಯರ ಹೃದಯಕ್ಕೆ ಲಗ್ಗೆ ಇಡೋದು ಪಕ್ಕಾ!

ಸೆಲ್ಫಿ ಪ್ರಿಯರ ನೆಚ್ಚಿನ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ವಿವೋ ಮತ್ತೊಂದು ಫೋನ್‌ ಬಿಡುಗಡೆ ಮಾಡಿದೆ. ತನ್ನ ವಿವೋ S18 ಸರಣಿಯಲ್ಲಿ ಇದೀಗ ಹೊಸದಾಗಿ ವಿವೋ S18e ಫೋನ್‌ ಅನ್ನು ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ವಿವೋ S18e ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ನಂತಹ ಮಲ್ಟಿ ಅನ್‌ಲಾಕಿಂಗ್ ವಿಧಾನಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ S18e ಫೋನ್‌ ಲಾಂಚ್‌! ಸೆಲ್ಫಿ ಪ್ರಿಯರ ಹೃದಯಕ್ಕೆ ಲಗ್ಗೆ ಇಡೋದು ಪಕ್ಕಾ

ವಿವೋ S18e ಡಿಸ್‌ಪ್ಲೇ ರಚನೆ ಹೇಗಿದೆ?
ವಿವೋ S18e ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 91.99% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು DCI-P3 ಬಣ್ಣದ ಹರವು, 6000000:1 ರ ಕಾಂಟ್ರಾಸ್ಟ್ ಅನುಪಾತದಲ್ಲಿದೆ.

ವಿವೋ S18e ಪ್ರೊಸೆಸರ್ ಹೇಗಿದೆ?
ವಿವೋ S18e ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು Mali-G610 MP4 GPU ಸಪೋರ್ಟ್‌ ಪಡೆದಿದ್ದು, ಆಂಡ್ರಾಯ್ಡ್‌ 14 ಆಧಾರಿತ ಮೂಲ OS 4ನಲ್ಲಿ ರನ್‌ ಆಗಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಿದೆ.

ವಿವೋ S18e ಫೋನ್‌ ಲಾಂಚ್‌! ಸೆಲ್ಫಿ ಪ್ರಿಯರ ಹೃದಯಕ್ಕೆ ಲಗ್ಗೆ ಇಡೋದು ಪಕ್ಕಾ

ವಿವೋ S18e ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ವಿವೋ S18e ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದ್ದು, AURA LED ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ವಿವೋ S18e ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ವಿವೋ S18e ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, 5GHZ, ಬ್ಲೂಟೂತ್ 5.3, USB ಟೈಪ್-C, NFC, GPS ಅನ್ನು ಒಳಗೊಂಡಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಅನ್ನು ನೀಡಲಾಗಿದೆ. ಇದು ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌ ಹೊಂದಿದೆ.

ವಿವೋ S18e ಫೋನ್‌ ಲಾಂಚ್‌! ಸೆಲ್ಫಿ ಪ್ರಿಯರ ಹೃದಯಕ್ಕೆ ಲಗ್ಗೆ ಇಡೋದು ಪಕ್ಕಾ

ವಿವೋ S18e ಬೆಲೆ ಮತ್ತು ಲಭ್ಯತೆ
ವಿವೋ S18e ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಮಾತ್ರ ಅನಾವರಣಗೊಂಡಿದೆ. ಆದರಿಂದ ಇದರ ಬೇಸ್‌ ಮಾಡೆಲ್‌ 12GB RAM + 256GB ಸ್ಟೋರೇಜ್‌ ಆಯ್ಕೆಯು 2,099 ಯುವಾನ್ (ಅಂದಾಜು 25,094ರೂ) ಬೆಲೆಯನ್ನು ಹೊಂದಿದೆ. ಇದರ 12GB RAM + 512GB ಸ್ಟೋರೇಜ್‌ ಆಯ್ಕೆಯು 2,299 ಯುವಾನ್ (ಅಂದಾಜು 27,485ರೂ)ಬೆಲೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಜನವರಿ 13, 2024 ರಿಂದ ಮಾರಾಟವಾಗಲಿದೆ. ಇದು ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Vivo S18e with 80W fast charging launched: Specs Details in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+