ಶೀಘ್ರದಲ್ಲೇ ವಿವೋ S6 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ!

|

ವಿವೊ ಕಂಪೆನಿ ತನ್ನ ವಿಭಿನ್ನ ಫೀಚರ್ಸ್‌ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನದೇ ಆದ ಜನಪ್ರಿಯತೆಯನ್ನ ಪಡೆದುಕೊಂಡಿದೆ. ಅದರಲ್ಲೂ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ವಿವೋ ಕಂಪೆನಿ ಪ್ರತಿ ಭಾರಿಯೂ ಹೊಸತನದ ಫೀಚರ್ಸ್‌ಗಳನ್ನ ಪರಿಚಯಿಸುತ್ತಲೇ ಇದೆ. ಸದ್ಯ ಈಗಾಗಲೇ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದೆ. ಸದ್ಯ ಇದೀಗ ವಿವೋ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ವಿವೋ

ಹೌದು, ಚೀನಾ ಮೂಲದ ವಿವೋ ಕಂಪೆನಿ ತನ್ನ ಹೊಸ ವಿವೋ S6 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್ 980SoC ಪ್ರೊಸೆಸರ್‌ ಸಾಮರ್ಥ್ಯವನ್ನ ಹೊಂದಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹಾಗೂ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ ಎನ್ನಲಾಗ್ತಿದೆ. ಇದಲ್ಲದೆ ಲಬ್ಯ ಮಾಹಿತಿಯ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೋ S6 ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಒಎಲ್‌ಇಡಿ ವಿನ್ಯಾಸವನ್ನ ಹೊಂದಿದ್ದು, 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದ್ದು, ಇದು ಅಮೋಲೆಡ್‌ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಈ ಡಿಸ್‌ಪ್ಲೇಯು ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿರಲಿದೆ ಎನ್ನಲಾಗ್ತಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765 ಜಿ SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM+ 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ S6 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರಲ್ಲಿ ಮುಕ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 33W ಫ್ಲ್ಯಾಶ್‌ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸಲಿದೆ. ಇನ್ನು ವೀಬೊದಲ್ಲಿನ ಟಿಪ್‌ಸ್ಟರ್ ಪ್ರಕಾರ, ವಿವೊ ಎಸ್ 6 ಪ್ರೊ 8GB RAM + 128GB ಆಂತರಿಕ ಶೇಖರಣಾ ಮಾದರಿಗೆ CNY 2,998 (ಸುಮಾರು ರೂ. 32,100) ಬೆಲೆಯನ್ನು ಹೊಂದಿರುತ್ತದೆ. ಅಲ್ಲದೆ 8GB RAM + 256GB ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ CNY 3,298 (ಸುಮಾರು 35,300 ರೂ.)ಗೆ ಲಭ್ಯವಾಗಲಿದೆ ಎನ್ನಲಾಗ್ತಿದೆ.

Best Mobiles in India

English summary
The Vivo S6 Pro will reportedly launch soon. This comes soon after the Vivo S6 with Exynos 980 SoC.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X