5G ನೆಟ್‌ವರ್ಕ್ ಬೆಂಬಲಿಸುವ ವಿವೋ S6 ಸ್ಮಾರ್ಟ್‌ಫೋನ್ ಬಿಡುಗಡೆ!
ಚೀನಾ ಮೂಲದ ವಿವೋ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದಲೇ ಜನಪ್ರಿಯತೆ ಪಡೆದುಕೊಂಡಿದೆ. ಟೆಕ್ ಮಾರುಕಟ್ಟೆಗೆ ಪ್ರತಿ ಭಾರಿಯು ಹೊಸತನ್ನ ಪರಿಚಯಿಸುವ ಖ್ಯಾತಿಯನ್ನ ವಿವೋ ಕಂಪೆನಿ ಪಡೆದುಕೊಂಡಿದೆ. ಈಗಾಗಲೇ ತನ್ನ ವಿವಿಧ ಮಾದರಿಯ ಕ್ಯಾಮೆರಾ ವಿನ್ಯಾಸ, ಸ್ಮಾರ್ಟ್‌ಫೋನ್ ವಿನ್ಯಾಸಗಳಿಂದ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿರುವ ವಿವೋ ಇದೀಗ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ವಿವೋ ತನ್ನ ಹೊಸ ವಿನ್ಯಾಸದ 5G ನೆಟ್‌ವರ್ಕ್ ಬೆಂಬಲಿಸುವ ವಿವೋ S6 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಹೊಸ ತಲೆಮಾರಿನ ಸ್ಮಾರ್ಟ್‌ಫೋನ್ ಆಗಿದ್ದು, 5G ನೆಟ್‌ವರ್ಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಎಕ್ಸಿನೋಸ್ ಪ್ರೊಸೆಸರ್ ಹೊಂದಿದ್ದು, ರಿಯರ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಜೊತೆಗೆ ಇದು ವಾಟರ್‌ಡ್ರಾಪ್- ನಾಚ್ ಶೈಲಿಯ ಡಿಸ್‌ಪ್ಲೇಯನ್ನು ಒಳಗೊಂಡಿದೆ ಎನ್ನಲಾಗಿದೆ. ಅಷ್ಟಕ್ಕೂ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್ಪ್ಲೇ
ಈ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು ಫುಲ್ ಹೆಚ್‌ಡಿ ಪ್ಲಸ್ ಆಗಿದ್ದು ವಾಟರ್ ಡ್ರಾಪ್ ನಾಚ್ ಶೈಲಿಯನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಅಲ್ಲದೆ 90.1% ಸ್ಕ್ರೀನ್-ಟು-ಬಾಡಿ ನಡುವಿನ ಅನುಪಾತವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 480 ppi ಪಿಕ್ಸೆಲ್ ಸಾಂದ್ರತೆ ಹೊಂದಿರುವ ಅಮೋಲೆಡ್ ಡಿಸ್ಪ್ಲೇ ಇದಾಗಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ 2.26GHz ಎಕ್ಸಿನೋಸ್ 980 ಆಕ್ಟಾ-ಕೋರ್ ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಫನ್‌ಟಚ್ ಓಎಸ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೆ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಹೊಂದಿದ್ದು, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಡೆಪ್ತ್‌ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ 4 ಕೆ ವಿಡಿಯೋ ಶೂಟಿಂಗ್, ನೈಟ್‌ಮೋಡ್, ಡೈನಾಮಿಕ್ ಫೋಟೋ, ಎಆರ್ ಕ್ಯೂಟ್ ಶೂಟ್, ಶಾರ್ಟ್ ವಿಡಿಯೋ, ಪ್ರೊಫೆಷನಲ್ ಮೋಡ್, ಸ್ಲೋ ಮೋಷನ್ ಮತ್ತು ಟೈಮ್-ಲ್ಯಾಪ್ಸ್ ಫೋಟೋಗ್ರಫಿ ಸೇರಿವೆ. ಇದಲ್ಲದೆ 32 ಮೆಗಾಪಿಯಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಸಿಪಿಯು ಟರ್ಬೊ, ಎಐ ಟರ್ಬೊ, ನೆಟ್ ಟರ್ಬೊ, ಕೂಲಿಂಗ್ ಟರ್ಬೊ, ಗೇಮ್ ಟರ್ಬೊ, ಮತ್ತು ಎಆರ್ಟಿ ++ ಟರ್ಬೊಗಳಂತಹ ಟೆಕ್ನಾಲಜಿಯನ್ನ ಒಳಗೊಂಡಿದೆ. ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ CNY 2,698 (ಅಂದಾಜು 28,700.ರೂ,) ನಿಂದ ಪ್ರಾರಂಭವಾಗುತ್ತದೆ. ಸದ್ಯ ಇದು ಏಪ್ರಿಲ್ 3 ರಿಂದ ಚೀನಾದಲ್ಲಿ ಮಾರಾಟವಾಗಲಿದ್ದು, ವಿವೋ ಕಂಪನಿಯ ಅಧಿಕೃತ ಸೈಟ್ ಜೆಡಿ.ಕಾಮ್ ಮತ್ತು ಇತರ ಪ್ರಮುಖ ಆನ್‌ಲೈನ್ ವೆಬ್‌ಸೈಟ್‌ಗಳ ಮೂಲಕ ಫೋನ್ ಅನ್ನು ಮಾರಾಟ ಮಾಡಲಾಗುವುದು ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ವಾನ್ ಲೇಕ್, ಡ್ಯಾನ್ಯೂಬ್ ಮತ್ತು ಜಾಜ್ ಬ್ಲ್ಯಾಕ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








