64ಎಂಪಿ ಕ್ಯಾಮೆರಾ ಸೆನ್ಸಾರ್‌ನ ವಿವೋ S7e 5G ಸ್ಮಾರ್ಟ್‌ಫೋನ್‌ ಅನಾವರಣ!

|

ಜನಪ್ರಿಯ ವಿವೋ ಮೊಬೈಲ್ ಕಂಪೆನಿಯು ಇತ್ತೀಗಷ್ಟೇ S ಸರಣಿಯಲ್ಲಿ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಗಮನ ಸೆಳೆದಿತ್ತು. ಇದೀಗ ವಿವೋ ಕಂಪನಿಯು ಅದೇ ಸರಣಿಯಲ್ಲಿ ನೂತನವಾಗಿ ವಿವೋ S7e 5G ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ ರಚನೆಯನ್ನು ಪಡೆದಿದ್ದು, 32ಎಂಪಿ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ವಿವೋ S7e 5G

ಹೌದು, ವಿವೋ ಕಂಪನಿಯು ವಿವೋ S7e 5G ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಅನಾವರಣ ಮಾಡಿದೆ. ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರುವ ಜೊತೆಗೆ 4,100mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಮಿರರ್ ಬ್ಲ್ಯಾಕ್, ಫ್ಯಾಂಟಮ್ ಬ್ಲೂ ಮತ್ತು ಸಿಲ್ವರ್ ಮೂನ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆಯನ್ನು ಕಂಪನಿ ಇನ್ನು ಬಿಟ್ಟುಕೊಟ್ಟಿಲ್ಲ. ನವೆಂಬರ್ 11ರಂದು ದರ ಅನಾವರಣ ಮಾಡಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ವಿವೋ S7e 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.44 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನ ಹೊಂದಿದೆ. ಡಿಸ್‌ಪ್ಲೇಯು AMOLED ರಚನೆಯನ್ನು ಪಡೆದಿದೆ. ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 408ppi ಆಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ವಿವೋ S7e 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ Dimensity 720 ಪ್ರೊಸೆಸರ್ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಈ ಫೋನ್ 8GB RAM + 128GB.ವೇರಿಯಂಟ್ ಆಯ್ಕೆ ಹೊಂದಿದೆ.

ಟ್ರಿಪಲ್ ಕ್ಯಾಮೆರಾ

ಟ್ರಿಪಲ್ ಕ್ಯಾಮೆರಾ

ವಿವೋ S7e 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೂಪರ್ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್‌ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ S7e 5G ಸ್ಮಾರ್ಟ್‌ಫೋನ್‌ 4,100mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್‌, ವೈಫೈ, ಫೇಸ್‌ ಅನ್‌ಲಾಕ್, ಯುಎಸ್‌ಬಿ ಪೋರ್ಟ್‌-ಸಿ, ಜಿಪಿಎಸ್‌, 3.5mm ಆಡಿಯೊ ಜ್ಯಾಕ್‌ಗೆ ಬೆಂಬಲ ನೀಡಲಿದೆ.

Best Mobiles in India

English summary
The Vivo S7e 5G is powered by MediaTek Dimensity 720 SoC and has a triple rear camera setup with a 64-megapixel main sensor.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X