Just In
Don't Miss
- Automobiles
ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- News
ಶಶಿಕಲಾ ರಾಜಕೀಯ ನಿರ್ಗಮನ "ಅಮ್ಮ"ನ ಕನಸು ಈಡೇರಿಸಲು ಸಹಕಾರಿಯಾಗಲಿದೆ; ಸಿಟಿ ರವಿ
- Movies
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ದರ್ಶನ್ ಹೊಸ ಸಿನಿಮಾ: ಮದಕರಿ ನಾಯಕನ ಕತೆ ಏನಾಯಿತು?
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Lifestyle
ಬಾಳೆಹಣ್ಣು ಹಾಳಾಗದಂತೆ ತಡೆಯಲು ಟಿಪ್ಸ್
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ವಿವೋ S7t ಸ್ಮಾರ್ಟ್ಫೋನ್! ವಿಶೇಷತೆ ಏನು?
ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ ವಿವೋ ತನ್ನ ಬಿನ್ನ ಮಾದರಿಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನ ಪರಿಚಯಿಸಿ ಸ್ಮಾರ್ಟ್ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ವಿವೋ ಕಂಪೆನಿ S7 ಸರಣಿಯಲ್ಲಿ ಹೊಸ S7t ಸ್ಮಾರ್ಟ್ಫೋನ್ ಅನ್ನು ಪರಿಚಯಿಸಲು ಸಿದ್ದತೆ ನಡೆಸಿದೆ. ಈ ಸ್ಮಾರ್ಟ್ಫೋನ್ S7 ಮಾದರಿಯ ಫೀಚರ್ಸ್ಗಳನ್ನೇ ಹೊಂದಿರುವ ಸಾಧ್ಯತೆ ಇದೆ. ಆದರೆ ಈ ಸ್ಮಾರ್ಟ್ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 820 SoC ಪ್ರೊಸೆಸರ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ S7t ಸ್ಮಾರ್ಟ್ಫೋನ್ ಶೀಘ್ರದಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಇದು ಪಿಡಿ 2080 ಎಂಬ ಮಾದರಿ ಸಂಖ್ಯೆಯೊಂದಿಗೆ ಬರಲಿದೆ ಎಂದು ವರದಿ ಆಗಿದೆ. ಇನ್ನು ಈ ಸ್ಮಾರ್ಟ್ಫೋನ್ 6.44 ಇಂಚಿನ ಡಿಸ್ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರುವ ಸಾಧ್ಯತೆ ಇದೆ. ಇನ್ನು ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ
ವಿವೊ S7t ಸ್ಮಾರ್ಟ್ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ HDR10 ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್ಪ್ಲೇ 84.0% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್
ಇದು ಮೀಡಿಯಾಟೆಕ್ ಡೈಮೆನ್ಸಿಟಿ 820 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+ 128GB, 256GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ವಿಶೇಷತೆ
ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ GW1 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಏಕವರ್ಣದ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 44 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ಮತ್ತು 8 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಅನ್ನು ಒಳಗೊಂಡಿರುವ ಡ್ಯುಯಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದುವ ನಿರೀಕ್ಷೆಯಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ವಿವೊ S7t ಸ್ಮಾರ್ಟ್ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್ಸ್ಪಾಟ್, ಯುಎಸ್ಬಿ ಪೋರ್ಟ್ ಅನ್ನು ಒಳಗೊಂಡಿರಲಿದೆ. ಇನ್ನು ಇದರ ಬೆಲೆ ಹಾಗೂ ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190