Home
ಸುದ್ದಿಜಾಲ

ವಿವೋ S9 ಸ್ಮಾರ್ಟ್‌ಫೋನ್‌ ಸರಣಿ ಬಿಡುಗಡೆ! ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ವಿಶೇಷ!

ವಿವೋ ಕಂಪೆನಿ ತನ್ನ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಫೀಚರ್ಸ್‌ಗಳಿಂದಲೇ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿ ಹೊಸತನಕ್ಕೆ ಮುನ್ನುಡಿ ಬರೆದಿದೆ. ಸದ್ಯ ಇದೀಗ ಹೊಸ ವಿವೋ S 9 5G ಮತ್ತು ವಿವೊ S9 E 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದರಲ್ಲಿ ವಿವೊ S9 5G ಮೀಡಿಯಾಟೆಕ್ ಡೈಮೆನ್ಸಿಟಿ 1100SoC ಪ್ರೊಸೆಸರ್‌ ಹೊಂದಿದ್ದರೆ, ವಿವೋ S9 E 5G ಮೀಡಿಯಾಟೆಕ್ ಡೈಮೆನ್ಸಿಟಿ 820 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ.

ವಿವೋ

ಹೌದು, ವಿವೋ ಕಂಪೆನಿ ತನ್ನ S9 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಚೀನಾ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡಿದೆ. ಇನ್ನು ವಿವೊ S9 5G ಎರಡು ಸೆಲ್ಫಿ ಕ್ಯಾಮೆರಾಗಳನ್ನು ಹೊಂದಿದ್ದು, ವಿವೊ S9 E 5G ಸಿಂಗಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ ವಿವೋ S9 5G ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೊ S9 5G ಡಿಸ್‌ಪ್ಲೇ

ವಿವೊ S9 5G ಡಿಸ್‌ಪ್ಲೇ

ವಿವೋ S9 5G ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಸ್ಕ್ರೀನ್‌ ಟು ಬಾಡಿ 91.04 ಅನುಪಾತವನ್ನು ಹೊಂದಿದೆ. ಇದು HDR10 + ಅನ್ನು ಬೆಂಬಲಿಸುತ್ತದೆ ಮತ್ತು 90Hz ಸ್ಕ್ರೀನ್ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1100 SoC ಪ್ರೊಸೆಸರ್‌ ಅನ್ನು ಹೊಂದಿದ್ದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ವಿವೊ S9 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಕ್ಯಾಮೆರಾ ಮೋಡ್‌ಗಳಲ್ಲಿ ನಯಟ್‌ ವ್ಯೂವ್‌, ಇಮೇಜ್‌, ವಿಶ್ಯುಯಲ್‌, ಡೈನಾಮಿಕ್ ಫೋಟೋ, ಸ್ಲೋ ಮೋಷನ್‌, ಡ್ಯುಯಲ್-ವ್ಯೂ ವಿಡಿಯೋ ಫೀಚರ್ಸ್ ಲಭ್ಯವಿದೆ. ಇದಲ್ಲದೆ 44 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ಹಾಗೂ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಹೊಂದಿರುವ ಎರಡು ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್ ವಿ 5.2 ಅನ್ನು ಬೆಂಬಲಿಸಲಿದೆ.

ವಿವೋ S9E 5G

ವಿವೋ S9E 5G

ವಿವೋ S9E 5G ಸ್ಮಾರ್ಟ್‌ಫೋನ್‌ 6.40 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡೈಮೆನ್ಸಿಟಿ 820 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದು 4,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೊ S9 5G ಚೀನಾದಲ್ಲಿ ಬೇಸ್‌ ಮಾಡೆಲ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ CNY 2,999 (ಸರಿಸುಮಾರು ರೂ. 33,700)ಬೆಲೆ ಹೊಂದಿದೆ. ಇನ್ನು 12GB RAM + 256GB ಶೇಖರಣಾ ಮಾದರಿಗೆ CNY 3,299 (ಸುಮಾರು ರೂ. 37,100) ಬೆಲೆ ಹೊಂದಿದೆ. ಇದು ಅರೋರಾ ಬ್ಲೂ, ಮಿಡ್ನೈಟ್ ಬ್ಲೂ ಮತ್ತು ವೈಟ್ ಕಲರ್ ಆಯ್ಕೆಗಳಲ್ಲಿ ಫೋನ್ ಲಭ್ಯವಾಗಿದೆ. ಇನ್ನು ವಿವೋ S9E 5G, 8GB RAM + 128GB ಶೇಖರಣಾ ಆಯ್ಕೆಗೆ CNY 2,399 (ಸರಿಸುಮಾರು ರೂ. 26,900) ಬೆಲೆಯನ್ನು ಹೊಂದಿದೆ. ಇದು ಕ್ರಿಸ್ಟಲ್ ಡೈಮಂಡ್, ಅಬ್ಸಿಡಿಯನ್ ಬ್ಲ್ಯಾಕ್ ಮತ್ತು ಸ್ಟಾರ್ರಿ ನೈಟ್ ಅರೋರಾ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ವಿವೋ ಎಸ್ 9E 5G ಮಾರ್ಚ್ 27 ರಿಂದ ಮಾರಾಟ ಪ್ರಾರಂಭವಾಗಲಿದೆ.

Best Mobiles in India

English summary
Vivo S9 5G is powered by the MediaTek Dimensity 1100 SoC, whereas the Vivo S9e 5G is powered by the MediaTek Dimensity 820 SoC.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+