Just In
Don't Miss
- News
ರಾಜ್ಯ ಬಜೆಟ್: ಪೆಟ್ರೋಲ್-ಡೀಸೆಲ್ ಬೆಲೆ ಕುರಿತು ಯಡಿಯೂರಪ್ಪ ಮಹತ್ವದ ತೀರ್ಮಾನ!
- Lifestyle
ದಿನ ಭವಿಷ್ಯ: ನಿಮ್ಮ ರಾಶಿ ಸೋಮವಾರ ಹೇಗಿರಲಿದೆ ನೋಡಿ
- Movies
ಬಿಗ್ಬಾಸ್: ಒಂದು ವಾರದಲ್ಲಿ ಪ್ರಶಾಂತ್ ಸಂಬರ್ಗಿ ಬದಲಾಯಿಸಿರುವ ಬಟ್ಟೆ ಎಷ್ಟು ಗೊತ್ತೆ?
- Sports
ಆತನಲ್ಲಿ ನನಗಿಂತಲೂ ಹೆಚ್ಚಿನ ಸ್ವಾಭಾವಿಕ ಸಾಮರ್ಥ್ಯವಿದೆ: ರವಿಶಾಸ್ತ್ರಿ
- Finance
ಮಾರ್ಚ್ 07ರಂದು ಚಿನ್ನದ ಬೆಲೆ ಯಾವ ನಗರದಲ್ಲಿ ಹೆಚ್ಚು ಬೆಲೆ?
- Automobiles
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿವೋ S9 ಸರಣಿ ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ!
ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ವಿವೋ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರ ಪಡಿಸಿಕೊಂಡಿದೆ. ಇದೀಗ ತನ್ನ ಹೊಸ ವಿವೋ S9 ಸರಣಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸರಣಿಯಲ್ಲಿ ವಿವೋ S9E ಮತ್ತು ವಿವೊ S9 ಸ್ಮಾರ್ಟ್‌ಫೋನ್ ಬಿಡುಗಡೆ ಆಗಲಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಬೆಲೆ ಮತ್ತು ಫೀಚರ್ಸ್ ಬಿಡುಗಡೆ ಮುನ್ನವೇ ಆನ್‌ಲೈನ್‌ನಲ್ಲಿ ಸೋರಿಕೆ ಆಗಿದೆ.

ಹೌದು, ವಿವೋ ತನ್ನ ಹೊಸ ವಿವೋ S9 ಸರಣಿ ಸ್ಮಾರ್ಟ್‌ಫೋನ್ ಅನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದೆ. ಆದರೆ ಬಿಡುಗಡೆಗೂ ಮುನ್ನವೇ ಬೆಲೆ ಮತ್ತು ಸ್ಮಾರ್ಟ್‌ಫೋನ್ ವಿವರ ಆನ್‌ಲೈನ್‌ನಲ್ಲಿ ಬಹಿರಂವಾಗಿದೆ. ವರದಿ ಪ್ರಕಾರ ವಿವೊ S9E ಫೋನ್ 4,100mAh ಸಾಮರ್ಥ್ಯದ ಬ್ಯಾಟರಿ ಮತ್ತು ಮೀಡಿಯಾ ಟೆಕ್ ಡೈಮೆನ್ಸಿಟಿ 820 ಪ್ರೊಸೆಸರ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ಈ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ವಾಟರ್ ಡ್ರಾಪ್ ಶೈಲಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್ ಬಲ
ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 820 SoC ಪ್ರೊಸೆಸರ್ ಸಾಮರ್ಥ್ಯುವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB ಹಾಗೂ 8GB RAM+256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದುವ ನಿರೀಕ್ಷೆಯಿದೆ.

ಕ್ಯಾಮೆರಾ ವಿಶೇಷ
ವಿವೋ S9E ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೊ ವಿವೋ S9E ಮತ್ತು ವಿವೊ S9 ಸ್ಮಾರ್ಟ್‌ಫೋನ್ ಇದೇ ಮಾರ್ಚ್ 6 ರಂದು ಬಿಡುಗಡೆ ಆಗಲಿದೆ. ಭಾರತದಲ್ಲಿ ಬಿಡುಗಡೆ ಆಗುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇನ್ನು ಈ ಸ್ಮಾರ್ಟ್‌ಫೋನ್ 8GB RAM + 128GB ಶೇಖರಣಾ ಮಾದರಿಗೆ ವಿವೋ S9E ಬೆಲೆ CNY 2,298 (ಸುಮಾರು 25,700 ರೂ) ಮತ್ತು 8GB RAM + 256GB ಶೇಖರಣಾ ರೂಪಾಂತರಕ್ಕೆ CNY 2,598 (ಸುಮಾರು 29,000 ರೂ) ವೆಚ್ಚವಾಗಬಹುದು ಎಂದು ಹೇಳಲಾಗಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190