ಭಾರತದಲ್ಲಿ ವಿವೋ T1ಪ್ರೊ 5G ಮತ್ತು ವಿವೋ T1 44W ಫೋನ್‌ ಲಾಂಚ್‌!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ T1ಪ್ರೊ 5G ಮತ್ತು ವಿವೋ T1 44W ಫೋನ್‌ ಲಾಂಚ್‌ ಮಾಡಿದೆ. ಇದರಲ್ಲಿ ವಿವೋ T1ಪ್ರೊ 5G ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಇದು 66W ಟರ್ಬೊ ಫ್ಲ್ಯಾಶ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಆದರೆ ವಿವೋ T1 44W ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, 44W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ವಿವೋ

ಹೌದು, ವಿವೋ ಕಂಪೆನಿ ಭಾರತದಲ್ಲಿ ವಿವೋ T1ಪ್ರೊ 5G ಮತ್ತು ವಿವೋ T1 44W ಫೋನ್‌ ಪರಿಚಯಿಸಿದೆ. ಇದರಲ್ಲಿ ವಿವೋ T1ಪ್ರೊ 5G ಫೋನ್‌ 4D ಗೇಮ್ ವೈಬ್ರೇಶನ್, ಅಲ್ಟ್ರಾ ಗೇಮ್ ಮೋಡ್ ಅನ್ನು ಒಳಗೊಂಡಿದೆ. ಹಾಗೆಯೇ ವಿವೋ T1 44W ಫೋನ್‌ ಮಲ್ಟಿ ಟರ್ಬೊ 5.5 ಟೆಕ್ನಾಲಜಿ ಹೊಂದಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಫ್ಲಿಪ್‌ಕಾರ್ಟ್‌ ಮತ್ತು ವಿವೋ ಇ-ಸ್ಟೋರ್‌ ಮೂಲಕ ಮಾರಟಕ್ಕೆ ಬರಲಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್‌

ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್‌

ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್‌ 1,080x2,404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್‌ OS 12 ಜೊತೆಗೆ ರನ್ ಆಗುತ್ತದೆ. ಹಾಗೆಯೇ 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 66W ಫ್ಲ್ಯಾಶ್‌ಚಾರ್ಜ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

ವಿವೋ T1 44W ಸ್ಮಾರ್ಟ್‌ಫೋನ್‌

ವಿವೋ T1 44W ಸ್ಮಾರ್ಟ್‌ಫೋನ್‌

ವಿವೋ T1 44W ಸ್ಮಾರ್ಟ್‌ಫೋನ್‌ 6.44-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಬಲವನ್ನು ಪಡೆದಿದೆ. ಇದು ಅಲ್ಟ್ರಾ ಗೇಮ್ ಮೋಡ್ ಮತ್ತು ಮಲ್ಟಿ ಟರ್ಬೊ 5.5 ಅನ್ನು ತಲ್ಲೀನಗೊಳಿಸುವ ಗೇಮಿಂಗ್ ಅನುಭವಕ್ಕಾಗಿ ಮತ್ತು ವಿಸ್ತೃತ RAM 2.0 ಫೀಚರ್ಸ್‌ ಅನ್ನು ಪಡೆಯಲಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಪ್ರೈಮೆರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಬೊಕೆ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್‌ಚಾರ್ಜ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 6GB + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 23,999ರೂ. ಮತ್ತು 8GB + 128GB ರೂಪಾಂತರದ ಬೆಲೆ 24,999ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಟರ್ಬೊ ಬ್ಲ್ಯಾಕ್ ಮತ್ತು ಟರ್ಬೊ ಸಯಾನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.
ಇನ್ನು ವಿವೋ T1 44W ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 4GB + 128GB ರೂಪಾಂತರದ ಆಯ್ಕೆಗೆ 14,499 ರೂ. ಬೆಲೆ ಹೊಂದಿದೆ. ಹಾಗೆಯೇ 6GB + 128GB ರೂಪಾಂತರದ ಆಯ್ಕೆಗೆ 15,999ರೂ. ಮತ್ತು ಟಾಪ್-ಆಫ್-ಲೈನ್ 8GB + 128GB ರೂಪಾಂತರಕ್ಕಾಗಿ 17,999ರೂ. ಬೆಲೆ ಹೊಂದಿದೆ. ಇದು ಐಸ್ ಡಾನ್, ಮಿಡ್‌ನೈಟ್ ಗ್ಯಾಲಕ್ಸಿ ಮತ್ತು ಸ್ಟಾರಿ ಸ್ಕೈ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.
ಇದರಲ್ಲಿ ವಿವೋ T1 ಪ್ರೊ 5G ಫೋನ್‌ ಪ್ರಿ-ಬುಕಿಂಗ್ ಇದೇ ಮೇ 5 ರಿಂದ ಪ್ರಾರಂಭವಾಗುತ್ತದೆ ಮತ್ತು ಇದು ಮೇ 7 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಮಾರಾಟವಾಗಲಿದೆ. ಆದರೆ ವಿವೋ T1 44W ಮೇ 8 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಮಾರಾಟವಾಗಲಿದೆ. ಈ ಎರಡೂ ಫೋನ್‌ಗಳು ಫ್ಲಿಪ್‌ಕಾರ್ಟ್ ಮತ್ತು ವಿವೋ ಇಸ್ಟೋರ್ ಮೂಲಕ ಲಭ್ಯವಿರುತ್ತವೆ.

Best Mobiles in India

English summary
Vivo T1 Pro 5G and Vivo T1 44W With Extended RAM Feature Launched in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X