Just In
- 37 min ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
- 57 min ago
ಬೆಂಗಳೂರಿಗರೇ ಗಮನಿಸಿ... ಇನ್ನೇನು ಕೆಲವೇ ದಿನದಲ್ಲಿ NIMBUS ಆಪ್ ಲಾಂಚ್!
- 3 hrs ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 3 hrs ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
Don't Miss
- Finance
ಫೆಬ್ರವರಿ 1ರಿಂದ ಟಾಟಾ ಮೋಟರ್ಸ್ ಕಾರು ದುಬಾರಿ, ಯಾಕೆ, ಇಲ್ಲಿದೆ ಕಾರಣ?
- Movies
ಅತಿಹೆಚ್ಚು ಟಿವಿಆರ್ ಗಳಿಸಿದ ಕನ್ನಡದ 14 ಚಿತ್ರಗಳಿವು; ಆರನೇ ಸ್ಥಾನಕ್ಕೇರಿದ ಕಾಂತಾರ!
- News
ಹಾಸನ ಟಿಕೆಟ್ ಬಗ್ಗೆ ಮಾತನಾಡಲು ರೇವಣ್ಣ ಬಿಟ್ಟರೆ ಯಾರಿಗೂ ಅವಕಾಶವಿಲ್ಲ; HDKಗೆ ಸೂರಜ್ ಟಾಂಗ್
- Lifestyle
ಬಿಪಿ ಸಮಸ್ಯೆಯೇ? ಪಿಜ್ಜಾ, ಮಜ್ಜಿಗೆ ಈ ಬಗೆಯ ಅಧಿಕ ಸೋಡಿಯಂ ಆಹಾರ ಸೇವಿಸಲೇಬೇಡಿ
- Sports
Women's Premier League : ಫೆಬ್ರವರಿ 2ನೇ ವಾರ ಆಟಗಾರರ ಹರಾಜು: ದೆಹಲಿಯಲ್ಲಿ ಹರಾಜು ಪ್ರಕ್ರಿಯೆ
- Automobiles
ಬಾಕ್ಸ್ ಆಫೀಸ್ನಲ್ಲಿ 'ಪಠಾಣ್' ಅಬ್ಬರ: ಈ ಚಿತ್ರದಲ್ಲಿ ಕಾಣಿಸಿಕೊಂಡ ಆಕರ್ಷಕ ಕಾರುಗಳಿವು...
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಲ್ಲಿ ಗಮನಿಸಿ, ವಿವೋ T1 ಪ್ರೊ 5G ಖರೀದಿಗೆ ಇದುವೇ ಬೆಸ್ಟ್ ಟೈಮ್!
ಜನಪ್ರಿಯ ಮೊಬೈಲ್ ಕಂಪನಿಗಳಲ್ಲಿ ಒಂದಾದ ವಿವೋ ಇತ್ತೀಚಿಗೆ ಬಿಡುಗಡೆ ಮಾಡಿರುವ ವಿವೋ T1 ಪ್ರೊ 5G (vivo T1 Pro 5G) ಸ್ಮಾರ್ಟ್‌ಫೊನ್ ಕೆಲವು ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿವೆ. ಈ ಫೋನ್ ಇದೀಗ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ ಇವೆ. ಇನ್ನು ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ.

ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ವಿವೋ T1 ಪ್ರೊ 5G (vivo T1 Pro 5G) 128GB ಫೋನ್ 23,999ರೂ.ಗಳ ಪ್ರೈಸ್‌ಟ್ಯಾಗ್ ಹೊಂದಿದೆ. ಹಾಗೆಯೇ ಕೆಲವು ಆಯ್ದ ಬ್ಯಾಂಕ್ ಕಾರ್ಡ್‌ನಲ್ಲಿ ಹೆಚ್ಚುವರಿ ಕ್ಯಾಶ್‌ಬ್ಯಾಕ್ ಸಿಗಲಿದೆ. ಜೊತೆಗೆ ಅತ್ಯುತ್ತಮ ಎಕ್ಸ್‌ಚೇಂಜ್ ಕೊಡುಗೆ ದೊರೆಯಲಿದೆ. ಅಂದಹಾಗೆ ವಿವೋ T1 ಪ್ರೊ 5G ಫೋನ್ ಎಮ್‌ಆರ್‌ಪಿ ಬೆಲೆಯು 28,900ರೂ. ಆಗಿದೆ.

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗಾದರೆ ಈ ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ರಚನೆ
ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್ 1,080 x 2,404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ 90 Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯವೈಖರಿ
ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್ OS 12 ಜೊತೆಗೆ ರನ್ ಆಗುತ್ತದೆ. ಹಾಗೆಯೇ ಈ ಫೋನ್ 6 GB + 128 GB ಸ್ಟೋರೇಜ್ ಮತ್ತು 8 GB + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್
ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್
ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್ 4,700 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 66 W ಫ್ಲ್ಯಾಶ್‌ಚಾರ್ಜ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 6 GB + 128 GB ಸ್ಟೋರೇಜ್ ರೂಪಾಂತರ ಮತ್ತು 8 GB + 128 GB ರೂಪಾಂತರದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟರ್ಬೊ ಬ್ಲ್ಯಾಕ್ ಮತ್ತು ಟರ್ಬೊ ಸಯಾನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470