ವಿವೋ T1 ಮತ್ತು ವಿವೋ T1x ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್‌!

|

ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ವಿವೋ ಕಂಪೆನಿ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ವಿವೋ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರಾಂಡ್‌ಗಳಲ್ಲಿ ಒಂದೆನಿಸಿದೆ. ಸದ್ಯ ವಿವೋ ಕಂಪೆನಿ ಇದೀಗ ಹೊಸ ವಿವೋ T1 ಮತ್ತು ವಿವೋ T1x ಫೋನ್‌ ಬಿಡುಗಡೆ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು 120Hz ರಿಫ್ರೇಶ್‌ ರೇಟ್‌ ಡಿಸ್‌ಪ್ಲೇ ಹೊಂದಿವೆ. ಜೊತೆಗೆ 256GB ವರೆಗೆ ಆನ್‌ಬೋರ್ಡ್ ಸ್ಟೋರೇಜ್ ಅನ್ನು ಒಳಗೊಂಡಿವೆ.

ವಿವೋ T1 ಮತ್ತು ವಿವೋ T1x

ಹೌದು, ವಿವೋ ಕಂಪೆನಿ ಹೊಸ ವಿವೋ T1 ಮತ್ತು ವಿವೋ T1x ಫೋನ್‌ಗಳನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡಿದೆ. ಇದರಲ್ಲಿ ವಿವೋ T1 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದಲ್ಲದೆ ವಿವೋ T1 ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲ ಪಡೆದಿದೆ. ವಿವೋ T1x ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಹೊಂದಿದೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ T1 ಸ್ಮಾರ್ಟ್‌ಫೋನ್‌

ವಿವೋ T1 ಸ್ಮಾರ್ಟ್‌ಫೋನ್‌

ವಿವೋ T1 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡ 6.67-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಪೆಡದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಓರಿಜಿನೋಸ್ 1.0 ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದ್ದು, 44W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ v5.2, GPS ಯುಎಸ್‌ಬಿ ಟೈಪ್‌-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

ವಿವೋ T1x ಸ್ಮಾರ್ಟ್‌ಫೋನ್‌

ವಿವೋ T1x ಸ್ಮಾರ್ಟ್‌ಫೋನ್‌

ವಿವೋ T1x ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20.07:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11. ಆಧಾರಿತ ಒರಿಜಿನೋಸ್ 1.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್‌ v5.2, ಯುಎಸ್‌ಬಿ ಟೈಪ್‌-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ T1 ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್ ರೂಪಾಂತರಕ್ಕೆ CNY 2,199 (ಸುಮಾರು 25,800ರೂ.)ಗಳಿಗೆ ನಿಗದಿಪಡಿಸಲಾಗಿದೆ. ಈ ಫೋನ್ 8GB + 256GB ಸ್ಟೋರೇಜ್ ಆಯ್ಕೆಯಲ್ಲಿ CNY 2,399 (ಸರಿಸುಮಾರು ರೂ. 28,100) ಮತ್ತು 12GB + 256GB ಸ್ಟೋರೇಜ್ ಆವೃತ್ತಿಯಲ್ಲಿ CNY 2,599 (ಅಂದಾಜು 30,400ರೂ) ಬೆಲೆ ಪಡೆದಿದೆ.
ಇನ್ನು ವಿವೋ T1x 6GB + 128 GB ಸ್ಟೋರೇಜ್ ರೂಪಾಂತರಕ್ಕೆ ಸಿಎನ್‌ವೈ 1,699 (ಸರಿಸುಮಾರು ರೂ. 19,900) ಬೆಲೆ ಹೊಂದಿದೆ. 8GB + 256GB ಸ್ಟೋರೇಜ್ ರೂಪಾಂತರಕ್ಕೆ CNY 1,999 (ಅಂದಾಜು 23,400ರೂ) ಬೆಲೆ ಹೊಂದಿದೆ. ಈ ಫೋನ್‌ಗಳು ನವೆಂಬರ್ 1 ರಿಂದ ಚೀನಾದಲ್ಲಿ ಮಾರಾಟವಾಗಲಿದೆ. ಭಾರತದಲ್ಲಿ ಯಾವಾಗ ಲಬ್ಯವಾಗಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ.

Best Mobiles in India

English summary
Vivo T1 and Vivo T1x have been launched. Both new smartphones come with 120Hz displays and include up to 256GB of onboard storage.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X