ಭಾರತದಲ್ಲಿ ವಿವೋ T1x ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟಿದೆ? ಫೀಚರ್ಸ್‌ ಹೇಗಿದೆ?

|

ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಉತ್ತಮವಾದ ಮಾರುಕಟ್ಟೆಯಿದೆ. ಆಕರ್ಷಕ ಕ್ಯಾಮೆರಾ ಹಾಗೂ ಲಾಂಗ್‌ ಬ್ಯಾಟರಿ ಬ್ಯಾಕಪ್‌ ಒಳಗೊಂಡ ಸ್ಮಾರ್ಟ್‌ಫೋನ್‌ಗಳಿಂದ ವಿವೋ ಕಂಪೆನಿ ಪ್ರಸಿದ್ಧಿ ಪಡೆದಿದೆ. ಇದೇ ಕಾರಣಕ್ಕೆ ಭಾರತದಲ್ಲಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ವಿವೋ ಕಂಪೆನಿ ಕೂಡ ಒಂದಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ವಿವಿಧ ಬೆಲೆ ಮಾದರಿಗಳಲ್ಲಿ ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದೀಗ ತನ್ನ ಹೊಸ ವಿವೋ T1x ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ.

ವಿವೋ

ಹೌದು, ವಿವೋ ಕಂಪೆನಿ ಭಾರತದಲ್ಲಿ ವಿವೋ T1x ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸುವ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಈ ಫೋನ್‌ನಲ್ಲಿ ಸುಗಮ ಗೇಮಿಂಗ್‌ಗಾಗಿ 4 ಲೇಯರ್ ಕೂಲಿಂಗ್ ವ್ಯವಸ್ಥೆಯನ್ನು ಒದಗಿಸಲಾಗಿದೆ.

ವಿವೋ T1x

ಇನ್ನು ವಿವೋ T1x ಸ್ಮಾರ್ಟ್‌ಫೋನ್‌ನಲ್ಲಿ RAM ಅನ್ನು 8GB ವರೆಗೆ ವಿಸ್ತರಿಸುವ ಆಯ್ಕೆಯನ್ನು ಸಹ ನೀಡಲಾಗಿದೆ. ಈ ಫೋನ್‌ ಭಾರತದಲ್ಲಿ ಬಜೆಟ್‌ ಬೆಲೆಯನ್ನು ಹೊಂದಿದ್ದು, ಇದರ ಆರಂಭಿಕ ಬೆಲೆ 11,999ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗ್ರಾವಿಟಿ ಬ್ಲ್ಯಾಕ್ ಮತ್ತು ಸ್ಪೇಸ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ವಿವೋ T1x ಸ್ಮಾರ್ಟ್‌ಫೋನ್‌ ಅನ್ನು HDFC ಬ್ಯಾಂಕ್‌ ಕಾರ್ಡ್‌ ಮೂಲಕ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಿದರೆ 1,000ರೂ. ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಬಹುದು. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ವಿವೋ T1x ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, 90.6% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ NTSC ಬಣ್ಣದ ಹರವು 96% ಕವರೇಜ್ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯವೈಖರಿ ಏನು?

ಪ್ರೊಸೆಸರ್‌ ಕಾರ್ಯವೈಖರಿ ಏನು?

ವಿವೋ T1x ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 6nm ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟೌಚ್‌ OS 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಆಡ್ರೆನೋ GPU 610 ಸಪೋರ್ಟ್‌ ಅನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಹೆಚ್ಚುವರಿ ಅಂತರ್ಗತ ಸಂಗ್ರಹಣೆಯನ್ನು ಬಳಸಿಕೊಂಡು RAM ಅನ್ನು 8GB ವರೆಗೆ ವಿಸ್ತರಿಸಬಹುದು. ಹಾಗೆಯೇ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ವಿವೋ T1x ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದ್ದು, f/1.8 ಲೆನ್ಸ್‌ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, f/2.4 ಲೆನ್ಸ್‌ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ HDR, ಮಲ್ಟಿಲೇಯರ್ ಪೋರ್ಟ್ರೇಟ್, ಸ್ಲೋ ಮೋಷನ್‌, ಪನೋರಮಾ, ಲೈವ್ ಫೋಟೋ ಮತ್ತು ಸೂಪರ್ ನೈಟ್ ಮೋಡ್ ಅನ್ನು ಬೆಂಬಲಿಸುತ್ತದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ವಿವೋ T1x ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5.0, GPS, Glonass, OTG, FM ರೇಡಿಯೋ ಮತ್ತು USB ಟೈಪ್-C ಪೋರ್ಟ್ ಸೇರಿವೆ. ಈ ಫೋನ್‌ನ ಕಾರ್ಯಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸಲು ಮಲ್ಟಿ-ಟರ್ಬೊ 5.0 ಸಹ ಇದೆ. ಇದಲ್ಲದೆ ಈ ಫೋನ್‌ ವಿವೋ ಸುಗಮ ಗೇಮಿಂಗ್‌ಗಾಗಿ ಹೊಸ ಸಾಧನದಲ್ಲಿ 4-ಲೇಯರ್ ಕೂಲಿಂಗ್ ವ್ಯವಸ್ಥೆಯನ್ನು ಒದಗಿಸಿದೆ.

ಇತರೆ ಫೀಚರ್ಸ್‌

ಇತರೆ ಫೀಚರ್ಸ್‌

ಇನ್ನು ಈ ಸ್ಮಾರ್ಟ್‌ಫೋನ್‌ ವೇಗವರ್ಧಕ, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಇ-ಕಂಪಾಸ್‌, ಗೈರೊಸ್ಕೋಪ್ ಸೆನ್ಸಾರ್‌ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ ಬಯೋಮೆಟ್ರಿಕ್‌ ದೃಢೀಕರಣಕ್ಕಾಗಿ ಫೇಸ್ ಅನ್‌ಲಾಕ್ ಫೀಚರ್ಸ್‌ ಅನ್ನು ಬೆಂಬಲಿಸುತ್ತದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಬ್ಯಾಟರಿ ರಿವರ್ಸ್ ಚಾರ್ಜಿಂಗ್ ವೈಶಿಷ್ಟ್ಯವನ್ನು ಬೆಂಬಲಿಸುತ್ತದೆ. ಈ ಫೋನ್ 164.26x76.08x8mm ಅಳತೆ ಮತ್ತು 182 ಗ್ರಾಂ ತೂಕವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ T1x ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ಮಾದರಿಗೆ 11,999ರೂ. ಬೆಲೆ ಹೊಂದಿದೆ. ಹಾಗೆಯೇ 4GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 12,999ರೂ.ಆಗಿದೆ. ಆದರೆ ಇದರ ಟಾಪ್-ಆಫ್-ಲೈನ್ 6GB RAM + 128GB ಸ್ಟೋರೇಜ್ ಮಾಡೆಲ್ ಬೆಲೆ 14,999ರೂ. ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗ್ರಾವಿಟಿ ಬ್ಲ್ಯಾಕ್ ಮತ್ತು ಸ್ಪೇಸ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದ್ದು, ಜುಲೈ 27 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.

ಲಾಂಚ್‌ ಆಫರ್‌ ಏನಿದೆ?

ಲಾಂಚ್‌ ಆಫರ್‌ ಏನಿದೆ?

ವಿವೋ T1x ಸ್ಮಾರ್ಟ್‌ಫೋನ್‌ ಅನ್ನು HDFC ಬ್ಯಾಂಕ್ ಕಾರ್ಡ್‌ ಮೂಲಕ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸುವ ಗ್ರಾಹಕರಿಗೆ 1,000ರೂ. ತ್ವರಿತ ರಿಯಾಯಿತಿ ದೊರೆಯಲಿದೆ. ಇದಲ್ಲದೆ ಹೆಚ್ಚುವರಿಯಾಗಿ, ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ನಲ್ಲಿ ಆಕ್ಸಿಸ್ ಬ್ಯಾಂಕ್ ಕಾರ್ಡ್ ಬಳಸುವ ಖರೀದಿಗಳ ಮೇಲೆ 5%ವರೆಗೆ ಕ್ಯಾಶ್‌ಬ್ಯಾಕ್ ನೀಡುತ್ತಿದೆ.

Best Mobiles in India

English summary
Vivo T1x With Dual Rear Cameras Launched In India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X