Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ T2 4G ಸ್ಮಾರ್ಟ್‌ಫೋನ್‌! ಅಚ್ಚರಿಯ ಕ್ಯಾಮೆರಾ ಮಾಡ್ಯೂಲ್‌!

ವಿವೋ ಕಂಪೆನಿ ಇತ್ತೀಚಿಗೆ ವಿವೋ T2 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಇದೀಗ ಅದರ 4G ರೂಪಾಂತರದ ಆಯ್ಕೆಯನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಅಂದರೆ ವಿವೋ T2 4G ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ವಿವೋ T2 4G ಸ್ಮಾರ್ಟ್‌ಫೋನ್‌ ಟೆಕ್‌ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸರಣಿಯ ಫೋನ್‌ಗಳಲ್ಲಿ ವಿವೋ Schott Xensation ಗ್ಲಾಸ್ ಅನ್ನು ಬಳಸುತ್ತಿದೆ. ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ T2 4G ಸ್ಮಾರ್ಟ್‌ಫೋನ್‌! ಅಚ್ಚರಿಯ ಕ್ಯಾಮೆರಾ!

ವಿವೋ T2 4G ಡಿಸ್‌ಪ್ಲೇ ರಚನೆ
ವಿವೋ T2 4G ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 2400 × 1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, SGS ಐ ಕೇರ್ ಡಿಸ್ಪ್ಲೇ ಪ್ರಮಾಣೀಕರಣವನ್ನು ಪಡೆದುಕೊಂಡಿದೆ.

ವಿವೋ T2 4G ಪ್ರೊಸೆಸರ್‌ ಯಾವುದು?
ವಿವೋ T2 4G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, Mali G57 GPU ಸಪೋರ್ಟ್‌ ಪಡೆದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ 8GB ವರೆಗೆ ವಿಸ್ತರಿಸಿದ RAM ಅನ್ನು ಬೆಂಬಲಿಸಲಿದೆ. ಇದರೊಂದಿಗೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ T2 4G ಸ್ಮಾರ್ಟ್‌ಫೋನ್‌! ಅಚ್ಚರಿಯ ಕ್ಯಾಮೆರಾ!

ವಿವೋ T2 4G ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ವಿವೋ T2 4G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಬೊಕೆ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ವಿವೋ T2 4G ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?
ವಿವೋ T2 4G ಸ್ಮಾರ್ಟ್‌ಫೋನ್‌ 4600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್‌ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್ ನೊಂದಿಗೆ ಬರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸರ್‌ ಅನ್ನು ಹೊಂದಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ T2 4G ಸ್ಮಾರ್ಟ್‌ಫೋನ್‌! ಅಚ್ಚರಿಯ ಕ್ಯಾಮೆರಾ!

ವಿವೋ T2 4G ಬೆಲೆ ಮತ್ತು ಲಭ್ಯತೆ
ವಿವೋ T2 4G ಸ್ಮಾರ್ಟ್‌ಫೋನ್‌ ಪ್ರಸ್ತುತ ರಷ್ಯಾದಲ್ಲಿ ಖರೀದಿಗೆ ಲಭ್ಯವಿದೆ. ರಷ್ಯಾದಲ್ಲಿ ಇದರ 8GB + 256GB ಸ್ಟೋರೇಜ್‌ ಆಯ್ಕೆಯ ಬೆಲೆ RUB 27,999 (ಅಂದಾಜು 24,768ರೂ)ಆಗಿದೆ. ಇದಲ್ಲದೆ ಸೀ ಗ್ರೀನ್, ಲ್ಯಾವೆಂಡರ್ ಗ್ಲೋ ಮತ್ತು ಕಪ್ಪು ಓನಿಕ್ಸ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿಯೂ ಬಿಡುಗಡೆ ಆಗಲಿದೆಯಾ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
Vivo T2 4G Variant With MediaTek Helio G99 Launched: Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+