Home
ಸುದ್ದಿಜಾಲ

ವಿವೋ ಸಂಸ್ಥೆಯ ಈ ಮೊಬೈಲ್‌ ಫುಲ್‌ ಡಿಸ್ಕೌಂಟ್‌ನಲ್ಲಿ ಲಭ್ಯ!

ಜನಪ್ರಿಯ ವಿವೋ ಮೊಬೈಲ್‌ ಸಂಸ್ಥೆಯು T ಸರಣಿಯಲ್ಲಿ ಹಲವು ಬಜೆಟ್‌ ದರದ ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ವಿವೋ T2 5G ಬೊಂಬಟ್ ಫೀಚರ್ಸ್‌ ಹಾಗೂ ಬೆಲೆಯಿಂದ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಭರ್ಜರಿ ಡಿಸ್ಕೌಂಟ್‌ ಪಡೆದಿದ್ದು, ಗ್ರಾಹಕರು ಖುಷಿ ಪಡುವಂತೆ ಮಾಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಬಿಗ್ ಸೇವಿಂಗ್ ಡೇಸ್‌ ಸೇಲ್‌ ಮೇಳದಲ್ಲಿ ವಿವೋ T2 5G ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ತಾಣದಲ್ಲಿ ಈಗ 20% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 6 GB RAM + 128 GB ಸ್ಟೋರೇಜ್‌ನ ವೇರಿಯಂಟ್‌ 23,999ರೂ. ಗಳ ಬೆಲೆಯನ್ನು ಹೊಂದಿದ್ದು, ಈಗ ಗ್ರಾಹಕರು 18,999 ರೂ. ಗಳ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿ ಮಾಡಬಹುದಾಗಿದೆ.

ವಿವೋ ಸಂಸ್ಥೆಯ ಈ ಮೊಬೈಲ್‌ ಫುಲ್‌ ಡಿಸ್ಕೌಂಟ್‌ನಲ್ಲಿ ಲಭ್ಯ!

ವಿವೋ T2 5G ಸ್ಮಾರ್ಟ್‌ಫೋನ್‌ 4,050 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್‌ಚಾರ್ಜ್ ಚಾರ್ಜಿಂಗ್ ಸೌಲಭ್ಯವನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡ್‌ನೈಟ್ ಬ್ಲೂ ಮತ್ತು ಸನ್‌ಶೈನ್ ಗೋಲ್ಡ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿವೋ T2 5G ಫೀಚರ್ಸ್‌ ಹೀಗಿವೆ : ವಿವೋ T2 5G ಸ್ಮಾರ್ಟ್‌ಫೋನ್‌ 6.38 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಇದರೊಂದಿಗೆ 8GB ವರೆಗೆ ವರ್ಚುವಲ್ RAM ಅನ್ನು ಸಹ ನೀಡಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕಲ್ಪಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಪೋರ್ಟ್ರೇಟ್, ಮೈಕ್ರೋ, ಪನೋರಮಾ, ಸ್ಲೋ ಮೋಷನ್, ಡ್ಯುಯಲ್ ವ್ಯೂ ವೀಡಿಯೋ ಮತ್ತು ಡಬಲ್ ಎಕ್ಸ್‌ಪೋಸರ್ ಅನ್ನು ಬೆಂಬಲಿಸಲಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ, ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಭಾರತದಲ್ಲಿ ವಿವೋ T2 ಸರಣಿಯ ಬೆಲೆ ಮತ್ತು ಲಭ್ಯತೆ ಭಾರತದಲ್ಲಿ ವಿವೋ T2 5G ಸ್ಮಾರ್ಟ್‌ಫೋನ್‌ 6 GB RAM + 128 GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 18,999 ರೂ. ಬೆಲೆಯನ್ನು ಹೊಂದಿದೆ. ಇದರ 8 GB + 128 GB ರೂಪಾಂತರದ ಆಯ್ಕೆಯು 20,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಆಯ್ದ ಬ್ಯಾಂಕ್‌ಗಳಿಂದ ಕೆಲವು ರಿಯಾಯಿತಿ ಕೊಡುಗೆ ಸಹ ಲಭ್ಯವಾಗಲಿದೆ.

ಹಾಗೆಯೇ ಈ ವಿವೋ T2x 5G ಸ್ಮಾರ್ಟ್‌ಫೋನ್‌ ಗೋಲ್ಡ್, ಗ್ಲಿಮ್ಮರ್ ಬ್ಲ್ಯಾಕ್ ಮತ್ತು ಮೆರೈನ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ಸ್ಟೋರ್‌ಗಳ ಮೂಲಕ ಖರೀದಿಸಬಹುದಾಗಿದೆ.

Best Mobiles in India

English summary
Vivo T2 5G available at attractive price on Flipkart. details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+