ವಿವೋದ ಈ ಜನಪ್ರಿಯ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರಿ ಇಳಿಕೆ! ಸೀಮಿತ ಅವಧಿಗೆ ಮಾತ್ರ!
ವಿವೋ ಸ್ಮಾರ್ಟ್‌ಫೋನ್ ಖರೀದಿಸಬೇಕೆಂದುಕೊಂಡವರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ವಿವೋ ಇದೇ ವರ್ಷ ಭಾರತದಲ್ಲಿ ಅನಾವರಣಗೊಳಿಸಿದ್ದ ವಿವೋ T2 5G ಸ್ಮಾರ್ಟ್‌ಫೋನ್ ಬೆಲೆಯನ್ನು ಇಳಿಕೆ ಮಾಡಿದೆ. ಇದರಿಂದ ವಿವೋ T2 5G ಫೋನ್ ಅನ್ನು ಕಡಿಮೆ ಬೆಲೆಯಲ್ಲಿ ಖರೀದಿಸುವುದಕ್ಕೆ ಒಳ್ಳೆಯ ಅವಕಾಶ ಸಿಕ್ಕಿದೆ.
ಹೌದು, ವಿವೋ T2 5G ಸ್ಮಾರ್ಟ್‌ಫೋನ್ ಬೆಲೆ ಕಡಿತವಾಗಿದ್ದು, ಕೈಗೆಟಕುವ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನಿನ 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳೆರಡರಲ್ಲೂ ಕೂಡ ಬೆಲೆ ಕಡಿತವನ್ನು ಮಾಡಲಾಗಿದೆ. ಹಾಗಾದ್ರೆ ವಿವೋ T2 5G ಸ್ಮಾರ್ಟ್‌ಫೋನ್ ಬೆಲೆ ಎಷ್ಟು ಕಡಿತವಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ T2 5G ಫೋನ್ ಬೆಲೆ ಎಷ್ಟು ಕಡಿತವಾಗಿದೆ?
ವಿವೋ T2 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ 2,000ರೂ.ಗಳಷ್ಟು ತಾತ್ಕಾಲಿಕ ಬೆಲೆ ಕಡಿತವನ್ನು ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ನ 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸ್ಟೋರೇಜ್ ವೇರಿಯೆಂಟ್ ಎರಡು ಆಯ್ಕೆಗಳ ಮೇಲೆ ಬೆಲೆ ಕಡಿತವನ್ನು ಪಡೆದಿದೆ. ಆದರಿಂದ ಇವುಗಳ ಬೆಲೆ ಕ್ರಮವಾಗಿ 18,999 ಮತ್ತು 20,999 ರೂ.ಗಳಿಂದ 16,999ರೂ ಮತ್ತು 18,999ರೂ ಗಳಿಗೆ ಇಳಿಕೆಯಾಗಿದೆ.
ವಿವೋ T2 5G ಸ್ಮಾರ್ಟ್‌ಫೋನ್ ಅನ್ನು ಇಂಡಸ್‌ಇಂಡ್ ಬ್ಯಾಂಕ್, ಯೆಸ್ ಬ್ಯಾಂಕ್, ಫೆಡರಲ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಕಾರ್ಡ್‌ಗಳನ್ನು ಬಳಸುವ ಗ್ರಾಹಕರಿಗೆ 1,500ರೂಗಳ ತ್ವರಿತ ರಿಯಾಯಿತಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಮೇಲಿನ ಬೆಲೆ ಕಡಿತವೂ ಫ್ಲಿಪ್‌ಕಾರ್ಟ್, ವಿವೋದ ಆನ್‌ಲೈನ್ ಸ್ಟೋರ್ ಮತ್ತು ರಿಟೇಲ್ ಔಟ್‌ಲೆಟ್‌ಗಳ ಮೂಲಕ ಡಿಸೆಂಬರ್ 31 ರವರೆಗೆ ಲಭ್ಯವಾಗಲಿದೆ.

ವಿವೋ T2 5G ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿದೆ?
ವಿವೋ T2 5G ಸ್ಮಾರ್ಟ್‌ಫೋನ್ 6.38 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400×1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹಾಗೂ 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇ 413PPI ನ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.
ವಿವೋ T2 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ವಿವೋ T2 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟೌಚ್ OS 13ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶವನ್ನು ನೀಡಲಾಗಿದೆ.

ವಿವೋ T2 5G ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ವಿವೋ T2 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ವಿವೋ T2 5G ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ವಿವೋ T2 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು, 25 ನಿಮಿಷಗಳಲ್ಲಿ 50% ವರೆಗೆ ಚಾರ್ಜಿಂಗ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಹಾಗೂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಪ್ಲಾಸ್ಟಿಕ್ ಫ್ರೇಮ್, ಪ್ಲಾಸ್ಟಿಕ್ ಬ್ಯಾಕ್ ಅನ್ನು ಹೊಂದಿದೆ.


Click it and Unblock the Notifications








