Home
ಸುದ್ದಿಜಾಲ

ಭಾರತದಲ್ಲಿ ವಿವೋ T2 ಸರಣಿ ಬಿಡುಗಡೆ!..ಅತ್ಯಾಕರ್ಷಕ ಕ್ಯಾಮೆರಾ ಫೀಚರ್ಸ್‌!

ಸೆಲ್ಫಿ ಪ್ರಿಯರ ನೆಚ್ಚಿನ ಸ್ಮಾರ್ಟ್‌ಫೋನ್‌ಗಳಲ್ಲಿ ವಿವೋ ನೆಚ್ಚಿನ ಆಯ್ಕೆಯಾಗಿದೆ. ಇದಕ್ಕೆ ತಕ್ಕಂತೆ ವಿವೋ ಕಂಪೆನಿ ಕೂಡ ಹಲವು ಆಕರ್ಷಕ ಕ್ಯಾಮೆರಾ ಕೇಂದ್ರಿತ ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಭಾರತದಲ್ಲಿ ತನ್ನ ಹೊಸ ವಿವೋ T2 ಸರಣಿ ಬಿಡುಗಡೆ ಮಾಡಿದೆ. ಇದರಲ್ಲಿ ವಿವೋ T2 5G ಮತ್ತು ವಿವೋ T2x 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ.

ಹೌದು, ವಿವೋ T2 5G ಮತ್ತು ವಿವೋ T2x 5G ಸ್ಮಾರ್ಟ್‌ಫೋನ್‌ಗಳು ಭಾರತಕ್ಕೆ ಎಂಟ್ರಿ ನೀಡಿವೆ. ಈ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್‌ ರಿಯತ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡದುಕೊಂಡಿವೆ. ಆದರೆ ಈ ಎರಡು ಸ್ಮಾರ್ಟ್‌ಫೋನ್‌ಗಳು ವಿಭಿನ್ನವಾದ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಹೇಗಿದೆ ಅನ್ನೊದನ್ನ ಈ ಲೇಖನದಲ್ಲ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ವಿವೋ T2 ಸರಣಿ ಬಿಡುಗಡೆ!..ಅತ್ಯಾಕರ್ಷಕ ಕ್ಯಾಮೆರಾ ಫೀಚರ್ಸ್‌!

ವಿವೋ T2 5G ಫೀಚರ್ಸ್‌ ಹೇಗಿದೆ?

ವಿವೋ T2 5G ಸ್ಮಾರ್ಟ್‌ಫೋನ್‌ 6.38-ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 8GB ವರೆಗೆ ವರ್ಚುವಲ್ RAM ಅನ್ನು ಸಹ ನೀಡಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕಲ್ಪಿಸಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಪೋರ್ಟ್ರೇಟ್, ಮೈಕ್ರೋ, ಪನೋರಮಾ, ಸ್ಲೋ ಮೋಷನ್, ಡ್ಯುಯಲ್ ವ್ಯೂ ವೀಡಿಯೋ ಮತ್ತು ಡಬಲ್ ಎಕ್ಸ್‌ಪೋಸರ್ ಅನ್ನು ಬೆಂಬಲಿಸಲಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ, ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಭಾರತದಲ್ಲಿ ವಿವೋ T2 ಸರಣಿ ಬಿಡುಗಡೆ!..ಅತ್ಯಾಕರ್ಷಕ ಕ್ಯಾಮೆರಾ ಫೀಚರ್ಸ್‌!

ವಿವೋ T2x 5G ಫೀಚರ್ಸ್‌ ಹೇಗಿದೆ?

ವಿವೋ T2x 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಿದೆ. ಈ ಸ್ಮಾರ್ಟ್‌ಫೋನ್‌ RAM 3.0 ಫೀಚರ್ಸ್‌ ಅನ್ನು ಕೂಡ ಪಡೆದಿದೆ.

ವಿವೋ T2x 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿದೆ.

ಭಾರತದಲ್ಲಿ ವಿವೋ T2 ಸರಣಿ ಬಿಡುಗಡೆ!..ಅತ್ಯಾಕರ್ಷಕ ಕ್ಯಾಮೆರಾ ಫೀಚರ್ಸ್‌!

ಭಾರತದಲ್ಲಿ ವಿವೋ T2 ಸರಣಿಯ ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ T2 5G ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 18,999ರೂ. ಬೆಲೆಯನ್ನು ಹೊಂದಿದೆ. ಇದರ 8GB + 128GB ರೂಪಾಂತರದ ಆಯ್ಕೆಯು 20,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದು ಏಪ್ರಿಲ್ 18 ರಿಂದ ನೈಟ್ರೋ ಬ್ಲೇಜ್ ಮತ್ತು ವೆಲಾಸಿಟಿ ವೇವ್ ಶೇಡ್‌ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.

ಇನ್ನು ವಿವೋ T2x 5G ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ ಮಾದರಿಗೆ 12,999 ರೂ. ಬೆಲೆ ಹೊಂದಿದೆ. ಅಲ್ಲದೆ 6GB + 128GB ರೂಪಾಂತರದ ಆಯ್ಕೆಯು 13,999ರೂ. ಬೆಲೆಯಲ್ಲಿ ಬರಲಿದೆ. ಇದು ಏಪ್ರಿಲ್ 21 ರಿಂದ ಅರೋರಾ ಗೋಲ್ಡ್, ಗ್ಲಿಮ್ಮರ್ ಬ್ಲ್ಯಾಕ್ ಮತ್ತು ಮೆರೈನ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇನ್ನು ಈ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಅಧಿಕೃತ ಆನ್‌ಲೈನ್ ಸ್ಟೋರ್, ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿಸಬಹುದಾಗಿದೆ.

Best Mobiles in India

English summary
Vivo T2 5G is powered by a Snapdragon 695 5G SoC, while the Vivo T2x 5G has a MediaTek Dimensity 6020 under the hood.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+