Home
ಸುದ್ದಿಜಾಲ

ಹೊಸ ವಿವೋ ಫೋನ್‌ ಖರೀದಿಸುವ ಗ್ರಾಹಕರಿಗೆ ಮತ್ತೆ ಸಿಹಿಸುದ್ದಿ!

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಇದೀಗ ರಿಪಬ್ಲಿಕ್ ಡೇ ಸೇಲ್‌ (Republic Day Sale) ಮಾರಾಟ ಮೇಳವನ್ನು ಆಯೋಜಿಸಿದೆ. ಈ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳು ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಆ ಪೈಕಿ ವಿವೋ T2 ಪ್ರೊ 5G ಮೊಬೈಲ್‌ ಸಖತ್ ಡಿಸ್ಕೌಂಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಇ ಕಾಮರ್ಸ್‌ ದಿಗ್ಗಜ ಫ್ಲಿಪ್‌ಕಾರ್ಟ್‌ ತಾಣವು ರಿಪಬ್ಲಿಕ್ ಡೇ ಸೇಲ್‌ ಶುರು ಮಾಡಿದೆ. ಈ ಮೇಳದಲ್ಲಿ ವಿವೋ T2 ಪ್ರೊ 5G (vivo T2 Pro 5G) ಮೊಬೈಲ್‌ ಬೆಲೆಯಲ್ಲಿ ಶೇ. 11% ರಷ್ಟು ಆಕರ್ಷಕ ರಿಯಾಯಿತಿ ಪಡೆದಿದೆ. 8 GB RAM + 256 GB ಸ್ಟೋರೇಜ್‌ ವೇರಿಯಂಟ್‌ 26,999ರೂ. ಗಳ ಪ್ರೈಸ್‌ಟ್ಯಾಗ್‌ ನಲ್ಲಿ ಲಭ್ಯ ಇದೆ. ಆದರೆ ಇದೀಗ ಆಫರ್‌ನಲ್ಲಿ ಈ ಫೋನ್‌ 23,999ರೂ. ಗಳಿಗೆ ಖರೀದಿಗೆ ಲಭ್ಯ ಇದೆ.

ಹೊಸ ವಿವೋ ಫೋನ್‌ ಖರೀದಿಸುವ ಗ್ರಾಹಕರಿಗೆ ಮತ್ತೆ ಸಿಹಿಸುದ್ದಿ!

ವಿವೋ T2 ಪ್ರೊ 5G ಮೊಬೈಲ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 7200 ಚಿಪ್‌ಸೆಟ್ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 13 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ ವಿವೋ T2 ಪ್ರೊ ಫೋನಿನ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ವಿವೋ T2 ಪ್ರೊ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T2 ಪ್ರೊ 5G ಫೋನಿನ ಫೀಚರ್ಸ್‌

ವಿವೋ T2 ಪ್ರೊ 5G ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಮಾದರಿಯ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, 2400 × 1080 ಪಿಕ್ಸಲ್‌ ರೆಸಲ್ಯೂಶನ್‌ ಆಯ್ಕೆ ಹೊಂದಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಮತ್ತು 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಅನ್ನು ಇದು ಪಡೆದುಕೊಂಡಿದ್ದು, ಪ್ರತಿ ಇಂಚಿನ ಪಿಕ್ಸಲ್‌ ಸಾಂದ್ರತೆಯು 388 ppi ಆಗಿದೆ.

ಹೊಸ ವಿವೋ ಫೋನ್‌ ಖರೀದಿಸುವ ಗ್ರಾಹಕರಿಗೆ ಮತ್ತೆ ಸಿಹಿಸುದ್ದಿ!

ವಿವೋ T2 ಪ್ರೊ ಮೊಬೈಲ್‌ ಪ್ರೊಸೆಸರ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 7200 ಚಿಪ್‌ಸೆಟ್ ಪ್ರೊಸೆಸರ್‌ ಮೂಲಕ ಕೆಲಸ ಮಾಡಲಿದೆ. ಇದರ ಜೊತೆಗೆ ಆಂಡ್ರಾಯ್ಡ್ 13 ಅನ್ನು ಆಧರಿಸಿ ಫನ್‌ಟಚ್‌ ಓಎಸ್ 13 ಸಪೋರ್ಟ್‌ ಕೂಡಾ ಹೊಂದಿದೆ. ಇದರೊಂದಿಗೆ ಈ ಫೋನ್ 8GB + 128GB ಮತ್ತು 8GB + 256 GB ಸ್ಟೋರೇಜ್‌ನ ಎರಡು ವೇರಿಯಂಟ್‌ನಲ್ಲಿ ಲಭ್ಯ ಇದೆ.

ವಿವೋ T2 ಪ್ರೊ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನಲ್ಲಿ ಸೆಕೆಂಡರಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಮೊಬೈಲ್‌ 16 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ವಿವೋ T2 ಪ್ರೊ ಮೊಬೈಲ್‌ 4,600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 66W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ ಆಯ್ಕೆ ಸಹ ಒಳಗೊಂಡಿದ್ದು, ಬಳಕೆದಾರರಿಗೆ ವಿಶೇಷ ಭದ್ರತಾ ಫೀಚರ್ಸ್‌ ಅನ್ನು ಒದಗಿಸಲಿದೆ.

ವಿವೋ ಸಂಸ್ಥೆಯ ಈ ಮೊಬೈಲ್‌ 8GB RAM ಮತ್ತು 128GB ಸ್ಟೋರೇಜ್‌ ಮತ್ತು 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಹೊಂದಿದೆ. ಅಲ್ಲದೇ ಈ ಫೋನ್‌ ಗೋಲ್ಡ್‌ ಹಾಗೂ ಬ್ಲ್ಯಾಕ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
vivo T2 Pro 5G biggest price cut on flipkart website india. check out offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+