ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಬಹಿರಂಗ! ಫೀಚರ್ಸ್ ನಿರೀಕ್ಷೆ ಏನು?
ವಿವೋ ಕಂಪೆನಿ ಹೊಸ ಸ್ಮಾರ್ಟ್‌ಫೋನ್ ಪರಿಚಯಿಸುತ್ತಿದೆ ಎಂದರೆ ಟೆಕ್ ವಲಯದಲ್ಲಿ ಕುತೂಹಲ ಇದ್ದೆ ಇರುತ್ತದೆ. ಇದೀಗ ತನ್ನ ಮತ್ತೊಂದು ಹೊಸ ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ ಪರಿಚಯಿಸಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 22 ರಂದು ಭಾರತದಲ್ಲಿ ಬಿಡುಗಡೆ ಆಗುವುದು ಕನ್ಫರ್ಮ್ ಆಗಿದೆ.
ಹೌದು, ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ ಸೆಪ್ಟೆಂಬರ್ 22ರಂದು ಭಾರತಕ್ಕೆ ಎಂಟ್ರಿ ನೀಡಲು ಸಿದ್ಧವಾಗಿದೆ. ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮೂಲಕ ಪ್ರತ್ಯೇಕವಾಗಿ ಲಭ್ಯವಾಗಲಿದೆ. ಇನ್ನು ಸ್ಮಾರ್ಟ್‌ಫೋನ್ ಡೈಮೆನ್ಸಿಟಿ 7200 SoC 5G ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ T2 ಪ್ರೊ 5G ಡಿಸ್‌ಪ್ಲೇ ರಚನೆ
ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 90.6 % ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಒಳಗೊಂಡಿದೆ ಎನ್ನಲಾಗಿದೆ. ಇದು 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಪಡೆದುಕೊಂಡಿದೆ.
ವಿವೋ T2 ಪ್ರೊ 5G ಪ್ರೊಸೆಸರ್ ಯಾವುದು?
ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7200SoC 5G ಪ್ರೊಸೆಸರ್ ವೇಗವನ್ನು ಹೊಂದಿದೆ. ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು ಮಲ್ಟಿ-ಕೋರ್ ಪರೀಕ್ಷೆಗಳಲ್ಲಿ 1,161 ಮತ್ತು 2,625 ಅಂಕಗಳನ್ನು ಗಳಿಸಿದೆ ಎಂದು ಬಹಿರಂಗಪಡಿಸಿದೆ.
ವಿವೋ T2 ಪ್ರೊ 5G ಕ್ಯಾಮೆರಾ ಸೆಟ್‌ಅಪ್
ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ವಿವೋ T2 ಪ್ರೊ 5G ಬ್ಯಾಟರಿ ಮತ್ತು ಇತರೆ
ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ 4600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 66W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್, ಕಂಪಾಸ್, ಜಿರೋಸ್ಕೋಪ್ ಅನ್ನು ಪಡೆದುಕೊಂಡಿದೆ.
ವಿವೋ T2 ಪ್ರೊ 5G ಬೆಲೆ ಮತ್ತು ಲಭ್ಯತೆ
ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ ಭಾರತದಲ್ಲಿ 29,990ರೂ. ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಸ್ಮಾರ್ಟ್‌ಫೋನ್ ಸೆಪ್ಟೆಂಬರ್ 22 ರಂದು ಭಾರತದಲ್ಲಿ ಬಿಡುಗಡೆ ಆಗಲಿದ್ದು, ಇದರ ಫಸ್ಟ್ ಸೇಲ್ ದಿನಾಂಕ ಇನ್ನು ಕೂಡ ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಕಲರ್ ಆಯ್ಕೆಗಳಲ್ಲಿ ಬರಲಿದೆ ಅನ್ನೊದು ಕೂಡ ಇನ್ನು ಕನ್ಫರ್ಮ್ ಆಗಿಲ್ಲ. ಇದು ಫ್ಲಿಪ್‌ಕಾರ್ಟ್ ಮೂಲಕ ಸೇಲ್‌ಗೆ ಬರಲಿದೆ.


Click it and Unblock the Notifications








